Homeಮುಖಪುಟಉತ್ತರಾಖಂಡ: ಬಿಜೆಪಿ ಸರ್ಕಾರದ ಸಂಪುಟ ಸಚಿವ ಕಾಂಗ್ರೆಸ್‌‌‌ಗೆ ಸೇರ್ಪಡೆ

ಉತ್ತರಾಖಂಡ: ಬಿಜೆಪಿ ಸರ್ಕಾರದ ಸಂಪುಟ ಸಚಿವ ಕಾಂಗ್ರೆಸ್‌‌‌ಗೆ ಸೇರ್ಪಡೆ

- Advertisement -
- Advertisement -

ಉತ್ತರಾಖಂಡ ಬಿಜೆಪಿಯ ಉಚ್ಛಾಟಿತ ನಾಯಕ ಮತ್ತು ರಾಜ್ಯ ಸಂಪುಟದ ಮಾಜಿ ಸಚಿವ ಹರಕ್ ಸಿಂಗ್ ರಾವತ್ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹರಕ್‌ ಸಿಂಗ್‌ ಅವರನ್ನು ರಾಜ್ಯ ಸಂಪುಟದಿಂದ ಇತ್ತೀಚೆಗೆ ವಜಾಗೊಳಿಸಿ, ಆರು ವರ್ಷಗಳ ಕಾಲ ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಲಾಗಿತ್ತು.

ಕಾಂಗ್ರೆಸ್‌‌ ಸೇರಿದ ಹರಕ್ ಸಿಂಗ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, “ಮಾರ್ಚ್‌ 10 ರಂದು ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಗೆದ್ದಾಗ ಅದು ನನ್ನ ಕ್ಷಮೆಯಾಚನೆಯಾಗಿದೆ. ಬಿಜೆಪಿ ನನ್ನನ್ನು ಬಳಸಿ ಎಸೆಯುವ ವಸ್ತು ಎಂದು ಭಾವಿಸಿದ್ದು, ಇದರಿಂದ ನಾನು ತುಂಬಾ ಅಸಮಾಧಾನಗೊಂಡಿದ್ದೇನೆ. ನಾನು ಭರವಸೆ ನೀಡಿದಂತೆ, ಕೊನೆಯ ಕ್ಷಣದವರೆಗೂ ಗೃಹ ಸಚಿವ ಅಮಿತ್‌‌ ಶಾ ಅವರೊಂದಿಗಿನ ನನ್ನ ಸ್ನೇಹವನ್ನು ಮುರಿದಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಕೆಲವೇ ತಿಂಗಳಲ್ಲಿ ಉತ್ತರಾಖಂಡ ಚುನಾವಣೆ: ಶಂಕರಾಚಾರ್ಯ ಪ್ರತಿಮೆ ಉದ್ಘಾಟಿಸಿ ರಾಮಮಂದಿರದ ಬಗ್ಗೆ ಉಲ್ಲೇಖಿಸಿದ ಮೋದಿ

ಕಾಂಗ್ರೆಸ್‌ಗೆ 10 ಸ್ಥಾನಗಳನ್ನು ಭರವಸೆ

ಹರಕ್‌ ಸಿಂಗ್‌‌‌ ಅವರು ಬುಧವಾರದಂದು ನವದೆಹಲಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದರು. ತಮ್ಮ ಪ್ರಭಾವವನ್ನು ಬಳಸಿಕೊಂಡು ಪಕ್ಷದ ಬುಟ್ಟಿಗೆ ಕನಿಷ್ಠ ಹತ್ತು ಸ್ಥಾನಗಳನ್ನು ಹಾಕುವುದಾಗಿ ಅವರು ಕಾಂಗ್ರೆಸ್ ನಾಯಕತ್ವಕ್ಕೆ ಭರವಸೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆದಾಗ್ಯೂ, ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಒಂದು ವಿಭಾಗವು ಗುರುವಾರ ಅವರ ಮರು ಸೇರ್ಪಡೆಯನ್ನು ವಿರೋಧಿಸಿದೆ ಎಂದು ವರದಿಯಾಗಿದೆ.

ಕಾಂಗ್ರೆಸ್‌ನ ಹರೀಶ್ ರಾವತ್ ಸರ್ಕಾರದ ವಿರುದ್ಧ ಬಂಡಾಯ

2016ರಲ್ಲಿ ಹರೀಶ್ ರಾವತ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ದ ಬಂಡಾಯ ಎದ್ದಿದ್ದ ಹರಕ್‌ ಸಿಂಗ್ ಸರ್ಕಾರವನ್ನು ಅಲ್ಪಮತಕ್ಕೆ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ಸರ್ಕಾರದ ವಿರುದ್ಧವೆ ಬಂಡಾಯವೆದ್ದಿದ್ದ ಅವರು ಬಿಜೆಪಿ ಸೇರಿದ್ದರು.

ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ತಮ್ಮ ಸಂಬಂಧಿಕರಿಗೆ ಟಿಕೆಟ್ ನೀಡುವಂತೆ ಪಕ್ಷದ ನಾಯಕತ್ವದ ಮೇಲೆ ಒತ್ತಡ ಹೇರಿದ ಆರೋಪದ ಮೇಲೆ ಇತ್ತೀಚೆಗೆ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು. ಆದರೆ ಹರಕ್‌ ಸಿಂಗ್‌ ಈ ಆರೋಪವನ್ನು ನಿರಾಕರಿಸಿದ್ದಾರೆ.

ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ:ಕೃಷಿ ಕಾಯ್ದೆಗಳ ಜಾರಿಗೆ ಒಂದು ವರ್ಷ; ನಿಲ್ಲದ ಪ್ರತಿಭಟನೆ; ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಚುನಾವಣೆಗಳ ಮೇಲೆ ಪ್ರಭಾವ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...