Homeಮುಖಪುಟಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್...

ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 55 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ಕೆಡವುವಂತೆ ಆಗ್ರಹಿಸಿ ಬಿಜೆಪಿ ಪರ ಸಂಘಟನೆಗಳು ನಡೆಸುತ್ತಿರುವ ಕೃತ್ಯದಿಂದ ಬೇಸತ್ತು ಮಸೀದಿಯ ಮಂಡಳಿಯು ನೈನಿತಾಲ್ ಹೈಕೋರ್ಟ್‌ ಮಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ತಿವಾರಿ ಮತ್ತು ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರಿದ್ದ ವಿಭಾಗೀಯ ಪೀಠವು ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದೆ. ಉತ್ತರಾಖಂಡ

ವಿಚಾರಣೆಯ ನಂತರ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನಗಳನ್ನು ನೀಡಿದ್ದು, ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ ಅಗತ್ಯವನ್ನು ಒತ್ತಿಹೇಳಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶುಕ್ರವಾರ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ನಡೆದ ವಿಚಾರಣೆಯಲ್ಲಿ, ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲರಾದ ಡಾ. ಕಾರ್ತಿಕೇ ಹರಿ ಗುಪ್ತಾ, ಇಮ್ರಾನ್ ಅಲಿ ಖಾನ್, ಪಲ್ಲವಿ ಬಹುಗುಣ, ರಫತ್ ಮುನೀರ್ ಅಲಿ ಮತ್ತು ಇರುಮ್ ಝೆಬಾ ಅವರು ಮುಸ್ಲಿಮರನ್ನು ಉದ್ದೇಶಿಸಿ ನಡೆಸಲಾಗುತ್ತಿರುವ ದ್ವೇಷ ಭಾಷಣದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

“ಸಂಯುಕ್ತ ಸನಾತನ ಧರಮ್ ರಕ್ಷಾ ಸಂಘದ ಸದಸ್ಯರು ಮತ್ತು ಅವರ ಸಹಚರರು ಮುಸ್ಲಿಮರು ಮತ್ತು ಮಸೀದಿಯ ವಿರುದ್ಧ ತೀವ್ರವಾದ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ” ಎಂದು ಅವರು ವಾದಿಸಿದ್ದಾರೆ. ಇಂತಹ ಕ್ರಮಗಳು ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸುತ್ತವೆ ಎಂದು ಒತ್ತಿ ಹೇಳಿದ್ದಾರೆ.

‘ಉತ್ತರಕಾಶಿಯ ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು 1969ರಲ್ಲಿ ಖಾಸಗಿಯಾಗಿ ಖರೀದಿಸಿದ ಜಮೀನಿನಲ್ಲಿ ನಿರ್ಮಿಸಲಾಗಿದೆ’ ಎಂದು ಪ್ರತಿಪಾದಿಸಿ ‘ಅಲ್ಪಸಂಖಾಯಕ್ ಸೇವಾ ಸಮಿತಿ’ ರಿಟ್ ಅರ್ಜಿ ಸಲ್ಲಿಸಿದೆ. 1986 ರಲ್ಲಿ ಉತ್ತರ ಪ್ರದೇಶದ ಸಹಾಯಕ ವಕ್ಫ್ ಕಮಿಷನರ್ ವಿಚಾರಣೆ ನಡೆಸಿ ಮುಸ್ಲಿಂ ಸಮುದಾಯದ ಸದಸ್ಯರು ಧರ್ಮಾರ್ಥ ನಿಧಿಯನ್ನು ಬಳಸಿ ನಿರ್ಮಿಸಿದ ಖಾಸ್ರಾ ನಂ. 2223 ರಲ್ಲಿ ಮಸೀದಿ ಅಸ್ತಿತ್ವದಲ್ಲಿದೆ ಎಂದು ದೃಢಪಡಿಸಿದರು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೆಚ್ಚುವರಿಯಾಗಿ, ವಕ್ಫ್ ಆಯುಕ್ತರ ವರದಿಯು “ಮಸೀದಿಯನ್ನು ಸುನ್ನಿ ಸಮುದಾಯವು ಸಕ್ರಿಯವಾಗಿ ಬಳಸುತ್ತದೆ” ಎಂದು ಪ್ರಮಾಣೀಕರಿಸಿದೆ ಅರ್ಜಿದಾರರು ಕೋರ್ಟ್‌ಗೆ ತಿಳಿಸಿದ್ದಾರೆ.

“1987 ರಲ್ಲಿ, ಭಟ್ವಾರಿ ರಸ್ತೆಯಲ್ಲಿರುವ ಜಾಮಾ ಮಸೀದಿಯನ್ನು ಅಧಿಕೃತವಾಗಿ ವಕ್ಫ್ ಆಸ್ತಿಯಾಗಿ ನೋಂದಾಯಿಸಲಾಯಿತು. ಆದರೆ, ಸೆಪ್ಟೆಂಬರ್ 2024 ರಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕರಾದ ಜಿತೇಂದ್ರ ಸಿಂಗ್ ಚೌಹಾಣ್, ಸ್ವಾಮಿ ದರ್ಶನ್ ಭಾರತಿ, ಸೋನು ಸಿಂಗ್ ನೇಗಿ, ಲಖ್ಪತ್ ಸಿಂಗ್ ಭಂಡಾರಿ ಮತ್ತು ಅನುಜ್ ವಾಲಿಯಾ ಸೇರಿದಂತೆ ಸಂಯುಕ್ತ ಸನಾತನ ಧರ್ಮ ರಕ್ಷಾ ಸಂಘದ ಸದಸ್ಯರು ಮತ್ತು ವಿಶ್ವ ಹಿಂದೂ ಪರಿಷತ್, ಮಸೀದಿ ಕೆಡವುವುದಾಗಿ ಬೆದರಿಕೆ ಹಾಕಲು ಆರಂಭಿಸಿತು” ಎಂದು ಅರ್ಜಿದಾದರರು ಕೋರ್ಟ್‌ಗೆ ಹೇಳಿದ್ದಾರೆ.

ಈ ನಾಯಕರು ಮಸೀದಿಯ ಕಾನೂನುಬದ್ಧತೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ವರುಣಾವತ್ ಪರ್ವತದ ಬುಡದಲ್ಲಿರುವ ಮಸೀದಿಯನ್ನು ಕೆಡವಲು ಒತ್ತಾಯಿಸುತ್ತಿರುವ ಸಂಯುಕ್ತ ಸನಾತನ ಧರ್ಮ ರಕ್ಷಣಾ ಸಂಘದ ನೇತೃತ್ವದಲ್ಲಿ ವ್ಯಾಪಕ ಅಭಿಯಾನ ನಡೆಸಲಾಗುತ್ತಿದೆ. ಆರೆಸ್ಸೆಸ್‌ನ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಹ ಡಿಸೆಂಬರ್ 1 ರಂದು ತಮ್ಮ ಹೋರಾಟಕ್ಕೆ ಬೆಂಬಲವಾಗಿ ಮಹಾಪಂಚಾಯತ್ ನಡೆಸುವ ಯೋಜನೆಯನ್ನು ಪ್ರಕಟಿಸಿದೆ.

ಬಿಜೆಪಿ ಪರ ಸಂಘಟನೆಗಳು ಕೃತ್ಯಗಳ ಕಾರಣಕ್ಕೆ ಪ್ರದೇಶದಲ್ಲಿ ಈಗಾಗಲೇ ಹಿಂಸಾಚಾರ ನಡೆದಿದ್ದು, ಅಕ್ಟೋಬರ್ 24 ರಂದು, ಉದ್ವಿಗ್ನತೆ ಭುಗಿಲೆದ್ದಿತ್ತು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಪೋಲೀಸರು ಲಾಠಿ ಚಾರ್ಜ್‌ ಮಾಡಿದ್ದರು. ಘಟನೆಯಲ್ಲಿ ಒಂಬತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘಟನೆಗೆ ಪ್ರತಿಕ್ರಿಯೆಯಾಗಿ, ಪೊಲೀಸರು 200 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಎಂಟು ಶಂಕಿತರನ್ನು ಹೆಸರಿಸಿದ್ದಾರೆ. ಮೂವರು ಪ್ರಮುಖ ಸಂಘಟಕರನ್ನು ಬಂಧಿಸಲಾಗಿದ್ದರೂ, ಅವರು ನಂತರ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.

ಇದನ್ನೂ ಓದಿ: ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...