HomeಮುಖಪುಟUttarakhand Election Results | ಉತ್ತರಾಖಂಡ ಮತ್ತೆ ಬಿಜೆಪಿಗೆ; ಕಾಂಗ್ರೆಸ್ ತುಸು ಚೇತರಿಕೆ

Uttarakhand Election Results | ಉತ್ತರಾಖಂಡ ಮತ್ತೆ ಬಿಜೆಪಿಗೆ; ಕಾಂಗ್ರೆಸ್ ತುಸು ಚೇತರಿಕೆ

- Advertisement -
- Advertisement -

Uttarakhand Election Results | ಉತ್ತರಾಖಂಡ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬಿದ್ದಿದೆ. ರಾಜ್ಯದ ಮತದಾರರು ಬಿಜೆಪಿಗೆ ಮತ್ತೆ ಅಧಿಕಾರ ನೀಡಿದ್ದಾರೆ. ಆದರೆ ಕಾಂಗ್ರೆಸ್‌ ಕೂಡಾ ರಾಜ್ಯದಲ್ಲಿ ತುಸು ಚೇತರಿಸಿಕೊಂಡಿದೆ.

ಈ ಮಧ್ಯೆ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಚುನಾವಣೆಯಲ್ಲಿ ಸೋಲನ್ನು ಅನುಭವಿಸುತ್ತಿದ್ದಾರೆ. ಅವರು ರಾಜ್ಯದ ಖತಿಮಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇಷ್ಟೇ ಅಲ್ಲದೆ ರಾಜ್ಯದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌‌ ನಾಯಕ ಹರೀಶ್ ರಾವತ್‌ ಅವರು ಅಲ್ಕುವಾನ್ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ.

ರಾಜ್ಯದಲ್ಲಿ ಆಡಳಿತ ಹಿಡಿಯಲು 36 ಕ್ಷೇತ್ರಗಳ ಅಗತ್ಯವಿದ್ದು, ರಾಜ್ಯ ಬಿಜೆಪಿ 48 ಕ್ಷೇತ್ರವನ್ನು ಗೆದ್ದುಕೊಂಡಿದೆ. ಕಾಂಗ್ರೆಸ್‌ ಇದುವರೆಗೂ 18 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಬಿಎಸ್‌ಪಿ ಎರಡು ಕ್ಷೇತ್ರಗಳನ್ನು ಗೆದ್ದುಕೊಂಡರೆ, ಎರಡು ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ವಿಜಯಿಯಾಗಿದ್ದಾರೆ.

2017 ರಲ್ಲಿ ಬಿಜೆಪಿ 57 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 11 ಸ್ಥಾನಗಳನ್ನು ಮತ್ತು ಪಕ್ಷೇತರ ಅಭ್ಯರ್ಥಿಗಳು ಎರಡು ಸ್ಥಾನಗಳನ್ನು ಪಡೆದುಕೊಂಡಿದ್ದರು.

ಈ ನಡುವೆ ನಿನ್ನೆ ಉತ್ತರಾಖಂಡ ಕಾಂಗ್ರೆಸ್ ಹಿರಿಯ ನಾಯಕ ಹರೀಶ್ ರಾವತ್ ಅವರು ಮತಯಂತ್ರದ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಹರಿದ್ವಾರದಲ್ಲಿ ಇವಿಎಂಗಳನ್ನು ಇರಿಸಲಾಗಿರುವ ಕೊಠಡಿಯ ಸಿಸಿಟಿವಿ ಕ್ಯಾಮೆರಾಗಳು ಏಕೆ ವಿಫಲವಾಗಿವೆ ಎಂದು ಪ್ರಶ್ನಿಸಿದ್ದರು.


ರಾಜ್ಯದಲ್ಲಿ 70 ಕ್ಷೇತ್ರಗಳಿದ್ದು, ಅಧಿಕಾರಕ್ಕೆ 36 ಸ್ಥಾನಗಳು ಸಾಕಾಗುತ್ತದೆ. ಚುನಾವಣೆಯ ಅಂತಿಮ ಫಲಿತಾಂಶ ಕೆಳಗಿನಂತಿವೆ.

ಬಿಜೆಪಿ – 48 
ಕಾಂಗ್ರೆಸ್ – 18
ಬಿಎಸ್‌ಪಿ – 2
ಪಕ್ಷೇತರ – 2 

ಇದನ್ನೂ ಓದಿ: ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಿಬಿಐ, ಜಾರಿ ನಿರ್ದೇಶನಾಲಯವನ್ನು ಮುಚ್ಚಬೇಕು: ಇಂಡಿಯಾ ಮೈತ್ರಿ ಕೂಟದ ಮುಂದೆ ಅಖಿಲೇಶ್ ಯಾದವ್ ಪ್ರಸ್ತಾಪ

0
ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಇಲಾಖೆಗಳು ಅಗತ್ಯವಿಲ್ಲ, ಅವುಗಳನ್ನು ಮುಚ್ಚಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದು, ಈ ಬಗ್ಗೆ ಇಂಡಿಯಾ ಮೈತ್ರಿಕೂಟದ ನಾಯಕರ ಮುಂದೆ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ. ಸಿಬಿಐ ಮತ್ತು...