Homeಮುಖಪುಟಉತ್ತರಖಂಡ್: ಕಮರಿಗೆ ಬಸ್‌ ಉರುಳಿ 25 ಮಂದಿ ದುರ್ಮರಣ

ಉತ್ತರಖಂಡ್: ಕಮರಿಗೆ ಬಸ್‌ ಉರುಳಿ 25 ಮಂದಿ ದುರ್ಮರಣ

ಒಂದು ವಾರದ ಅಂತರದೊಳಗೆ ಮತ್ತೊಂದು ದುರಂತ ಘಟನೆಗೆ ದೇಶ ಸಾಕ್ಷಿಯಾಗಿದೆ.

- Advertisement -
- Advertisement -

ಅಕ್ಟೋಬರ್ 4ರ ಸಂಜೆ ಉತ್ತರಾಖಂಡ್‌ನ ಪೌರಿ ಜಿಲ್ಲೆಯ ಬಿರೋನ್‌ಖಾಲ್ ಪ್ರದೇಶದಲ್ಲಿನ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಸುಮಾರು 45-50 ಸದಸ್ಯರು ಇದ್ದ ಬಸ್ ಕಮರಿಗೆ ಉರುಳಿದ ಪರಿಣಾಮ 25 ಜನರು ಸಾವನ್ನಪ್ಪಿದ್ದಾರೆ.

ಬಸ್ ಲಾಲ್‌ಧಾಂಗ್‌ನಿಂದ ಬಿರೋನ್‌ಖಾಲ್‌ನ ಹಳ್ಳಿಯೊಂದಕ್ಕೆ ತೆರಳುತ್ತಿದ್ದಾಗ ಸಿಮ್ರಿ ತಿರುವಿನ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಧೂಮಾಕೋಟ್‌ನ ಬಿರೋಖಾಲ್ ಪ್ರದೇಶದಲ್ಲಿ ನಿನ್ನೆ ರಾತ್ರಿ ನಡೆದ ಪೌರಿ ಗರ್ವಾಲ್ ಬಸ್ ಅಪಘಾತದಲ್ಲಿ 25 ಜನರು ಸಾವನ್ನಪ್ಪಿದ್ದಾರೆ. ಪೊಲೀಸ್ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್‌) ರಾತ್ರೋರಾತ್ರಿ ಕಾರ್ಯಾರಣೆ ನಡೆಸಿ 21 ಜನರನ್ನು ರಕ್ಷಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ” ಎಂದು ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾತ್ರಿ 7.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೆಳಕಿನ ಅಭಾವದಿಂದಾಗಿ ಆರಂಭಿಕ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು.

“ಅಪಘಾತದ ಸ್ಥಳದಲ್ಲಿ ಯಾವುದೇ ವಿದ್ಯುತ್‌ ದೀಪಗಳು ಇರಲಿಲ್ಲ. ಬಸ್‌ನೊಳಗೆ ಸಿಲುಕಿರುವವರನ್ನು ರಕ್ಷಿಸಲು ಗ್ರಾಮಸ್ಥರು ತಮ್ಮ ಮೊಬೈಲ್ ಫೋನ್‌ಗಳಲ್ಲಿನ ಬ್ಯಾಟರಿ ದೀಪಗಳ ಸಹಾಯದಿಂದ ಹರಸಾಹಸ ಪಡುತ್ತಿದ್ದರು” ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಘಟನೆಯ ಮೇಲ್ವಿಚಾರಣೆಗಾಗಿ ಎಸ್‌ಇಒಸಿ ನಿಯಂತ್ರಣ ಕೊಠಡಿಯನ್ನು ತಲುಪಿದ್ದಾರೆ.

“ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಅಪಘಾತದ ಸ್ಥಳಕ್ಕೆ ಧಾವಿಸಲಾಗಿದೆ. ನಾವು ಜನರನ್ನು ರಕ್ಷಿಸಲು ಮತ್ತು ಅವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದೇವೆ. ಸ್ಥಳೀಯ ಗ್ರಾಮಸ್ಥರು ಪ್ರಯತ್ನದಲ್ಲಿ ಸಹಾಯ ಮಾಡುತ್ತಿದ್ದಾರೆ” ಎಂದು ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.

ಒಂದು ವಾರದ ಅಂತರದೊಳಗೆ ಎರಡು ದುರಂತ ಘಟನೆಗಳಿಗೆ ದೇಶ ಸಾಕ್ಷಿಯಾಗಿದೆ. ಕಳೆದ ಶನಿವಾರ ಉತ್ತರ ಪ್ರದೇಶದಲ್ಲಿ ಘಟಿಸಿದ ಅಪಘಾತದಲ್ಲಿ 26 ಜನರು ಸಾವನ್ನಪ್ಪಿದ್ದರು.

ಇತ್ತೀಚೆಗೆ ದುರಂತಕ್ಕೆ ಸಾಕ್ಷಿಯಾಗಿದ್ದ ಉತ್ತರಪ್ರದೇಶ

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಹಳ್ಳಿಯೊಂದರ ಬಳಿ ಕಳೆದ ಶನಿವಾರ ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 26 ಜನರು ಸಾವನ್ನಪ್ಪಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿರಿ: ‘ಕಾಂತಾರ’ ವಿಮರ್ಶೆ: ಭೂತಾರಾಧನೆಯ ಆಚೆ-ಈಚೆ ಒಂದಿಷ್ಟು…

ಸಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭದೇನಾ ಗ್ರಾಮದ ಬಳಿ ಘಟನೆ ನಡೆದಿತ್ತು. ಟ್ರಾಕ್ಟರ್-ಟ್ರಾಲಿಯಲ್ಲಿ ಸುಮಾರು 50 ಜನರಿದ್ದರು. ಇವರು ಫತೇಪುರ್‌ನ ಚಂದ್ರಿಕಾ ದೇವಿ ದೇವಸ್ಥಾನದಲ್ಲಿ “ಮುಂಡನ್” ಸಮಾರಂಭದಲ್ಲಿ ಭಾಗವಹಿಸಿದ ನಂತರ ಘಟಂಪುರಕ್ಕೆ ತೆರಳುತ್ತಿದ್ದರು. ಆಗ ಅವಘಡ ನಡೆದಿದ್ದು ಹತ್ತಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

“ಕಾನ್ಪುರದಲ್ಲಿ ನಡೆದ ಟ್ರಾಕ್ಟರ್-ಟ್ರಾಲಿ ಅಪಘಾತದಿಂದ ದುಃಖಿತನಾಗಿರುವೆ. ಗಾಯಗೊಂಡವರ ಉಳಿವಿಗಾಗಿ ಪ್ರಾರ್ಥಿಸುವೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ” ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದರು.

ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ.ಗಳನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ನೀಡಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿಯು (ಪಿಎಂಒ) ತಿಳಿಸಿತ್ತು. ಗಾಯಗೊಂಡವರಿಗೆ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನಿ ಪ್ರತಿಕ್ರಿಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...