Homeಮುಖಪುಟಉತ್ತರ ಪ್ರದೇಶ: 17 ವರ್ಷದ ಬಾಲಕನ ಮೇಲೆ ಪೊಲೀಸ್ ದೌರ್ಜನ್ಯ ಆರೋಪ, ಬಾಲಕ ಸಾವು

ಉತ್ತರ ಪ್ರದೇಶ: 17 ವರ್ಷದ ಬಾಲಕನ ಮೇಲೆ ಪೊಲೀಸ್ ದೌರ್ಜನ್ಯ ಆರೋಪ, ಬಾಲಕ ಸಾವು

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಮೊಬೈಲ್ ಕಳ್ಳತನದ ಶಂಕೆಯಲ್ಲಿ 17 ವರ್ಷದ ಬಾಲಕನನ್ನು ಆತನ ಚಿಕ್ಕಪ್ಪ ಮತ್ತು ಮೂವರು ಪೊಲೀಸರು ಪೊಲೀಸ್ ಚೌಕಿಯೊಳಗೆ ನಿರ್ದಯವಾಗಿ ಥಳಿಸಿದ್ದು, ಹಲ್ಲೆಗೊಳಗಾದ ನಾಲ್ಕು ದಿನಗಳ ನಂತರ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಪೊಲೀಸರು ಹಲ್ಲೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಬಾಲಕನ ಕುಟುಂಬ ಆರೋಪಿಸಿದೆ. ಸದ್ಯ ಪೊಲೀಸ್ ಚೌಕಿಯ ಉಸ್ತುವಾರಿ  ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಒಬ್ಬರು ಸಬ್ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ಅಮಾನತಾಗಿದ್ದಾರೆ.

ಲಖಿಂಪುರ್‌ ಖೇರಿ ಎಸ್‌ಎಸ್‌ಪಿ ಸಂಜೀವ್ ಸುಮನ್, “ನಾವು ಪೊಲೀಸರ ವಿರುದ್ಧ ನೀಡಲಾಗಿರುವ ದೂರಿನ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ತಪ್ಪಿತಸ್ಥರೆಂದು ಕಂಡುಬಂದರೆ ಯಾರನ್ನೂ ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಕನನ್ನು ಥಳಿಸಿದ ಪೊಲೀಸ್‌!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬಾಲಕನ ಕುಟುಂಬದವರು ಹಿರಿಯ ಪೊಲೀಸರಿಗೆ ಮೃತನ ದೇಹದ ಮೇಲಿನ ಬಾಹ್ಯ ಗಾಯಗಳನ್ನು ತೋರಿಸಿದ್ದಾರೆ.

ಇತ್ತ, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬಾಲಕನ ವಿಚಾರಣೆ ನಡೆಯಿತು. ನಂತರ ಆತನನ್ನು ಬಿಡಲಾಯಿತು. ಬಾಲಕನ ಕುಟುಂಬವು ಮೊದಲು ಹಲ್ಲೆಗೆ ಆತನ ಚಿಕ್ಕಪ್ಪನನ್ನು ದೂಷಿಸಿದೆ. ಆದರೆ ನಂತರ ತಮ್ಮ ಹೇಳಿಕೆಯನ್ನು ಬದಲಾಯಿಸಿದೆ ಎಂದು ಲಖಿಂಪುರ್‌ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

‘‘ಈ ತಿಂಗಳ 17ರಂದು ಬಾಲಕನ ಚಿಕ್ಕಪ್ಪ ಬಾಲಕನ ಮೇಲೆ ಫೋನ್ ಕದ್ದಿದ್ದಾನೆ ಎಂದು ಆರೋಪಿಸಿದ್ದರು. ದೂರಿನ ಮೇರೆಗೆ 19 ರಂದು ಎರಡೂ ಕಡೆಯಿಂದ ಬಾಲಕನ ಕುಟುಂಬದವರು ಹಾಗೂ ಗ್ರಾಮದ ಮುಖಂಡರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಯಿತು. ನಂತರ ಅವರು ರಾಜಿ ಮಾಡಿಕೊಂಡರು. ಬಳಿಕ ಪೊಲೀಸ್ ಠಾಣೆಯಿಂದ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಹಿಂತಿರುಗಿದರು. ಜನವರಿ 23 ರ ಬೆಳಗ್ಗೆ ಹುಡುಗನ ತಾಯಿ 5 ರಿಂದ 6 ಜನರೊಂದಿಗೆ ಪೊಲೀಸ್ ಠಾಣೆಗೆ ಬಂದು, ಜ.20 ರಂದು ರಾತ್ರಿ ಬಾಲಕನ ಚಿಕ್ಕಪ್ಪ ಮತ್ತು ಇತರ ಕೆಲವರು ಆತನನನ್ನು ಥಳಿಸಿದ್ದಾರೆ ಎಂದು ಹೇಳಿದ್ದರು. ಅದೇ ರಾತ್ರಿ ಬಾಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಪೊಲೀಸರು ಥಳಿಸಿ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ತನಿಖೆ ನಡೆಸುತ್ತೇವೆ. ಪೊಲೀಸರೇ ಹೊಣೆಗಾರರಾಗಿದ್ದರೆ ಕ್ರಮ ಎದುರಿಸಬೇಕಾಗುತ್ತದೆ” ಎಂದು ಪೊಲೀಸ್ ಮುಖ್ಯಸ್ಥ ಸಂಜೀವ್ ಸುಮನ್ ಹೇಳಿದ್ದಾರೆ.

“ಬಾಲಕನ ಕುಟುಂಬವು ಎರಡು ದೂರುಗಳನ್ನು ದಾಖಲಿಸಿದೆ. ಆತನ ಚಿಕ್ಕಪ್ಪ ರಾಮ್ ಬಹದ್ದೂರ್ ಮತ್ತು ನೆರೆಹೊರೆಯವರಾದ ರಾಜವೀರ್ ಸಿಂಗ್ ವಿರುದ್ಧ ಐಪಿಸಿಯ ಸೆಕ್ಷನ್ 304 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ. ಎರಡನೇ ದೂರು ಸಬ್ ಇನ್ಸ್‌ಪೆಕ್ಟರ್‌ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳ ವಿರುದ್ಧವಾಗಿದೆ. ನಾವು ಪ್ರಕರಣವನ್ನು ವಿವರವಾಗಿ ತನಿಖೆ ಮಾಡುತ್ತಿದ್ದೇವೆ ಮತ್ತು ಅದರಂತೆ ಸಂಬಂಧಪಟ್ಟ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಬಾಲಕನ ಅಕ್ಕ “ಪೊಲೀಸರು ನನ್ನ ತಮ್ಮನನ್ನು ವಿಚಾರಣೆ ನಡೆಸುವಾಗ ನನ್ನ ತಾಯಿಯನ್ನು ವಾಪಸ್ ಕಳುಹಿಸಿದ್ದರು. ಬಳಿಕ ಆತನನ್ನು ಬೆಲ್ಟ್‌ಗಳಿಂದ ನಿರ್ದಯವಾಗಿ ಥಳಿಸಿದ್ದಾರೆ. ಕೆಲವು ಗಂಟೆಗಳ ನಂತರ, ನನ್ನ ಸಹೋದರನನ್ನು ಕರೆದೊಯ್ಯಲು ನಮಗೆ ಕರೆ ಬಂದಿತು. ಆದರೆ ನನ್ನ ಪೋಷಕರು ಅಲ್ಲಿಗೆ ತಲುಪಿದಾಗ, ಪೊಲೀಸರು ಮತ್ತು ನನ್ನ ಚಿಕ್ಕಪ್ಪ ತೀವ್ರವಾಗಿ ಥಳಿಸಿದ್ದಾರೆ ಎಂದು ನನ್ನ ತಮ್ಮ ತಿಳಿಸಿದ್ದಾನೆ. ಆತನನ್ನು ಮನೆಗ ಎಕರೆತಂದಿದ್ದೇವು ಆದರೆ, ಅವನ ಸ್ಥಿತಿ ತೀರಾ ಹದಗೆಟ್ಟಾಗ ಪಾಲಿಯಾ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...