Homeಮುಖಪುಟಉತ್ತರಾಖಂಡ | ಕೋಮುಗಲಭೆಗೆ ತಿರುಗಿದ ಪಾರ್ಕಿಂಗ್ ಜಗಳ!

ಉತ್ತರಾಖಂಡ | ಕೋಮುಗಲಭೆಗೆ ತಿರುಗಿದ ಪಾರ್ಕಿಂಗ್ ಜಗಳ!

- Advertisement -
- Advertisement -

ಮಂಗಳವಾರ ಉತ್ತರಾಖಂಡದ ಚಮೋಲಿ ಜಿಲ್ಲೆಯ ಗೌಚಾರ್ ಮಾರುಕಟ್ಟೆಯಲ್ಲಿ ವಿವಿಧ ಸಮುದಾಯಗಳ ಇಬ್ಬರು ಯುವಕರ ನಡುವೆ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಪ್ರಾರಂಭವಾದ ವಾಗ್ವಾದವು ಕೋಮು ಹಿಂಸಾಚಾರಕ್ಕೆ ತಿರುಗಿದೆ. ಹಿಂಸಾಚಾರದಲ್ಲಿ ಅಂಗಡಿಗಳನ್ನು ಧ್ವಂಸಗೊಳಿಸಿ, ಸೂಚನಾ ಫಲಕಗಳನ್ನು ಹಾನಿಗೊಳಿಸಲಾಗಿದೆ ಎಂದು ವರದಿಯಾಗಿದೆ. ನಾಗರಿಕರಿಗೆ ಶಾಂತ ರೀತಿಯಲ್ಲಿ ವರ್ತಿಸುವಂತೆ ಪೊಲೀಸರು ಹೇಳಿಕೊಂಡಿದ್ದರೂ, ಆ ಪ್ರದೇಶದಲ್ಲಿ ನಿಯೋಜನೆಯನ್ನು ಹೆಚ್ಚಿಸಲಾಗಿದೆ ಎಂದು ವರದಿ ಹೇಳಿದೆ. ಉತ್ತರಾಖಂಡ

“ಕರ್ಣಪ್ರಯಾಗ ಪೊಲೀಸ್ ಠಾಣಾ ವ್ಯಾಪ್ತಿಯ ಗೌಚಾರ್‌ನಲ್ಲಿರುವ ಅಂಗಡಿಯೊಂದರ ಮುಂದೆ ಸ್ಕೂಟರ್ ನಿಲ್ಲಿಸುವ ವಿವಾದದ ನಂತರ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಚಿಕಿತ್ಸೆಗಾಗಿ ಎರಡೂ ಕಡೆಯವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸ್ಥಳೀಯ ಹಿಂದೂ ವ್ಯಕ್ತಿಯೊರೊಬ್ಬರು ಮುಸ್ಲಿಂ ಅಂಗಡಿ ಮಾಲೀಕರ ಮುಂದೆ ಸ್ಕೂಟರ್ ನಿಲ್ಲಿಸುತ್ತಿದ್ದಾಗ ಮಂಗಳವಾರ ಬೆಳಗ್ಗೆ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಂಗಡಿ ಮಾಲೀಕರು ವಾಹನವನ್ನು ನಿಲ್ಲಿಸದಂತೆ ವ್ಯಕ್ತಿಯನ್ನು ಕೇಳಿದಾಗ ವಾಗ್ವಾದ ಪ್ರಾರಂಭವಾಯಿತು. ಈ ವೇಳೆ ಹಿಂದೂ ವ್ಯಕ್ತಿಯನ್ನು ಥಳಿಸಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್ ಹೇಳಿದ್ದಾರೆ.

“ಹಲ್ಲೆಗೊಳಗಾದ ವ್ಯಕ್ತಿ ಪೊಲೀಸರ ಮೊರೆ ಹೋಗಿದ್ದು, ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಆದಾಗ್ಯೂ, ಕೆಲವು ಸಂಘಟನೆಗಳ ಸದಸ್ಯರು ಜಮಾಯಿಸಿ ಪ್ರತಿಭಟನೆ ನಡೆಸಿದರು” ಎಂದು ಪೊಲೀಸ್  ಅಧಿಕಾರಿ ಹೇಳಿದ್ದಾರೆ. ಈ ವೇಳೆ ಗುಂಪು ಗದ್ದಲವನ್ನು ಸೃಷ್ಟಿಸಿದ್ದು, ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಿ ಸೂಚನಾ ಫಲಕಗಳನ್ನು ಹಾನಿಗೊಳಿಸಿದೆ. ಮಧ್ಯಾಹ್ನ 2 ಗಂಟೆಯವರೆಗೂ ಗಲಾಟೆ ನಡೆದಿದ್ದು, ಗಾಯಗೊಂಡ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

“ಜಗಳದ ನಂತರ, ಗೌಚಾರ್ ಔಟ್‌ಪೋಸ್ಟ್‌ನಲ್ಲಿ ಎರಡು ಸಮುದಾಯಗಳ ದೊಡ್ಡ ಗುಂಪು ಜಮಾಯಿಸಿದ್ದು, ಪ್ರದೇಶದಲ್ಲಿ ಉದ್ವಿಗ್ನತೆಗೆ ಸೃಷ್ಟಿಯಾಗಿತ್ತು. ಪೊಲೀಸರು ಎರಡೂ ಗುಂಪುಗಳನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ ಪೊಲೀಸರು ಆರೋಪಿಗಳಾದ ರಿಜ್ವಾನ್, ಸಲ್ಮಾನ್, ಆಸಿಫ್ ಮತ್ತು 70-80 ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 115 (2), 191 (2), ಮತ್ತು 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ” ಎಂದು ಚಮೋಲಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುವ್ಯವಸ್ಥೆ ಕಾಪಾಡಲು ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಕೋಮು ಸೌಹಾರ್ದತೆಯನ್ನು ಎತ್ತಿಹಿಡಿಯಬೇಕು, ಸಂಯಮದಿಂದ ವರ್ತಿಸಬೇಕು ಮತ್ತು ಸಹೋದರತ್ವವನ್ನು ಉತ್ತೇಜಿಸಬೇಕು ಎಂದು ಎಸ್ಪಿ ಪನ್ವಾರ್ ನಾಗರಿಕರನ್ನು ಒತ್ತಾಯಿಸಿದ್ದಾರೆ. ಹೆಚ್ಚುವರಿಯಾಗಿ, ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ಅನ್ನು ಗೌಚಾರ್‌ನಾದ್ಯಂತ ವಿಧಿಸಲಾಗಿದ್ದು, ಇದು ಶಾಂತಿಯನ್ನು ಕಾಪಾಡುವುದು ಮತ್ತು ಕಾನೂನುಬಾಹಿರ ಸಭೆಗಳನ್ನು ತಡೆಯುತ್ತದೆ.

ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದು, ವದಂತಿಗಳನ್ನು ಹಬ್ಬಿಸದಂತೆ ಅಥವಾ ಅಶಾಂತಿಯನ್ನು ಹುಟ್ಟುಹಾಕಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಪ್ರಸ್ತುತ, ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ, ಅಶಾಂತಿಯನ್ನು ಪ್ರಚೋದಿಸುವ ಮತ್ತು ಕೆಲವು ಸಮುದಾಯಗಳ ನಂಬಿಕೆಗಳ ಮೇಲೆ ದಾಳಿ ಮಾಡುವ ಉದ್ದೇಶದಿಂದ ಸಂದೇಶಗಳನ್ನು ಹರಡುತ್ತಿದ್ದಾರೆ. ಇದರಿಂದ ಜನ ಸಾಮಾನ್ಯರಲ್ಲಿ ಅಭದ್ರತೆ, ಭಯದ ವಾತಾವರಣ ಬೆಳೆಯುತ್ತಿದೆ. ಸಮಾಜದೊಳಗೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ತಮ್ಮ ಅಮೂಲ್ಯವಾದ ಬೆಂಬಲವನ್ನು ನೀಡುವಂತೆ ಚಮೋಲಿ ಪೊಲೀಸರು ಎಲ್ಲಾ ನಾಗರಿಕರನ್ನು ಕೋರುತ್ತಾರೆ ” ಎಂದು ಚಮೋಲಿ ಪೊಲೀಸರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಉತ್ತರಾಖಂಡ

ಇದನ್ನೂ ಓದಿ: ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...