Homeಮುಖಪುಟಉತ್ತರಾಖಂಡ: ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕನ ಬಂಧನ

ಉತ್ತರಾಖಂಡ: ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕನ ಬಂಧನ

- Advertisement -
- Advertisement -

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉಚ್ಚಾಟಿತ ಬಿಜೆಪಿ ನಾಯಕ ಕಮಲ್ ರಾವತ್ ಅವರನ್ನು ಭಾನುವಾರ ಸಂಜೆ ಚಂಪಾವತ್‌ನಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಬಿಜೆಪಿ ನಾಯಕ ರಾವತ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೋ) ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯನ್ನು ಶನಿವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈವರೆಗೆ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ದಾಖಲಿಸಲು ಸಾಧ್ಯವಾಗಿಲ್ಲ.

ಚಂಪಾವತ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕನ ಮೇಲೆ ಉತ್ತರಾಖಂಡ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದರು. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ರಾವತ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿಯ ಚಂಪಾವತ್ ಜಿಲ್ಲಾಧ್ಯಕ್ಷ ನಿರ್ಮಲ್ ಮೆಹ್ರಾ ಹೇಳಿದ್ದಾರೆ.

‘ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಆತ ಪರಾರಿಯಾಗಿದ್ದು, ನಾವು ಅವನನ್ನು ಹುಡುಕುತ್ತಿದ್ದೇವೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು’ ಎಂದು ಚಂಪಾವತ್ ಪೊಲೀಸ್ ಠಾಣೆಯ ಉಸ್ತುವಾರಿ ಯೋಗೇಶ್ ಉಪಾಧ್ಯಾಯ ಶನಿವಾರ ಮಾಧ್ಯಮಗಳಿಗೆ ತಿಳಿಸಿದ್ದರು.

‘ಈಗಾಗಲೇ ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಈ ವಿಷಯವನ್ನು ಮಹಿಳಾ ಸಬ್ ಇನ್ಸ್ಪೆಕ್ಟರ್ ಪಿಂಕಿ ಧಾಮಿ ಅವರು ತನಿಖೆ ನಡೆಸುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿ ಉಪಾಧ್ಯಾಯ ಹೇಳಿದ್ದರು.

ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ರಾವತ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಆತನ ವಿರುದ್ಧ ಸೆಕ್ಷನ್ 363 (ಅಪಹರಣ), 354 (ಮಹಿಳೆಯರ ಮೇಲೆ ದೌರ್ಜನ್ಯ ಎಸಗುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ), 376 (ಅತ್ಯಾಚಾರ) ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

‘ರಾವತ್ ತನ್ನ 16 ವರ್ಷದ ಮಗಳನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಾನೆ ಮತ್ತು ತನ್ನ ಅಪರಾಧವನ್ನು ಬಹಿರಂಗಪಡಿಸಿದಂತೆ ಆಕೆಗೆ ಜೀವ ಬೆದರಿಕೆ ಹಾಕಿದ್ದಾನೆ’ ಎಂದು ಆಕೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.

ಉತ್ತರಾಖಂಡದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಅಪರಾಧ ಪ್ರಕರಣಗಳಲ್ಲಿ ಹಲವು ಬಿಜೆಪಿ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಘಟಕ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದೆ.

‘ಮೊದಲು, ರಿಷಿಕೇಶದಲ್ಲಿ ಮಹಿಳಾ ಸ್ವಾಗತಕಾರಿಣಿಯನ್ನು ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಮಗ ಪುಲ್ಕಿತ್ ಆರ್ಯ ಕೊಲೆ ಮಾಡಿದ್ದಾನೆ, ಈಗ ಚಂಪಾವತ್‌ನ ಬಿಜೆಪಿ ಮಂಡಲ ಅಧ್ಯಕ್ಷ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿದ್ದಾನೆ’ ಎಂದು ಉತ್ತರಾಖಂಡ ಕಾಂಗ್ರೆಸ್ ವಕ್ತಾರ ಗರಿಮಾ ಮೆಹ್ರಾ ದಸೌನಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ರಾವತ್ ವಿರುದ್ಧ ದೂರು ದಾಖಲಾದ ಗಂಟೆಗಳ ನಂತರ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಪ್ರಕರಣವನ್ನು ದಾಖಲಿಸಲು ಹಿಂದೇಟು ಹಾಕಿದರು. ಎಂಟು ಗಂಟೆಗಳ ವಿಳಂಬದ ನಂತರ ಎಫ್ಐಆರ್ ದಾಖಲಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ರಾಜ್ಯ ಪೊಲೀಸರು ಆಡಳಿತ ಪಕ್ಷದ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ದಸೌನಿ ಆರೋಪಿಸಿದ್ದಾರೆ.

ಮಹಿಳೆಯರ ಘನತೆಯ ಜೊತೆ ಆಟವಾಡುವ ಕಾರ್ಯಕರ್ತರನ್ನು ಪಕ್ಷ ಸಹಿಸುವುದಿಲ್ಲ ಮತ್ತು ತಪ್ಪಿತಸ್ಥರೆಂದು ಕಂಡುಬಂದರೆ ಆರೋಪಿ ಬಿಜೆಪಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಬಿಜೆಪಿ ಘಟಕ ಹೇಳಿದೆ.

‘ಪೊಲೀಸ್ ತನಿಖೆಯಲ್ಲಿ ಅವರು ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ (ಆರೋಪಿ ಬಿಜೆಪಿ ನಾಯಕ) ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ಘನತೆಯೊಂದಿಗೆ ಆಟವಾಡುವ ಯಾವುದೇ ಕಾರ್ಯಕರ್ತರನ್ನು ನಮ್ಮ ಪಕ್ಷ ಸಹಿಸುವುದಿಲ್ಲ’ ಎಂದು ಬಿಜೆಪಿಯ ಚಂಪಾವತ್ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಖೇಶ್ ಕಲ್ಖುರಿಯಾ ಹೇಳಿದರು.

ಇದನ್ನೂ ಓದಿ; ಬಿಹಾರ: ದಲಿತ ಮಹಿಳೆಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸ್ ಅಧಿಕಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

0
ಜಾತಿ, ಸಮುದಾಯ ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಬೇಡಿ, ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಚು.ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಖಡಕ್‌ ಸೂಚನೆಯನ್ನು ನೀಡಿದೆ. ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು...