Homeದಲಿತ್ ಫೈಲ್ಸ್ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

- Advertisement -
- Advertisement -

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ ‘ಸೈನಾ’ (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಈ ಕ್ರಮವು ದಲಿತರನ್ನು ಗ್ರಾಮ ನಾಯಕತ್ವದಿಂದ ದೂರವಿಟ್ಟ ದೀರ್ಘಕಾಲದ ಸಾಮಾಜಿಕ ಕಟ್ಟುಪಾಡುಗಳನ್ನು ಮುರಿದಿದೆ.

ತಲೆಮಾರುಗಳಿಂದ, ಈ ಪ್ರದೇಶದ ಹಳ್ಳಿಗಳು ಪ್ರಬಲ ಮತ್ತು ಶ್ರೀಮಂತ ರಜಪೂತ ಕುಟುಂಬಗಳಿಂದ ಮಾತ್ರ ನಾಯಕರು ಆಯ್ಕೆಯಾಗಿದ್ದರು. ಗ್ರಾಮದ ಸಮಸ್ಯೆಗಳು ಮತ್ತು ವಿವಾದಗಳನ್ನು ಮಧ್ಯಸ್ಥಿಕೆ ವಹಿಸುವಲ್ಲಿ ‘ಸೈನಾ’ ಪ್ರಮುಖ ಪಾತ್ರ ವಹಿಸುತ್ತಿದ್ದರೂ, ದಲಿತರನ್ನು ಎಂದಿಗೂ ಈ ಸ್ಥಾನಕ್ಕೆ ಪರಿಗಣಿಸಲಾಗುತ್ತಿರಲಿಲ್ಲ. ಜಾತಿ ಶ್ರೇಣಿಯಲ್ಲಿ ಬೇರೂರಿರುವ ಈ ವ್ಯವಸ್ಥೆಯು ಬ್ರಿಟಿಷ್ ಯುಗದಿಂದ ಇಂದಿನವರೆಗೂ ಮುಂದುವರೆಯಿತು.

“ಈ ಹಿಂದೆ, ಇಡೀ ಗ್ರಾಮಕ್ಕೆ ಏಕೈಕ ಸೈನಾ ಇತ್ತು. ಈಗ, ನಮಗೆ ಎರಡು ಇರುತ್ತದೆ” ಎಂದು ಚುನಾವಣೆಯಲ್ಲಿ ಭಾಗವಹಿಸಿದ ನಿವಾಸಿಯೊಬ್ಬರು ತಿಳಿಸಿದ್ದಾರೆ ಎಂದು ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ. ಹೊಸದಾಗಿ ಆಯ್ಕೆಯಾದ ದಲಿತ ಸೈನಾವನ್ನು ಮರದ ಆನೆಯ ಮೇಲೆ ಸಾಂಪ್ರದಾಯಿಕ ಮೆರವಣಿಗೆಯೊಂದಿಗೆ ಸಂಭ್ರಮಿಸಲಾಯಿತು.

ಈ ನಿರ್ಧಾರವು ಆಳವಾಗಿ ಬೇರೂರಿದ್ದ ಸಾಮಾಜಿಕ ವ್ಯವಸ್ಥೆಯನ್ನು ಪ್ರಶ್ನಿಸಿದ್ದರಿಂದ, ಪ್ರಬಲ ಗುಂಪುಗಳ ಪ್ರತಿರೋಧವಿಲ್ಲದೆ ಶಾಂತಿಯುತವಾಗಿ ಪರಿವರ್ತನೆ ಆಗುವುದನ್ನು ಖಚಿತಪಡಿಸಿಕೊಳ್ಳಲು 35 ದಲಿತ ಕುಟುಂಬಗಳಿಗೆ ಸ್ಥಳೀಯ ಪೊಲೀಸರು ಬೆಂಬಲ ನೀಡಿದರು.

ಹತ್ತಿರದ ಪಂಚಾಯತ್‌ನ ಮಾಜಿ ಪ್ರಧಾನ್ ಮತ್ತು ಸಾಮಾಜಿಕ ಕಾರ್ಯಕರ್ತ ಭರತ್ ಸಿಂಗ್ ರಾಣಾ, ಸಮುದಾಯದ ನಿರ್ಧಾರವು ಕನಿಷ್ಠ 150 ರಿಂದ 200 ವರ್ಷಗಳಿಂದ ಅಸ್ತಿತ್ವದಲ್ಲಿದ್ದ ವ್ಯವಸ್ಥೆಯನ್ನು ರದ್ದುಗೊಳಿಸುತ್ತದೆ ಎಂದು ಹೇಳಿದರು.

“ದಲಿತರನ್ನು ಯಾವಾಗ ಹೊರಗಿಡಲಾಯಿತು ಎಂದು ನಿಖರವಾಗಿ ಹೇಳುವುದು ಕಷ್ಟ. ಏಕೆಂದರೆ, ಅದು ಲಿಖಿತ ಕಾನೂನಿನಲ್ಲ, ಪದ್ಧತಿ ಮತ್ತು ಶ್ರೇಣಿಯನ್ನು ಆಧರಿಸಿದೆ. ನಾವು ಬ್ರಿಟಿಷ್ ಅವಧಿಯನ್ನು ಆರಂಭಿಕ ಹಂತವೆಂದು ಪರಿಗಣಿಸಿದರೆ, ಈ ಹೆಜ್ಜೆ ತಲೆಮಾರುಗಳಿಂದ ಜಾರಿಯಲ್ಲಿರುವ ರಚನೆಯನ್ನು ಪ್ರಶ್ನಿಸುತ್ತದೆ” ಎಂದರು.

ಆಧುನಿಕ ಭಾರತದ ಸಂದರ್ಭದಲ್ಲಿ ಈ ಕ್ರಮವು ಇನ್ನೂ ಹೆಚ್ಚಿನ ಅರ್ಥವನ್ನು ಹೊಂದಿದೆ ಎಂದು ರಾಣಾ ಹೇಳಿದರು. “ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ದೇಶದಲ್ಲಿ, ಈ ನಿರ್ಧಾರವು ಸ್ವಾತಂತ್ರ್ಯದ ನಂತರವೂ ಮುಂದುವರಿದ 75 ವರ್ಷಗಳಷ್ಟು ಹಳೆಯದಾದ ಅಸಮಾನತೆಯನ್ನು ಮುರಿಯುವ ಪ್ರಮುಖ ಪ್ರಯತ್ನವಾಗಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...