Homeಕರ್ನಾಟಕಉತ್ತರ ಕನ್ನಡ| ವೈದ್ಯರ ನಿರ್ಲಕ್ಷ್ಯದಿಂದ ಹಾವು ಕಚ್ಚಿದ್ದ ಐದು ವರ್ಷದ ಬಾಲಕಿ ಸಾವು

ಉತ್ತರ ಕನ್ನಡ| ವೈದ್ಯರ ನಿರ್ಲಕ್ಷ್ಯದಿಂದ ಹಾವು ಕಚ್ಚಿದ್ದ ಐದು ವರ್ಷದ ಬಾಲಕಿ ಸಾವು

- Advertisement -
- Advertisement -

ಹೊಸ ವರ್ಷಕ್ಕೆ ಒಂದು ದಿನ ಮೊದಲು (2024 ಡಿಸೆಂಬರ್ 31) ಉತ್ತರ ಕನ್ನಡ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯೊಬ್ಬಳು ವೈದ್ಯಕೀಯ ನಿರ್ಲಕ್ಷ್ಯದಿಂದ ದುರಂತವಾಗಿ ಸಾವನ್ನಪ್ಪಿದ್ದಾಳೆ. ಮುಂಡಗೋಡ ಪಟ್ಟಣದ ನಿವಾಸಿ ಮಯೂರಿ ಸುರೇಶ್ ಎಂಬುವವರಿಗೆ ಹಾವು ಕಚ್ಚಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯವರು ಸಕಾಲದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಆಕೆಯನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಸಾಗಿಸುವಂತೆ ಒತ್ತಾಯಿಸಿದರು. ಮಾರ್ಗಮಧ್ಯೆ ಮಯೂರಿ ಮೃತಪಟ್ಟಿದ್ದು, ಆಕೆಯ ಕುಟುಂಬವು ತಾಲೂಕು ಆಸ್ಪತ್ರೆಯ ವಿರುದ್ಧ ಪೊಲೀಸ್ ದೂರು ದಾಖಲಿಸಲು ಮುಂದಾಗಿದ್ದಾರೆ, ಇದು ಸಂಪೂರ್ಣ ನಿರ್ಲಕ್ಷ್ಯ ಎಂದು ಆರೋಪಿಸಿದೆ.

ವಿವರಗಳ ಪ್ರಕಾರ, ಸ್ಥಳೀಯ ಅಂಗನವಾಡಿಯಲ್ಲಿದ್ದ ಮಯೂರಿ ಬೆಳಗ್ಗೆ 10 ಗಂಟೆ ಸುಮಾರಿಗೆ ಬಯಲಿನಲ್ಲಿ ಮೂತ್ರ ವಿಸರ್ಜನೆಗೆ ಹೋದಾಗ ಹಾವು ಕಚ್ಚಿದೆ. ಅಂಗನವಾಡಿಯಿಂದ ಸುಮಾರು 1.5 ಕಿ.ಮೀ ದೂರದಲ್ಲಿರುವ ಮುಂಡಗೋಡಿನ ತಾಲೂಕು ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಆಸ್ಪತ್ರೆಗೆ ತೆರಳಿದ ಬಳಿಕ ಸುಮಾರು ಅರ್ಧ ಗಂಟೆ ಕಾಲ ವೈದ್ಯರು ಮಯೂರಿಗೆ ಚಿಕಿತ್ಸೆ ಆರಂಭಿಸಲಿಲ್ಲ. ನಂತರ, ಅವರು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ (ಕೆಎಂಸಿಆರ್‌ಐ) ಕರೆದೊಯ್ಯಬೇಕೆಂದು ಹೇಳಿದ್ದಾರೆ. ಅಂದರೆ ರಸ್ತೆ ಮೂಲಕ ಒಂದೂವರೆ ಗಂಟೆ ಪ್ರಯಾಣ ಮಾಡಲು ಸೂಚಿಸಿದ್ದಾರೆ.

ಸಾವಿಗೆ ಆಕ್ರೋಶ ವ್ಯಕ್ತಪಡಿಸಿದ ಪಟ್ಟಣದ ಸುಮಾರು ನೂರು ಕಾರ್ಯಕರ್ತರು ಹಾಗೂ ನಿವಾಸಿಗಳು, ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ತಾಲೂಕು ಆಸ್ಪತ್ರೆಯಲ್ಲಿ ಹಾವು ಕಚ್ಚಿದಾಗ ಬಳಸುವ ಔಷದ ಏಕೆ ಇರಲಿಲ್ಲ? ಆಕೆಯನ್ನು ಅಲ್ಲಿ ಇಷ್ಟು ಹೊತ್ತು ಕಾಯುವಂತೆ ಮಾಡಿದ್ದು ಯಾಕೆ? ಹುಬ್ಬಳ್ಳಿಗೆ ತೆರಳುವ ಮಾರ್ಗ ಮಧ್ಯೆ ಆಕೆ ಸಾವನ್ನಪ್ಪಿದ್ದಾಳೆ. ಬೇರೆ ಯಾವ ಮಗುವಿಗೆ ಹೀಗಾಗಬಾರದು” ಎಂದು ಸ್ಥಳೀಯರಾಧ ಮಹಾಲಕ್ಷ್ಮಿ ಹೇಳಿದರು ಎಂದು ‘ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಶೌಚಾಲಯವನ್ನು ಬಳಸಲು ಅವಕಾಶ ನೀಡದ ಅಂಗನವಾಡಿ ಸಿಬ್ಬಂದಿಯನ್ನು ಸಹ ಹೊಣೆಗಾರರನ್ನಾಗಿ ಮಾಡಬೇಕು ಎಂದು ಪ್ರತಿಭಟನಾಕಾರರು ತಹಶೀಲ್ದಾರ್‌ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 2024 ರಲ್ಲಿ, ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆಯನ್ನಾಗಿ ಮಾಡುವ ನಿರ್ಧಾರದ ನಂತರ ರಾಜ್ಯ ಸರ್ಕಾರವು ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳಾಗಿ ಗುರುತಿಸಿದೆ.

ಈ ಮಧ್ಯೆ, ಮುಂಡಗೋಡ ಆಸ್ಪತ್ರೆಯ ಮೇಲಿನ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆಯ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿರುವುದಾಗಿ ಮುಂಡಗೋಡ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ಧಾರವಾಡ | 186 ಯುವಕರಿಗೆ ಬಂದೂಕು ತರಬೇತಿ ಕೊಟ್ಟ ಶ್ರೀರಾಮಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...