Homeಮುಖಪುಟಉತ್ತರ ಪ್ರದೇಶ: ಉಪ ಮುಖ್ಯಮಂತ್ರಿಗೆ ಘೇರಾವ್ ಹಾಕಿ, ಸ್ವ ಕ್ಷೇತ್ರದಿಂದ ವಾಪಸ್ ಕಳುಹಿಸಿದ ಮಹಿಳೆಯರು

ಉತ್ತರ ಪ್ರದೇಶ: ಉಪ ಮುಖ್ಯಮಂತ್ರಿಗೆ ಘೇರಾವ್ ಹಾಕಿ, ಸ್ವ ಕ್ಷೇತ್ರದಿಂದ ವಾಪಸ್ ಕಳುಹಿಸಿದ ಮಹಿಳೆಯರು

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಬಿಜೆಪಿ ಶಾಸಕ ಮತ್ತು ಮುಜಾಫರ್‌ನಗರದ ಖತೌಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿಕ್ರಮ್ ಸೈನಿ ವಿರುದ್ಧ ಅಸಮಾಧಾನ ಹೊರ ಹಾಕಿದ ಗ್ರಾಮಸ್ಥರು, ಶಾಸಕರನ್ನು ಇಲ್ಲಿಂದ ಹೊರಟು ಹೋಗುವಂತೆ ಬೆನ್ನಟ್ಟಿ ಓಡಿಸಿದ್ದ ಘಟನೆ ನಡೆದಿತ್ತು. ಈಗ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಮಹಿಳೆಯರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಮ್ಮ ವಿಧಾನಸಭಾ ಕ್ಷೇತ್ರವಾದ ಸಿರಥುದಲ್ಲಿ ಪ್ರಚಾರಕ್ಕೆ ಹೋದಾಗ ಸ್ಥಳೀಯರಿಂದ ವಿರೋಧ ಎದುರಿಸಿದ್ದಾರೆ. ಶನಿವಾರ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ವಿರುದ್ಧ ಘೋಷಣೆಗಳನ್ನು ಕೂಗಲಾಗುತ್ತಿದೆ. ಮಹಿಳೆಯರು ಹೆಚ್ಚಾಇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ . ಈ ವೇಳೆ ಕೇಶವ್ ಪ್ರಸಾದ್ ಮೌರ್ಯ ಮಹಿಳೆಯರಿಗೆ ಮೌನವಾಗಿರುವಂತೆ ಬೆರಳು ಬಾಯಿಗಿಡಿದು ಸನ್ನೆ ಮಾಡಿ ಕೇಳುತ್ತಿದ್ದಾರೆ. ಆದರೂ ಕೂಡ ಜನರು ಅವರ ವಿರುದ್ಧ ಘೋಷಣೆ ಕೂಗಿ ಸ್ಥಳದಿಂದ ವಾಪಸ್ ಕಳುಹಿಸಿದ್ದಾರೆ.

ಇದನ್ನೂ ಓದಿ: ‘ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 2 ಸಿಎಂ, 3 ಡಿಸಿಎಂ’: ಅಸಾದುದ್ದೀನ್ ಓವೈಸಿ

ಸ್ಥಳೀಯ ಸುದ್ದಿ ಮಾಧ್ಯಮಗಳ ವರದಿಗಳ ಪ್ರಕಾರ, ಕೇಶವ್ ಪ್ರಸಾದ್ ಮೌರ್ಯ ಸಿರಥು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ನಂತರ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಸಿರಥು ವಿಧಾನಸಭಾ ಕ್ಷೇತ್ರದ ಗುಲಾಮಿಪುರ ಗ್ರಾಮದಲ್ಲಿ ಮಹಿಳೆಯರಿಂದ ಪ್ರತಿಭಟನೆ ಎದುರಿಸಿದ್ದಾರೆ. ಸಿರಥುವಿನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆಯ ಪತಿ, ಕೇಶವ್ ಪ್ರಸಾದ್ ಮೌರ್ಯ ಅವರ ಆಪ್ತ ರಾಜೀವ್ ಮೌರ್ಯ ನಾಪತ್ತೆಯಾಗಿದ್ದು, ಈ ವಿಚಾರದಲ್ಲಿ ಪೊಲೀಸರ ನಿರ್ಲಕ್ಷ್ಯದಿಂದ ಮಹಿಳೆಯರು ಕೋಪಗೊಂಡಿದ್ದಾರೆ ಎನ್ನಲಾಗಿದೆ.

ರಾಜೀವ್ ಮೌರ್ಯ ಕಳೆದ ವಾರದಿಂದ ನಾಪತ್ತೆಯಾಗಿದ್ದಾರೆ. ರಾಜೀವ್ ಪತ್ತೆಗೆ ವಿಶೇಷ ತಂಡವನ್ನು ರಚಿಸುವಂತೆ ಉಪಮುಖ್ಯಮಂತ್ರಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಪ್ರತಿಭಟನೆಯು “ಕೇಶವ್ ಪ್ರಸಾದ್ ಮೌರ್ಯ ಮತ್ತು ಉತ್ತರ ಪ್ರದೇಶ ಸರ್ಕಾರದ ಕೆಲಸದ ಬಗ್ಗೆ ಜನರ ಅಸಮಾಧಾನದ ಅಭಿವ್ಯಕ್ತಿ” ಎಂದು ಪ್ರತಿಪಕ್ಷಗಳು ಹೇಳಿದ್ದು, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಾಯಕರು ವಿಡಿಯೋ ಶೇರ್‌ ಮಾಡಿದ್ದಾರೆ. ಬಿಜೆಪಿ ಇದನ್ನು ಪ್ರತಿಪಕ್ಷಗಳ ಪ್ರಚಾರ ಎಂದು ಕರೆದಿದೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...