Homeಚಳವಳಿಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

ಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ನಡೆದ ಹಿಂಸಾಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿ ದೇಶದೆಲ್ಲೇಡೆ ಪ್ರತಿಭಟನೆ ನಡೆದು, ರೈತರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ, ಇಡೀ ದೇಶ ದುಖಃದಲ್ಲಿದೆ. ಇದೆ ಸಮಯದಲ್ಲಿ ಪ್ರಧಾನಿ ಮೋದಿ ಯುಪಿಗೆ ಭೇಟಿ ನೀಡಿದ್ದು, 75 ವರ್ಷಗಳ ಸ್ವಾತಂತ್ರ್ಯ ಅಭಿಯಾನದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.

ಭಾರತದ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ ಕೇಂದ್ರ ಸರ್ಕಾರದ ಒಂದು ವರ್ಷದ ಅಭಿಯಾನದ ಭಾಗವಾಗಿ ನಡೆಯುತ್ತಿರುವ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉತ್ತರ ಪ್ರದೇಶದ ರಾಜಧಾನಿ ಲಕ್ನೋಗೆ ಭೇಟಿ ನೀಡಿದ್ದಾರೆ.

ಯುಪಿಯ ನಗರಾಭಿವೃದ್ಧಿ ಇಲಾಖೆಯು ಆಯೋಜಿಸಿರುವ ಮೂರು ದಿನಗಳ ನಗರ ಸಮಾವೇಶ ಕಾರ್ಯಕ್ರಮ ‘ಆಜಾದಿ@75-ನ್ಯೂ ಅರ್ಬನ್ ಇಂಡಿಯಾ: ಟ್ರಾನ್ಸ್‌ಫಾರ್ಮಿಂಗ್ ಅರ್ಬನ್ ಲ್ಯಾಂಡ್‌ಸ್ಕೇಪ್’ ಕಾನ್ಫರೆನ್ಸ್-ಕಮ್-ಎಕ್ಸ್‌ಪೋ ಉದ್ಘಾಟಿಸಿದ್ದಾರೆ.

ಭಾನುವಾರ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ರೈತರು ಮತ್ತು ಸ್ಥಳೀಯ ಪತ್ರಕರ್ತರು ಸೇರಿದಂತೆ ಎಂಟು ಜನರು ಸಾವಿಗೀಡಾಗಿದ್ದಾರೆ. ಇದಕ್ಕೆ ದೇಶದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ. ಉತ್ತರ ಪ್ರದೇಶ ನೋವಿನಲ್ಲಿದೆ ಈ ಸಮಯದಲ್ಲಿ ಪ್ರಧಾನಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿರುವುದು ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರು ರೈತರ ಹತ್ಯೆ; ನಂತರದ ಪ್ರತಿರೋಧದಲ್ಲಿ ನಾಲ್ವರ ಸಾವು

ಉತ್ತರ ಪ್ರದೇಶ ಪ್ರತಿಪಕ್ಷ ನಾಯಕ ಅಖಿಲೇಶ್ ಯಾದವ್ ಟೀಕಿಸಿದ್ದಾರೆ. “ರೈತರ ಕೊಲೆಗೆ ಉತ್ತರ ಪ್ರದೇಶ ಶೋಕದಲ್ಲಿದೆ. ಇದು ಸಂಭ್ರಮದ ಸಮಯವಲ್ಲ” ಎಂದಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪ್ರಧಾನಿಯವರ ಲಕ್ನೋ ಭೇಟಿಗೆ ವಿಡಿಯೋ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿ ಮೋದಿಯವರೆ, ನೀವು ಆಜಾದಿ ಅಮೃತ್ ಮಹೋತ್ಸವಕ್ಕಾಗಿ ಲಕ್ನೋಗೆ ಬರುತ್ತಿದ್ದೀರಿ ಎಂದು ನಾನು ಕೇಳಿದೆ. ನೀವು ಈ ವಿಡಿಯೋವನ್ನು ನೋಡಿದ್ದೀರಾ?” ಎಂದು ಪ್ರಿಯಾಂಕ ಗಾಂಧಿ ವೈರಲ್ ವಿಡಿಯೋವೊಂದನ್ನು ತಮ್ಮ ಮೊಬೈಲ್‌ನಿಂದ ಪ್ರದರ್ಶಿಸಿದ್ದಾರೆ.

“ರೈತರ ಮೇಲೆ ಕಾರು ಹರಿಸಿ ಕೊಂದ ಈ ಮನುಷ್ಯನನ್ನು ಏಕೆ ಇನ್ನೂ ಬಂಧಿಸಲಾಗಿಲ್ಲ? ಲಖಿಂಪುರ್ ಖೇರಿಗೆ ಭೇಟಿ ನೀಡಲು ಬಯಸುವ ನಮ್ಮಂತಹ ನಾಯಕರನ್ನು ಯಾವುದೇ ಎಫ್‌ಐಆರ್ ಅಥವಾ ಆದೇಶವಿಲ್ಲದೆ ಬಂಧಿಸಲಾಗಿದೆ? ಈ ಮನುಷ್ಯ ಏಕೆ ಮುಕ್ತನಾಗಿದ್ದಾನೆ ಎಂದು ತಿಳಿಯಲು ನಾನು ಬಯಸುತ್ತೇನೆ? ಎಂದು ಪ್ರಿಯಾಂಕ ಗಾಂಧಿ ವಿಡಿಯೋದಲ್ಲಿ ಹೇಳಿದ್ದಾರೆ.

ಪ್ರಧಾನಿ ಮೋದಿಯೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

 


ಇದನ್ನೂ ಓದಿ: ಹತ್ಯೆಗೀಡಾದ ರೈತ ಕುಟುಂಬಗಳ ಭೇಟಿಗೆ ಹೊರಟಿದ್ದ ಪ್ರಿಯಾಂಕ ಗಾಂಧಿ ವಶಕ್ಕೆ ಪಡೆದ ಪೊಲೀಸರು: ತೀವ್ರ ವಾಗ್ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....