ಭಾರೀ ಪ್ರವಾಹದಿಂದಾಗಿ ಉತ್ತರಖಾಂಡ್ ರಾಜ್ಯ ಉತ್ತರಿಸಿದೆ. ಗುಡ್ಡಗಾಡು ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದಲೂ ಭಾರೀ ಮಳೆಯಾಗುತ್ತಿದೆ. 11 ಮಂದಿ ಸಾವನ್ನಪ್ಪಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ. 12 ಮಂದಿ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.
ರಸ್ತೆ ಮತ್ತು ಕಟ್ಟಡಗಳು ಹಾಳಾಗಿವೆ. ಸಂಪರ್ಕ ರಹಿತ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರು, ಸ್ಥಳೀಯರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ.
ನೇಪಾಳದಿಂದ ಬಂದಿದ್ದ ಮೂವರು ಕಾರ್ಮಿಕರು ಸೇರಿದಂತೆ ಐವರು ದುರ್ಮರಣ ಹೊಂದಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ತಿಳಿಸಿದೆ. ಪೌರಿ ಜಿಲ್ಲೆಯ ಲ್ಯಾನ್ಸ್‌ಡೌನ್ ಬಳಿ ಕಾರ್ಮಿಕರು ಉಳಿದುಕೊಂಡಿದ್ದು, ಪ್ರವಾಹದಿಂದಾಗಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಜಯ್ ಕುಮಾರ್ ಜೋಗ್ದಾಂಡೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.
ಛಂಪಾವತ್ ಜಿಲ್ಲೆಯಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡವು ನೀರಿನ ಏರಿಕೆಯಿಂದಾಗಿ ಕುಸಿದುಬಿದ್ದಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರೊಂದಿಗೆ ಪರಿಸ್ಥಿತಿಯ ಅವಲೋಕನಕ್ಕಾಗಿ ಇಂದು ಮಾತನಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಾಯವನ್ನು ನೀಡುವುದಾಗಿ ತಿಳಿಸಿದ್ದಾರೆ.
#WATCH | An under construction bridge, over a raging Chalthi River in Champawat, washed away due to rise in the water level caused by incessant rainfall in parts of Uttarakhand. pic.twitter.com/AaLBdClIwe
— ANI (@ANI) October 19, 2021
ಪ್ರವಾಹದ ಭೀಕರತೆಯನ್ನು ತೋರುವ ಚಿತ್ರಗಳು ಹಾಗೂ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.
ಉತ್ತರಖಾಂಡ್‌ನ ಐಕಾನಿಕ್ ನೈನಿತಾಲ್ ಸರೋವರ ತುಂಬಿ ಹರಿದಿದ್ದು, ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿರುವ ವಿಡಿಯೊವನ್ನು ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ. ನೀರು ಮೊಣಕಾಲಿನಷ್ಟು ಆಳವಾಗಿದೆ ಮತ್ತು ಹೆಚ್ಚಿನ ವೇಗದಲ್ಲಿ ಹರಿಯುತ್ತದೆ; ಇಬ್ಬರು ಪುರುಷರು ರಸ್ತೆ ದಾಟಲು ಹೆಣಗಾಡುತ್ತಿರುವುದನ್ನು ಕಾಣಬಹುದು.
#WATCH | Uttarakhand: Nainital Lake overflows and floods the streets in Nainital & enters building and houses here. The region is receiving incessant heavy rainfall. pic.twitter.com/G2TLfNqo21
— ANI (@ANI) October 19, 2021
ಹಾಲ್ಡ್‌ವಾನಿ ಜಿಲ್ಲೆಯಲ್ಲಿ ಗೌಲ ನದಿ ತುಂಬಿ ಹರಿಯುತ್ತಿದ್ದು, ಸೇತುವೆ ಕುಸಿಯಲು ಆರಂಭಿಸಿತ್ತು. ಸೇತುವೆ ಮೇಲೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಮತ್ತೊಂದು ತುದಿಯಲ್ಲಿ ನಿಂತ ಸ್ಥಳೀಯರು ಎಚ್ಚರಿಸುತ್ತಿರುವ ದೃಶ್ಯವನ್ನು ಎಎನ್‌ಐ ಸಂಸ್ಥೆ ಹಂಚಿಕೊಂಡಿದೆ. ಕೆಲವೇ ಸೆಕೆಂಡ್‌ಗಳಲ್ಲಿ ಸೇತುವೆಯ ಕುಸಿತ ಆರಂಭವಾಗುವುದನ್ನು ಇದೇ ವಿಡಿಯೋದಲ್ಲಿ ಕಾಣಬಹುದು.
#WATCH | Uttarakhand:Locals present at a bridge over Gaula River in Haldwani shout to alert a motorcycle rider who was coming towards their side by crossing the bridge that was getting washed away due to rise in water level. Motorcycle rider turned back & returned to his own side pic.twitter.com/Ps4CB72uU9
— ANI (@ANI) October 19, 2021
ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್ ಬಳಿಯ ಐಷಾರಾಮಿ ಲೆಮನ್ ಟ್ರೀ ಹೋಟೆಲ್‌ನ ಛಾವಣಿಯ ಮೇಲೆ ಅತಿಥಿಗಳು ಸಿಕ್ಕಿಬಿದ್ದಿರುವುದನ್ನು ಸ್ವತಂತ್ರ ಫೋಟೋಗ್ರಾಫರ್ ಮುಸ್ತಫಾ ಕುರೈಶಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೀರಿನ ಮಟ್ಟ ಹೆಚ್ಚುತ್ತಿರುವುದನ್ನು ಅತಿಥಿಗಳು ನೋಡುತ್ತಿದ್ದಾರೆ.
View this post on Instagram
View this post on Instagram
ರಾಷ್ಟ್ರೀಯ ಉದ್ಯಾನದ ಬಳಿ ರಾಮಗಂಗಾ ನದಿ ತುಂಬಿ ಹರಿಯುತ್ತಿದ್ದು, ಕಾರುಗಳು ಮುಳುಗಡೆಯಾಗಿವೆ.
View this post on Instagram
ಧುಮ್ಮಿಕ್ಕುತ್ತಿರುವ ನೀರಿನಲ್ಲಿ ಸಿಲುಕಿರುವ ಕಾರನ್ನು ಮೇಲೆತ್ತಲು ಯತ್ನಿಸುತ್ತಿರುವ ಸಂಬಂಧ ಎಎನ್‌ಐ ಸಂಸ್ಥೆ ವಿಡಿಯೋ ಹಂಚಿಕೊಂಡಿದೆ. ಬಾರ್ಡರ್ ರೋಡ್ ಸಂಘಟನೆಯಿಂದ ಕಾರನ್ನು ರಕ್ಷಿಸಲಾಯಿತು.
#WATCH | Uttarakhand: Occupants of a car that was stuck at the swollen Lambagad nallah near Badrinath National Highway, due to incessant rainfall in the region, was rescued by BRO (Border Roads Organisation) yesterday. pic.twitter.com/ACek12nzwF
— ANI (@ANI) October 19, 2021
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಆರಂಭಿಸಿದೆ. ಎನ್‌ಡಿಆರ್‌ಎಫ್ ಮುಖ್ಯಸ್ಥ ಸತ್ಯ ಪ್ರಧಾನ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
#UttarakhandRains Update
19/10/21
?Hvy rains in Uttarakhand
?Flooding at places
?10 tms of @NDRFHQ depld
?Day & nt Ops ON
?citizens evacuated safely
?#NDRF in action-Rudrapur town?@HMOIndia @PMOIndia @BhallaAjay26 @PIBHomeAffairs @PIBDehradun @ANI @DDNewsHindi pic.twitter.com/jBD6FU0ASX— ѕαtчα prαdhαnसत्य नारायण प्रधान ସତ୍ୟ ପ୍ରଧାନ (@satyaprad1) October 19, 2021
ರಾಜ್ಯದ ವಿಪತ್ತು ನಿರ್ವಹಣಾ ತಂಡಗಳು ಕೂಡ ಕಾರ್ಯಪ್ರವೃತ್ತವಾಗಿವೆ. ಮಂಗಳವಾರ ಬೆಳಿಗ್ಗೆ ಕೇದಾರನಾಥ ದೇವಸ್ಥಾನದಿಂದ ಹಿಂತಿರುಗುವಾಗ ಸಿಲುಕಿದ್ದ 22 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ.
“ಹಿಮಾಲಯನ್ ದೇವಸ್ಥಾನಗಳಿಗೆ ವಾಹನಗಳ ತೆರಳದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಂದ್ರಭಾಗ ನದಿಯ ಮೇಲಿನ ಸೇತುವೆಯನ್ನು ವಾಹನಗಳುದಾಟುವಂತಿಲ್ಲ ಎಂದು ಎಚ್ಚರಿಸಲಾಗಿದೆ. ತಪೋವನ್, ಲಕ್ಷ್ಮಣ ಜೂಲ ಮತ್ತು ಮುನಿ-ಕಿ-ರೆತಿ ಭದ್ರಕಾಳಿ ತಡೆಗೋಡೆಗಳನ್ನು ದಾಟುವಂತಿಲ್ಲ” ಎಂದು ಸರ್ಕಾರ ಸೂಚಿಸಿದೆ.
ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಬದರಿನಾಥ ದೇವಸ್ಥಾನಕ್ಕೆ ಹೋಗುವ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಹವಾಮಾನ ಯಥಾಸ್ಥಿತಿಗೆ ಮರಳುವ ತನಕ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಮುಖ್ಯಮಂತ್ರಿಯವರು ಯಾತ್ರಾರ್ಥಿಗಳಿಗೆ ಮನವಿ ಮಾಡಿದ್ದಾರೆ.


