Homeಮುಖಪುಟಏಕರೂಪ ನಾಗರಿಕ ಸಂಹಿತೆ ಜಾರಿಗೆ ವಿಶೇಷ ಅಧಿವೇಶನ ಕರೆಯಲು ಮುಂದಾದ ಉತ್ತರಖಂಡ ಸರಕಾರ: ವರದಿ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ವಿಶೇಷ ಅಧಿವೇಶನ ಕರೆಯಲು ಮುಂದಾದ ಉತ್ತರಖಂಡ ಸರಕಾರ: ವರದಿ

- Advertisement -
- Advertisement -

ಉತ್ತರಖಂಡ ರಾಜ್ಯದಲ್ಲಿ ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಮಸೂದೆಯನ್ನು ಚರ್ಚಿಸಿ ಅಂಗೀಕರಿಸಲು ಬಿಜೆಪಿ ನೇತೃತ್ವದ ಉತ್ತರಾಖಂಡ ಸರ್ಕಾರವು ಫೆಬ್ರವರಿ 5ರಿಂದ ವಿಶೇಷ ವಿಧಾನಸಭೆ ಅಧಿವೇಶನವನ್ನು ಕರೆಯಲಿದೆ ಎಂದು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.

ಸರ್ಕಾರ ಇದುವರೆಗೆ ಶಾಸಕಾಂಗ ಕಾರ್ಯಸೂಚಿಯ ಬಗ್ಗೆ ಅದಿಕೃತ ವಿವರಗಳನ್ನು ನೀಡಿಲ್ಲ ಮತ್ತು ಅಧಿವೇಶನ ಆರಂಭಕ್ಕೂ ಮುನ್ನ ನಡೆಯಲಿರುವ ಸಲಹಾ ಮಂಡಳಿ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಐವರು ಸದಸ್ಯರ ಸಮಿತಿಯು ಫೆಬ್ರವರಿ 2ರಂದು ಈ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಸರ್ಕಾರಕ್ಕೆ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಸಂಪೂರ್ಣ ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ. ಸಮಿತಿಯ ಅವಧಿ ಜ.26ರಂದು ಕೊನೆಗೊಂಡಿದೆ, ಆದರೆ ಸರ್ಕಾರವು ಅದನ್ನು ಎರಡು ವಾರಗಳವರೆಗೆ ವಿಸ್ತರಿಸಿತ್ತು.

ಜ.26ರಂದು ಗಣರಾಜ್ಯೋತ್ಸವದ ಭಾಷಣದಲ್ಲಿ ಉತ್ತರಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಮಸೂದೆಯ ಬಗ್ಗೆ ಸುಳಿವು ನೀಡಿದ್ದರು. ಕರಡು ಸಮಿತಿಯು ಕರಡು ಸಿದ್ಧಪಡಿಸಿದೆ. ಶೀಘ್ರದಲ್ಲೇ ನಾವು ಇದನ್ನು ಕಾರ್ಯಗತಗೊಳಿಸುತ್ತೇವೆ ಎಂದು ಪುಷ್ಕರ್ ಸಿಂಗ್ ಧಾಮಿ ಹೇಳಿದ್ದರು.

ಡಿಸೆಂಬರ್ 22, 2023ರಂದು ಧಾಮಿ ನೇತೃತ್ವದ ರಾಜ್ಯ ಕ್ಯಾಬಿನೆಟ್ ಈ ಕುರಿತು ಕರಡು ಸಮಿತಿಯ ಶಿಫಾರಸುಗಳನ್ನು ಅನುಮೋದಿಸಿತ್ತು. 2022ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ರಾಜ್ಯದಲ್ಲಿ ಏಕರೂಪದ ನಾಗರಿಕ ಕಾನೂನುಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಕಾಯ್ದೆ ಜಾರಿಗೆ ಸರಕಾರ ಮುಂದಾಗಿದೆ ಎಂದು ಹೇಳಲಾಗಿದೆ.

ಏನಿದು ಏಕರೂಪ ನಾಗರಿಕ ಸಂಹಿತೆ?

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ‘ಸಂಘಿ’ ಅಲ್ಲ ‘ರಜನಿಕಾಂತ್‌’ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...