Homeಮುಖಪುಟಅಧಿಕಾರ ವಹಿಸಿದ ಕೆಲವೇ ತಿಂಗಳಲ್ಲಿ ರಾಜೀನಾಮೆಗೆ ಮುಂದಾದ ಉತ್ತರಾಖಂಡ ಸಿಎಂ!

ಅಧಿಕಾರ ವಹಿಸಿದ ಕೆಲವೇ ತಿಂಗಳಲ್ಲಿ ರಾಜೀನಾಮೆಗೆ ಮುಂದಾದ ಉತ್ತರಾಖಂಡ ಸಿಎಂ!

- Advertisement -
- Advertisement -

ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್ ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆರು ತಿಂಗಳೊಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇಂದು ಸಂಜೆ ಅವರು ರಾಜ್ಯದ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ್ದಾರೆ.

ತಿರಥ್‌‌ ರಾವತ್ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿದ್ದು, ಬಿಜೆಪಿ ನಾಯಕರೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದಾರೆ. ಇಂದು ಮಧ್ಯಾಹ್ನ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಭೇಟಿಯ ನಂತರ ಅವರು ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರೊಂದಿಗೆ ಭೇಟಿಗೆ ಸಮಯ ಕೇಳಿದ್ದಾರೆ.

ಈ ಹಿಂದಿನ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ಅವರ ತೀವ್ರ ಭಿನ್ನಾಭಿಪ್ರಾಯದ ನಡುವೆಯೆ ತಿರಥ್‌‌ ಸಿಂಗ್‌ ರಾವತ್ ಉತ್ತರಾಖಂಡ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್ ರಾವತ್

ಪ್ರಸ್ತುತ ಲೋಕಸಭಾ ಸದಸ್ಯರಾಗಿರುವ ತಿರಥ್‌ ಅವರು ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಬೇಕಾದರೆ, ಸೆಪ್ಟೆಂಬರ್ 10 ರೊಳಗೆ ವಿಧಾನಸಭಾ ಸ್ಥಾನವನ್ನು ಗೆದ್ದು ಉತ್ತರಾಖಂಡದ ಶಾಸಕರಾಗಬೇಕಿದೆ.

ಎರಡನೆ ಅಲೆಯ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಐದು ರಾಜ್ಯಗಳ ಚುನಾವಣೆ ನಡೆಸಿದ್ದ ಚುನಾವಣಾ ಆಯೋಗದ ವಿರುದ್ದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಆದ್ದರಿಂದ, ಇದೀಗ ಉಪ ಚುನಾವಣೆಗಳನ್ನು ಘೋಷಿಸಲು ಚುನಾವಣಾ ಆಯೋಗವು ನಿರಾಸಕ್ತಿ ತೋರುತ್ತಿದೆ ಎನ್ನಲಾಗಿದೆ.

ಚುನಾವಣಾ ಆಯೋಗವು ಚುನಾವಣೆಯ ಕುರಿತು ವಿವಿಧ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ಚುನಾವಣಾ ಆಯೋಗದ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. “ಕೊರೊನಾ ಪರಿಸ್ಥಿತಿಯು ಒಂದು ಪ್ರಮುಖವಾದ ಪರಿಗಣನೆಯಾಗಿದ್ದು, ಅನೇಕ ಉಪಚುನಾವಣೆಗಳು ಬಾಕಿ ಉಳಿದಿವೆ” ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

ತಿರಥ್‌‌ ರಾವತ್ ಅವರ ಪತ್ರಿಕಾ ಹೇಳಿಕೆಗಳು ಸದಾ ವಿವಾದಗಳಿಂದ ಕೂಡಿದ್ದು, ಬಿಜೆಪಿಯ ಉತ್ತರಾಖಂಡದ ನಾಯಕರು ದೆಹಲಿ ನಾಯಕತ್ವಕ್ಕೆ ಅವರ ಕೆಲವು ಹೇಳಿಕೆಗಳ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿರುವ ಬಗ್ಗೆ ದೂರು ನೀಡಿದ್ದರು.

ಅವರು ತಮ್ಮದೆ ಪಕ್ಷದ ಆಡಳಿತವು ತೆಗೆದುಕೊಂಡಿದ್ದ ನೀತಿ ನಿರ್ಧಾರಗಳನ್ನು ಟೀಕಿಸುವ ಮೂಲಕ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದ್ದರು.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ, ತಿರಥ್‌‌ ಸೀಳಿರುವ ಜೀನ್ಸ್ ಧರಿಸಿದ ಮಹಿಳೆಯರ ಬಗ್ಗೆ ಅವಮಾನಕರವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದರು. ಜೊತೆಗೆ 200 ವರ್ಷಗಳ ಕಾಲ ಭಾರತವನ್ನು ಆಳಿದ್ದು ಬ್ರಿಟನ್ ಅಲ್ಲ, ಅಮೆರಿಕ ಎಂದೂ ಹೇಳಿಕೆ ನೀಡಿದ್ದರು.

ಕೊರೊನಾ ಬಿಕ್ಕಟ್ಟು ಉತ್ತುಂಗದಲ್ಲಿದ್ದಾಗ ಕುಂಭಮೇಳವನ್ನು ಅವರು ನಿಭಾಯಿಸಿದ್ದು ಮತ್ತು ಕೊರೊನಾಗೆ ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿಲ್ಲ ಎಂಬ ಅವರ ಅಭಿಪ್ರಾಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ತಬ್ಲಿಗಿ ಮರ್ಕಜ್ ಮತ್ತು ಕುಂಭಮೇಳಕ್ಕೂ ಹೋಲಿಕೆ ಸರಿಯಲ್ಲ: ಉತ್ತರಖಂಡ ಸಿಎಂ

ಇದನ್ನೂ ಓದಿ: 1.84 ಲಕ್ಷ ಕೋವಿಡ್ ಪ್ರಕರಣಗಳು ವರದಿ: ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...