Homeಮುಖಪುಟ50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ತೀರ್ಮಾನ

50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ತೀರ್ಮಾನ

- Advertisement -
- Advertisement -

ಡೆಹ್ರಾಡೂನ್:  ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತ ವಿರೋಧಿ ಘಟನೆಗಳ ನಡುವೆ 50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ಭಾನುವಾರದಂದು ತೀರ್ಮಾನಿಸಿದೆ.

ಸುಮಾರು ಅರ್ಧ ಶತಮಾನದಷ್ಟು ಹಳೆಯದಾದ ಮಸೀದಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಿವಿಧ ಹಿಂದೂ ಬಲಪಂಥೀಯ ಸಂಘಟನೆಗಳು ‘ಮಹಾಪಂಚಾಯತ್’ ಆಯೋಜಿಸಿದ ನಂತರ ಉತ್ತರಕಾಶಿಯು ಉದ್ವಿಗ್ನಗೊಂಡಿದೆ. ಈ ಮಸೀದಿ ನಿರ್ಮಾಣವು ಅಕ್ರಮವೆಂದು ಪಂಚಾಯತ್ ಹೇಳಿದೆ.

ಉತ್ತರಕಾಶಿಯ ರಾಮಲೀಲಾ ಮೈದಾನದಲ್ಲಿ ಬಿಗಿ ಭದ್ರತೆಯ ನಡುವೆ “ದೇವಭೂಮಿ ವಿಚಾರ ಮಂಚ್” ಬ್ಯಾನರ್ ಅಡಿಯಲ್ಲಿ ನಡೆದ ಮಹಾಪಂಚಾಯತ್ ಅನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೆಲವು ಶಾಸಕರು ಉದ್ದೇಶಿಸಿ ಮಾತನಾಡಿದರು. ಆದಾಗ್ಯೂ, ಈ ಪಂಚಾಯತ್ ನಲ್ಲಿ ಸುಮಾರು 500 ಜನರು ಮಾತ್ರ ಭಾಗವಹಿಸಿದ್ದರು. ಒಂದು ತಿಂಗಳ ಅವಧಿಯಲ್ಲಿ ಮತ್ತೊಂದು ಮಹಾಪಂಚಾಯತ್ ಅನ್ನು ನಡೆಸಲು ತೀರ್ಮಾನಿಸಲಾಗಿದೆ.

ಜನಸಮೂಹವನ್ನುದ್ದೇಶಿಸಿ ಮಾತನಾಡಿದ ವಿವಾದಿತ ಬಿಜೆಪಿ ನಾಯಕ ಮತ್ತು ತೆಲಂಗಾಣ ಶಾಸಕ ಟಿ ರಾಜಾ ಸಿಂಗ್, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ “ಭೂ ಜಿಹಾದಿಗಳ” ವಿರುದ್ಧ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು ಕಲಿಯಬೇಕಿದೆ ಹಾಗೆಯೇ ಅವರ “ ಬುಲ್ಡೋಜರ್‌ ಸಂಸ್ಕೃತಿ’ಯಿಂದ ಸ್ಫೂರ್ತಿ ಪಡೆಯಬೇಕಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ‘ಚಾಯ್ ಪೇ ಚರ್ಚಾ’ ಮಾಡಬೇಕು. ಯುಪಿಯಲ್ಲಿ ಜಿಹಾದಿಗಳಿಗೆ ಅವರು ಪಾಠ ಕಲಿಸುವ ರೀತಿಯಲ್ಲಿ ತಾವು ಮುಂದುವರಿಯಬೇಕು ಎಂದು ಸಿಂಗ್ ಅವರಿಗೆ ಪ್ರಚೋದಿಸಿದರು.

ಉತ್ತರಾಖಂಡದಲ್ಲಿ ‘ಭೂಮಿ ಜಿಹಾದ್’ ಮಾಡಲು ನಾವು ಜಿಹಾದಿಗಳಿಗೆ ಅವಕಾಶ ನೀಡುವುದಿಲ್ಲ. ಭೂಮಿ ಜಿಹಾದ್’ ಗಳಿಗೆ ಹೇಗೆ ಪಾಠ ಕಲಿಸಬೇಕೆಂದು ಉತ್ತರಾಖಂಡದ ಜನರಿಂದ ದೇಶದ ಹಿಂದೂಗಳು ಸ್ಫೂರ್ತಿ ಪಡೆಯುತ್ತಿದ್ದಾರೆ. ಇದು ಕೇವಲ ಉತ್ತರಕಾಶಿಯ ಸಮಸ್ಯೆಯಲ್ಲ. ದೇಶಾದ್ಯಂತ ಭೂ ಜಿಹಾದ್ ಮತ್ತು ಲವ್ ಜಿಹಾದ್ ನಿರ್ಮೂಲನೆಗೆ ನಾವು ಒಗ್ಗೂಡಬೇಕಾಗಿದೆ ಎಂದು ಶಾಸಕ ಸಿಂಗ್ ಪ್ರತಿಪಾದಿಸಿದರು.

“ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ಅನ್ನು ಹಿಂದೂ ಬಲಪಂಥೀಯ ಸಂಘಟನೆಗಳು ಬಳಸುವ ಪದಗಳಾಗಿವೆ ಮತ್ತು ಇದನ್ನು ಸಾಮಾನ್ಯವಾಗಿ “ಮುಸ್ಲಿಂ-ವಿರೋಧಿ” ವಾಕ್ಚಾತುರ್ಯವಾಗಿ ನೋಡಲಾಗುತ್ತದೆ.

ಉತ್ತರಾಖಂಡದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತ ವಿರೋಧಿ ಘಟನೆಗಳ ಮಧ್ಯೆ ಮಹಾಪಂಚಾಯತ್  ನಡೆಸಿದೆ. ಇದು ಮುಸ್ಲಿಮರ ವಿರುದ್ಧ ಸಾಮಾಜಿಕ ಬಹಿಷ್ಕಾರದ ಕರೆಗಳಿಗೆ ಹೆಚ್ಚಿನ ನಿದರ್ಶನಗಳಿಗೆ ಒಂದು ಉದಾಹರಣೆಯಾಗಿದೆ.

ಮತ್ತೊಬ್ಬ ಬಿಜೆಪಿ ನಾಯಕ ಮತ್ತು ಗಂಗೋತ್ರಿ ಶಾಸಕ ಸುರೇಶ್ ಸಿಂಗ್ ಚೌಹಾಣ್ ಅವರು, ಉತ್ತರಕಾಶಿಯ ಧಾರ್ಮಿಕ ಪಟ್ಟಣದ ಚಿತ್ರಣವನ್ನು ಕಳೆದುಕೊಳ್ಳಲು ನಾವು ಬಿಡುವುದಿಲ್ಲ ಮತ್ತು ಮಾಂಸ ಮತ್ತು ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ನಿಷೇಧಿಸಬೇಕು ಎಂದರು.

ನಾವು ಭಯದ ವಾತಾವರಣವನ್ನು ಸೃಷ್ಟಿಸುತ್ತಿಲ್ಲ, ಆದರೆ ಇದು ಧಾರ್ಮಿಕ ಕ್ಷೇತ್ರದ ಪಟ್ಟಣವಾಗಿದೆ. ಆದಾಗ್ಯೂ, ರೋಹಿಂಗ್ಯಾ ಮುಸ್ಲಿಮರು ಮಾರಾಟಗಾರರಂತೆ ನಟಿಸುತ್ತಿದ್ದಾರೆ, ಉತ್ತರಕಾಶಿಯನ್ನು ಕಲುಷಿತಗೊಳಿಸುತ್ತಿದ್ದಾರೆ. ಇದನ್ನು ಸ್ಥಳೀಯರು ಸಹಿಸುವುದಿಲ್ಲ. ಕೆಲವರು ಇಲ್ಲಿಯ ವಾತಾವರಣವನ್ನು ಕದಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾವು ಅವರನ್ನು ಯಶಸ್ವಿಯಾಗಲು ಬಿಡುವುದಿಲ್ಲ. ಹಾಗಾಗಿ ಹಿಂದೂ ಸಮುದಾಯ ಒಗ್ಗೂಡಬೇಕು ಎಂದು ಅವರು ಕರೆ ನೀಡಿದರು.

ಪಟ್ಟಣದಲ್ಲಿ ದೀರ್ಘಕಾಲ ವಾಸಿಸುವವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಮುಖ್ಯಮಂತ್ರಿಯವರು ಮಸೀದಿಯ ವಿಷಯದ ಬಗ್ಗೆ ಗಮನಹರಿಸಿದ್ದಾರೆ. ಇದು ತನಿಖೆಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಒಂದು ತಿಂಗಳ ನಂತರ ರಾಮಲೀಲಾ ಮೈದಾನದಲ್ಲಿ ಮತ್ತೊಂದು ಮಹಾಪಂಚಾಯತ್ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯಾಧ್ಯಕ್ಷ ಅನುಜ್ ವಾಲಿಯಾ ಘೋಷಿಸಿದರು.

ನಾವು ಮಸೀದಿಯ ವಿರುದ್ಧ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ಆಯೋಜಿಸುತ್ತೇವೆ. ಇದು ನಮ್ಮ ಹೋರಾಟದ ಆರಂಭವಾಗಿದೆ ಎಂದು ಅವರು ಹೇಳಿದರು.

ಮಹಾಪಂಚಾಯತ್‌ಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದ ಕೆಲವೇ ದಿನಗಳಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಅನುಮತಿ ನೀಡಲಾಗಿದೆ. ಸ್ಥಳೀಯ ಆಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿತು.

ಇದನ್ನೂ ಓದಿ…‘ದೆಹಲಿ ಚಲೋ’ ರೈತರ ಮೆರವಣಿಗೆ: ರಾಜಧಾನಿ-ನೋಯ್ಡಾ ಗಡಿಯಲ್ಲಿ ಬೃಹತ್ ಟ್ರಾಫಿಕ್ ಜಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...