Homeಮುಖಪುಟಉತ್ತರಾಖಂಡ: ಸಿಎಂ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ

ಉತ್ತರಾಖಂಡ: ಸಿಎಂ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ

- Advertisement -
- Advertisement -

ಪಂಚರಾಜ್ಯ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹಲವು ಕಸರತ್ತುಗಳನ್ನು ನಡೆಸುತ್ತಿದ್ದರೇ, ಇತ್ತ ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಂಗಳವಾರ ಸಂಜೆ ತ್ರಿವೇಂದ್ರ ಸಿಂಗ್ ರಾವತ್ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಸೋಮವಾರ ಸರ್ಕಾರದಲ್ಲಿನ ಈ ಬೆಳವಣಿಗೆ ಹಿನ್ನಲೆ ಬಿಜೆಪಿ ಹೈಕಮಾಂಡ್ ಅವರನ್ನು ದೆಹಲಿಗೆ ಕರೆಸಿಕೊಂಡು ಉತ್ತರಾಖಂಡದಲ್ಲಿ ನಾಯಕತ್ವ ಬದಲಾವಣೆ ಮಾಡುವ ಕುರಿತು ಚರ್ಚೆ ನಡೆಸಿತ್ತು.

ಉತ್ತರಾಖಂಡದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಉಳಿದಿದ್ದು, ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಕಾರ್ಯಗಳ ಬಗ್ಗೆ ಹಲವಾರು ಸಚಿವರು ಮತ್ತು ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಕೇಂದ್ರ ಬಿಜೆಪಿ ನಾಯಕರ ಭೇಟಿ ನಂತರ ಮುಖ್ಯಮಂತ್ರಿ ರಾಜೀನಾಮೆ ವಿಷಯ ರಾಜ್ಯದಲ್ಲಿ ಚರ್ಚೆಗೆ ಬಂದಿತ್ತು.

ಇದನ್ನೂ ಓದಿ: ವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ಉತ್ತರಾಖಂಡದಲ್ಲಿ 2017ರಲ್ಲಿ ಬಿಜೆಪಿ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಇದರ ನಾಯಕರಾಗಿ ರಾವತ್ ಆಯ್ಕೆಯಾಗಿದ್ದರು. ಮುಂದಿನ ವರ್ಷದ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾಯುತ್ತಿದೆ.

ತ್ರಿವೇಂದ್ರ ಸಿಂಗ್ ರಾವತ್ ಕಾರ್ಯವೈಖರಿ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದರು. ರಾವತ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದಿದ್ದರೆ, ರಾಜೀನಾಮೆ ನೀಡುವ ಬಗ್ಗೆ ಎಚ್ಚರಿಕೆ ನೀಡಿದ್ದರು. ಚುನಾವಣೆಗಾಗಿ ಪರಿಶೀಲಿಸಲು ಉತ್ತರಾಖಂಡಕ್ಕೆ ಭೇಟಿ ನೀಡಿದ್ದ ಬಿಜೆಪಿ ಉಪಾಧ್ಯಕ್ಷ ರಮಣ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಸಿಂಗ್ ಗೌತಮ್, ರಾವತ್ ಬಗ್ಗೆ ರಾಜ್ಯ ನಾಯಕರಿಗಿರುವ ಭಿನ್ನಾಭಿಪ್ರಾಯದ ಬಗ್ಗೆ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾಗೆ ವರದಿ ಸಲ್ಲಿಸಿದ್ದರು.

ಉತ್ತರಾಖಂಡ ಮಂತ್ರಿಗಳಲ್ಲಿ ಒಬ್ಬರಾದ ಧನ್ ಸಿಂಗ್ ರಾವತ್ ಅವರನ್ನು ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಮುಂದಿದ್ದಾರೆ. ಗರ್ವಾಲ್‌ನಲ್ಲಿದ್ದ ಧನ್ ಸಿಂಗ್ ರಾವತ್ ಅವರು ಇಂದು ಮಧ್ಯಾಹ್ನ ಖಾಸಗಿ ಹೆಲಿಕ್ಯಾಪ್ಟರ್‌‌ನಲ್ಲಿ ರಾಜ್ಯ ರಾಜಧಾನಿ ಡೆಹ್ರಾಡೂನ್‌ಗೆ ಹೋಗಿದ್ದಾರೆ.


ಇದನ್ನೂ ಓದಿ: ಮತದಾನ ಮುಂದೂಡಲು, ರದ್ದುಗೊಳಿಸಲು, ಮರು ನಿಗದಿಗೊಳಿಸಲು ನಮಗೆ ಅಧಿಕಾರವಿದೆ: ಆಂಧ್ರ ಚುನಾವಣಾ ಆಯುಕ್ತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...