ಇತ್ತೀಚೆಗೆ ಉತ್ತರ ಪ್ರದೇಶದ ಬಿಜೆಪಿ ಶಾಸಕ ಮತ್ತು ಮುಜಾಫರ್‌ನಗರದ ಖತೌಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿಕ್ರಮ್ ಸೈನಿ ವಿರುದ್ಧ ಅಸಮಾಧಾನ ಹೊರ ಹಾಕಿದ ಗ್ರಾಮಸ್ಥರು, ಶಾಸಕರನ್ನು ಇಲ್ಲಿಂದ ಹೊರಟು ಹೋಗುವಂತೆ ಬೆನ್ನಟ್ಟಿ ಓಡಿಸಿದ್ದ ಘಟನೆ ನಡೆದಿತ್ತು. ಈಗ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಮಹಿಳೆಯರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಮ್ಮ ವಿಧಾನಸಭಾ ಕ್ಷೇತ್ರವಾದ ಸಿರಥುದಲ್ಲಿ ಪ್ರಚಾರಕ್ಕೆ ಹೋದಾಗ ಸ್ಥಳೀಯರಿಂದ ವಿರೋಧ ಎದುರಿಸಿದ್ದಾರೆ. ಶನಿವಾರ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ವಿರುದ್ಧ ಘೋಷಣೆಗಳನ್ನು ಕೂಗಲಾಗುತ್ತಿದೆ. ಮಹಿಳೆಯರು ಹೆಚ್ಚಾಇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ . ಈ ವೇಳೆ ಕೇಶವ್ ಪ್ರಸಾದ್ ಮೌರ್ಯ ಮಹಿಳೆಯರಿಗೆ ಮೌನವಾಗಿರುವಂತೆ ಬೆರಳು ಬಾಯಿಗಿಡಿದು ಸನ್ನೆ ಮಾಡಿ ಕೇಳುತ್ತಿದ್ದಾರೆ. ಆದರೂ ಕೂಡ ಜನರು ಅವರ ವಿರುದ್ಧ ಘೋಷಣೆ ಕೂಗಿ ಸ್ಥಳದಿಂದ ವಾಪಸ್ ಕಳುಹಿಸಿದ್ದಾರೆ.
ಇದನ್ನೂ ಓದಿ: ‘ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 2 ಸಿಎಂ, 3 ಡಿಸಿಎಂ’: ಅಸಾದುದ್ದೀನ್ ಓವೈಸಿ
Uttar Pradesh Deputy Chief Minister Keshav Prasad Maurya was driven out of his own assembly constituency, Sirathu.#आ_रही_है_कांग्रेस pic.twitter.com/m07CGfLN1B
— Gujarat Pradesh Congress Sevadal (@SevadalGJ) January 22, 2022
ಸ್ಥಳೀಯ ಸುದ್ದಿ ಮಾಧ್ಯಮಗಳ ವರದಿಗಳ ಪ್ರಕಾರ, ಕೇಶವ್ ಪ್ರಸಾದ್ ಮೌರ್ಯ ಸಿರಥು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ನಂತರ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಸಿರಥು ವಿಧಾನಸಭಾ ಕ್ಷೇತ್ರದ ಗುಲಾಮಿಪುರ ಗ್ರಾಮದಲ್ಲಿ ಮಹಿಳೆಯರಿಂದ ಪ್ರತಿಭಟನೆ ಎದುರಿಸಿದ್ದಾರೆ. ಸಿರಥುವಿನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆಯ ಪತಿ, ಕೇಶವ್ ಪ್ರಸಾದ್ ಮೌರ್ಯ ಅವರ ಆಪ್ತ ರಾಜೀವ್ ಮೌರ್ಯ ನಾಪತ್ತೆಯಾಗಿದ್ದು, ಈ ವಿಚಾರದಲ್ಲಿ ಪೊಲೀಸರ ನಿರ್ಲಕ್ಷ್ಯದಿಂದ ಮಹಿಳೆಯರು ಕೋಪಗೊಂಡಿದ್ದಾರೆ ಎನ್ನಲಾಗಿದೆ.
ರಾಜೀವ್ ಮೌರ್ಯ ಕಳೆದ ವಾರದಿಂದ ನಾಪತ್ತೆಯಾಗಿದ್ದಾರೆ. ರಾಜೀವ್ ಪತ್ತೆಗೆ ವಿಶೇಷ ತಂಡವನ್ನು ರಚಿಸುವಂತೆ ಉಪಮುಖ್ಯಮಂತ್ರಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಪ್ರತಿಭಟನೆಯು “ಕೇಶವ್ ಪ್ರಸಾದ್ ಮೌರ್ಯ ಮತ್ತು ಉತ್ತರ ಪ್ರದೇಶ ಸರ್ಕಾರದ ಕೆಲಸದ ಬಗ್ಗೆ ಜನರ ಅಸಮಾಧಾನದ ಅಭಿವ್ಯಕ್ತಿ” ಎಂದು ಪ್ರತಿಪಕ್ಷಗಳು ಹೇಳಿದ್ದು, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಾಯಕರು ವಿಡಿಯೋ ಶೇರ್ ಮಾಡಿದ್ದಾರೆ. ಬಿಜೆಪಿ ಇದನ್ನು ಪ್ರತಿಪಕ್ಷಗಳ ಪ್ರಚಾರ ಎಂದು ಕರೆದಿದೆ.
पहले ‘कुर्सी’ ख़तरे में आयी, अब #स्टूल भी ख़तरे में है। pic.twitter.com/2DB0hDdVT7
— I.P. Singh (@IPSinghSp) January 22, 2022
ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ