Homeಮುಖಪುಟಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

ಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

- Advertisement -
- Advertisement -

ಪ್ರವಾದಿ ಮುಹಮ್ಮದ್ ಬಗ್ಗೆ ಬಿಜೆಪಿಯ ಮಾಜಿ ವಕ್ತಾರರ ಇತ್ತೀಚಿನ ಹೇಳಿಕೆಗಳನ್ನು ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಉತ್ತರ ಪ್ರದೇಶ ಸರ್ಕಾರ ಪ್ರತಿಭಟನಾಕಾರರ ಮನೆಗಳ ಮೇಲೆ ಬುಲ್ಡೋಜರ್‌ ದಾಳಿ ನಡೆಸುತ್ತಿದೆ. ಇದು ಎರಡನೇ ದಿನವೂ ಮುಂದುವರೆದಿದೆ.

ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರದಲ್ಲಿ ತೊಡಗಿದ್ದರು ಎನ್ನಲಾದ ಇಬ್ಬರು ಆರೋಪಿಗಳ ಮನೆಗಳನ್ನು ಸಹರಾನ್‌ಪುರದಲ್ಲಿ ಧ್ವಂಸಗೊಳಿಸಿದ ನಂತರ, ಇಂದು ಭಾರೀ ಪೊಲೀಸ್ ಉಪಸ್ಥಿತಿಯಲ್ಲಿ ಪ್ರಯಾಗ್‌ರಾಜ್‌ನಲ್ಲಿ ಆರೋಪಿ ರಾಜಕಾರಣಿಯ ಮನೆಯನ್ನು ಬುಲ್ಡೋಜರ್‌ಗಳು ನೆಲಸಮ ಮಾಡಿವೆ.

ಶುಕ್ರವಾರ ನಡೆದ ಹಿಂಸಾಚಾರದ ಹಿಂದಿನ “ಮಾಸ್ಟರ್‌ಮೈಂಡ್‌ಗಳಲ್ಲಿ” ಒಬ್ಬರು ಎಂದು ಪೊಲೀಸರು ಹೇಳಿಕೊಂಡಿರುವ ಪ್ರಯಾಗರಾಜ್ ಮೂಲದ ರಾಜಕಾರಣಿ, ಆರೋಪಿ ಜಾವೇದ್ ಮೊಹಮ್ಮದ್ ಅವರ ಮನೆಯ ಗೇಟ್‌ಗಳು ಮತ್ತು ಹೊರಗಿನ ಗೋಡೆಗಳನ್ನು ಬುಲ್ಡೋಜರ್‌ಗಳು ಧ್ವಂಸಗೊಳಿಸಿವೆ.

ಇದನ್ನೂ ಓದಿ: ತೆಲಂಗಾಣ: ಅವಹೇಳನಕಾರಿ ಪೋಸ್ಟ್‌ ವಿರುದ್ಧ ಭಾರೀ ಪ್ರತಿಭಟನೆ; ಲಾಠಿಚಾರ್ಜ್‌

ಪ್ರಯಾಗರಾಜ್ ಮೂಲದ ರಾಜಕಾರಣಿ, ಆರೋಪಿ ಜಾವೇದ್ ಅವರ ನಿವಾಸದ ಹೊರಗಿನ ಮನೆಯ ನೆಲ ಮತ್ತು ಮೊದಲ ಮಹಡಿಗಳಲ್ಲಿ ಅಕ್ರಮ ನಿರ್ಮಾಣದ ಕುರಿತು ಸೂಚನೆ ನೀಡಿದ ಕೆಲವೇ ಗಂಟೆಗಳ ಒಳಗೆ ಪುರಸಭೆಯ ಅಧಿಕಾರಿಗಳು ಕಟ್ಟಡ ಕೆಡವಲಾಗಿದೆ.

ನಿನ್ನೆ ತಡರಾತ್ರಿ ರಾಜಕಾರಣಿಯ ಮನೆಯ ಹೊರಗೆ ಹಾಕಲಾದ ನೋಟಿಸ್‌ನಲ್ಲಿ ಜಾವೇದ್ ಅವರು ಈ ವರ್ಷದ ಮೇ ತಿಂಗಳಲ್ಲಿ ನೀಡಲಾಗಿದ್ದ ನೋಟಿಸ್‌ಗೆ ಉತ್ತರಿಸಲು ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ. ಆ ನೋಟಿಸ್ ಪ್ರಕಾರ, ಜೂನ್ 9 ರೊಳಗೆ ಅಕ್ರಮ ನಿರ್ಮಾಣವನ್ನು ನೆಲಸಮಗೊಳಿಸುವಂತೆ ಜಾವೇದ್‌ಗೆ ತಿಳಿಸಲಾಯಿತು, ವಿಫಲವಾದರೆ ಜೂನ್ 12 ರಂದು ಬೆಳಿಗ್ಗೆ 11 ಗಂಟೆಯೊಳಗೆ ಮನೆಯನ್ನು ಖಾಲಿ ಮಾಡುವಂತೆ ಅಂತಿಮ ಸೂಚನೆಯನ್ನು ಕಳುಹಿಸಲಾಗಿದೆ.

ಶನಿವಾರ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ಅವರ ನಿವಾಸಗಳಲ್ಲಿ ಪೊಲೀಸರು ಮತ್ತು ಮುನ್ಸಿಪಲ್ ತಂಡಗಳು ಕಾಣಿಸಿಕೊಂಡು, ಅವರ ಮನೆಗಳ ಗೇಟ್‌ಗಳು ಮತ್ತು ಹೊರಗಿನ ಗೋಡೆಗಳನ್ನು ಅಕ್ರಮ ನಿರ್ಮಾಣಗಳು ಎಂದು ಹೇಳಿ ಮನೆಗಳ ಭಾಗಗಳನ್ನು ಕೆಡವಿದ್ದರು.


ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಟ್ಡಡಗಳನ್ನು ಹೊಡೆದುಹಾಕುವುದರಿಂದ ಅಪಾರ ಸೊತ್ತು ಹಾಳಾಗುತ್ತದೆ. ಇಂತ ಕಟ್ಟಡಗಳನ್ನು ಆಳ್ವಿಕೆ ತನ್ನ ತೆಕ್ಕೆಗೆ ಪಡೆಯಬಹುದಾದ ಬಗೆಗೆ ಹೆಜ್ಜೆಇಡಲಿ.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...