Homeಮುಖಪುಟಉತ್ತರಾಖಂಡ: ಸುರಂಗದೊಳಗೆ ಸಿಲುಕಿರುವ 40 ಕಾರ್ಮಿಕರು ಸುರಕ್ಷಿತ

ಉತ್ತರಾಖಂಡ: ಸುರಂಗದೊಳಗೆ ಸಿಲುಕಿರುವ 40 ಕಾರ್ಮಿಕರು ಸುರಕ್ಷಿತ

- Advertisement -
- Advertisement -

ಭಾನುವಾರ ಬೆಳಗ್ಗೆಯಿಂದ ಉತ್ತರಾಖಂಡದ ಸುರಂಗದೊಳಗೆ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ಪರಿಹಾರ ಪಡೆ (ಎಸ್‌ಡಿಆರ್‌ಎಫ್) ಮತ್ತು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಉತ್ತರಕಾಶಿ ಜಿಲ್ಲೆಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗವೊಂದು ನಿನ್ನೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಭಾಗಶಃ ಕುಸಿದಿದ್ದು, 40 ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ.

ಎಲ್ಲಾ 40 ಕಾರ್ಮಿಕರು ಸುರಕ್ಷಿತವಾಗಿದ್ದು, ಪೈಪ್ ಮೂಲಕ ಆಮ್ಲಜನಕವನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು NDTVಗೆ ತಿಳಿಸಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ, ಸಿಕ್ಕಿಬಿದ್ದ ಕಾರ್ಮಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಉತ್ತರಕಾಶಿ ವೃತ್ತಾಧಿಕಾರಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಸಿಕ್ಕಿಬಿದ್ದ ಕಾರ್ಮಿಕರೊಂದಿಗೆ ಸಂವಹನ ಸಾಧ್ಯವಾಗಿದೆ ಮತ್ತು ಅವರಿಗೆ ನೀರು ಆಹಾರ ಪದಾರ್ಥಗಳನ್ನು ಕಳುಹಿಸಲಾಗಿದೆ ಎಂದು ಕುಮಾರ್ ಹೇಳಿದರು.

ಸುರಂಗವನ್ನು ತೆರೆಯಲು ಮತ್ತು ಕಾರ್ಮಿಕರಿಗೆ ಅಲ್ಲಿಂದ ಹೊರಬರಲು ಮಾರ್ಗವನ್ನು ಸಿದ್ಧಪಡಿಸಲು ಇದುವರೆಗೆ 20 ಮೀಟರ್ ಸ್ಲ್ಯಾಬ್‌ನ್ನು ತೆಗೆದುಹಾಕಲಾಗಿದೆ ಮತ್ತು ಸುಮಾರು 35 ಮೀಟರ್ ಮುಚ್ಚಬೇಕಾಗಿದೆ ಎಂದು ಅವರು ಹೇಳಿದರು.

”ತಂಡವು ಅಗೆಯುವ ಯಂತ್ರಗಳು ಮತ್ತು ಇತರ ಭಾರೀ ಯಂತ್ರಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆಗೆದುಹಾಕುತ್ತಿದೆ” ಎಂದು ಕುಮಾರ್ ಹೇಳಿದರು.

ಛಾಯಾಚಿತ್ರಗಳು ಮತ್ತು ವೀಡಿಯೋಗಳು ವಿಶಾಲವಾದ ಸುರಂಗವನ್ನು ತಡೆಯುವ ಕಾಂಕ್ರೀಟ್‌ನ ಬೃಹತ್ ರಾಶಿಗಳನ್ನು ತೋರಿಸಿದೆ, ಅದರ ಮುರಿದ ಛಾವಣಿಯ ಮೇಲೆ ತಿರುಚಿದ ಲೋಹದ ಬಾರ್‌ಗಳು ಅವಶೇಷಗಳಲ್ಲಿ ಬೆಂಡಾಗಿವೆ.

ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾದಿಂದ ದಾಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಈ ಸುರಂಗವನ್ನು ನಿರ್ಮಿಸಲಾಗಿದೆ. ಇದನ್ನು ಚಾರ್ ಧಾಮ್ ರಸ್ತೆ ಯೋಜನೆಯಡಿ ನಿರ್ಮಿಸಲಾಗುತ್ತಿದೆ ಮತ್ತು ಉತ್ತರಕಾಶಿಯಿಂದ ಯಮುನೋತ್ರಿ ಧಾಮಕ್ಕೆ 26 ಕಿಲೋಮೀಟರ್‌ಗಳಷ್ಟು ಪ್ರಯಾಣವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ಸುರಂಗದೊಳಗೆ ಸಿಲುಕಿರುವ ಕಾರ್ಮಿಕರು ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ”ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನೆಯ ಬಗ್ಗೆ ನನಗೆ ತಿಳಿದ ಸಮಯದಿಂದ ನಾನು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸ್ಥಳದಲ್ಲಿದ್ದಾರೆ. ಎಲ್ಲರೂ ಸುರಕ್ಷಿತವಾಗಿ ಮರಳಲು ನಾವು ದೇವರನ್ನು ಪ್ರಾರ್ಥಿಸುತ್ತೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಗುಜರಾತ್‌: ಹಝರತ್ ಶಹೀದ್ ದರ್ಗಾ ತೆರವಿಗೆ ಹೈಕೋರ್ಟ್‌ ತಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...