Homeಕರ್ನಾಟಕಉತ್ತರ ಕನ್ನಡ| ಬಾಲಕಿ ಮೇಲೆ ಅತ್ಯಾಚಾರ; ತಲೆಮರೆಸಿಕೊಂಡ ಆರೋಪಿ ವಿಶ್ವನಾಥ್‌ ಹೆಗಡೆ

ಉತ್ತರ ಕನ್ನಡ| ಬಾಲಕಿ ಮೇಲೆ ಅತ್ಯಾಚಾರ; ತಲೆಮರೆಸಿಕೊಂಡ ಆರೋಪಿ ವಿಶ್ವನಾಥ್‌ ಹೆಗಡೆ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಳ್ಳಿಯೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಏಳನೇ ತರಗತಿ ವ್ಯಾಸಂಗ ಮುಗಿಸಿ ಬೇಸಿಗೆ ರಜೆಯ ಕಾರಣ ಮನೆಯಲ್ಲಿಯೇ ಇದ್ದ ಬಾಲಕಿ ಮೇಲೆ ವಿಶ್ವನಾಥ್‌ ಹೆಗಡೆ(40) ಎಂಬಾತ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಮಗು ತನ್ನ ತಾಯಿಗೆ ಈ ವಿಷಯವನ್ನು ತಿಳಿಸಿದ್ದು, ತಾಯಿ ಆರೋಪಿಯ ಮನೆ ಬಾಗಿಲಿಗೆ ಹೋಗಿ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

ಆರೋಪಿ ವಿಶ್ವನಾಥ್‌ ಹೆಗಡೆ, “ನಾನು ಹಾಗೇನೂ ಮಾಡಿಲ್ಲ. ನಾನೇ ಮಾಡಿದ್ದೇನೆ ಎನ್ನುವುದಕ್ಕೆ ನಿನ್ನ ಹತ್ತಿರ ಸಾಕ್ಷಿ ಇದೆಯೇ” ಎಂದು ಭಂಡತನ ಮೆರೆದಿದ್ದಾನೆ. ಬಳಿಕ ತಾಯಿ, ಮಗುವಿನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಶಿರಸಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣದಡಿ ದೂರು ನೀಡಿದ್ದಾರೆ.

ದೂರು ನೀಡಿದ ಮೂರ್ನಾಲ್ಕು ದಿನಗಳ ಬಳಿಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೂ ದೌರ್ಜನ್ಯ ಪ್ರಕರಣವೆಂದು ದೂರು ದಾಖಲಿಸಿಕೊಂಡಿದ್ದು, ದೂರುದಾರರಿಗೆ ಪೊಲೀಸರು ಎಫ್‌ಐಆರ್‌ ಪ್ರತಿಯನ್ನೂ ಕೂಡ ನೀಡದೆ ಕಳುಹಿಸಿದ್ದಾರೆ ಎನ್ನಲಾಗಿದೆ. ‌ಮಗುವನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರುವುದಾಗಿ ತಿಳಿದುಬಂದಿದೆ.

ಬುಧವಾರ ಬೆಳಿಗ್ಗೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡುವ ಕುರುಹು ತಿಳಿದ ಆರೋಪಿ ಪರಾರಿಯಾಗಿದ್ದಾನೆ. ಇಡೀ ದಿನ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾನೆಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಸಂಬಂಧ ಮಾಹಿತಿಗಾಗಿ ಪೊಲೀಸ್‌ ಠಾಣೆಗೆ ಕರೆ ಮಾಡಿದಾಗ, ಅವರು ಎಫ್‌ಐಆರ್‌ ಕಾಪಿ ಸಂಖ್ಯೆಯನ್ನು ನೀಡಿದ್ದಾರೆ. ಆ ಸಂಖ್ಯೆಯ ಅನ್ವಯ ಕಾಪಿ ಹುಡುಕಿದಾಗ ಆನ್‌ಲೈನ್‌ನಲ್ಲಿ ನಾಟ್‌ ಫೌಂಡ್‌ ಎಂದು ಕಂಡುಬರುತ್ತಿದೆ ಎಂದು ಈದಿನ.ಕಾಮ್‌ ವರದಿ ಮಾಡಿದೆ,

ಘಟನೆಗೆ ಸಂಬಂಧಿಸಿದಂತೆ ಶಿರಸಿ ಗ್ರಾಂತರ ಪೊಲೀಸ್‌ ಠಾಣೆಯನ್ನೂ ಸಂಪರ್ಕಿಸಲಾಗಿದೆ. ಆದರೆ, ಅಲ್ಲಿಯ ಸಿಬ್ಬಂದಿ ಯಾವುದೇ ರೀತಿಯ ಮಾಹಿತಿಯನ್ನು ನೀಡಿಲ್ಲ. ಬಳಿಕ ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ(ಎಸ್‌ಪಿ)ಯವರನ್ನು ಸಂಪರ್ಕಿಸಿದೆ. ಆದರೂ ಅವರು ಕರೆಗೆ ಲಭ್ಯವಾಗಿಲ್ಲ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -