Homeಮುಖಪುಟಉತ್ತರಾಖಂಡ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವ ಮತ್ತು ಶಾಸಕ

ಉತ್ತರಾಖಂಡ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವ ಮತ್ತು ಶಾಸಕ

- Advertisement -
- Advertisement -

ಉತ್ತರಾಖಂಡ ಬಿಜೆಪಿ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಯಶಪಾಲ್ ಆರ್ಯ ಮತ್ತು ಅವರ ಮಗ ನೈನಿತಾಲ್ ಕ್ಷೇತ್ರದ ಶಾಸಕ ಸಂಜೀವ್ ಆರ್ಯ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಈ ಒಂದು ವರ್ಷದಲ್ಲಿ ಮೂವರು ಮುಖ್ಯಮಂತ್ರಿಗಳು ಬದಲಾದ ಬಳಿಕ ಉತ್ತರಾಖಂಡ ಈ ಉಭಯ ನಾಯಕರು ಪಕ್ಷ ತೊರೆಯುತ್ತಿರುವುದು ಬಿಜೆಪಿ ಪಾಲಿಗೆ ಕೆಟ್ಟ ಸುದ್ದಿಯಾಗಿದೆ. ಚುನಾವಣೆಗೆ ಕೆಲವೇ ತಿಂಗಳುಗಳು ಇರುವಾಗ ಈ ಪಕ್ಷ ಬದಲಾವಣೆ ಚುನಾವಣೆ ಮೇಲೆ ತೀವ್ರ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಯಶಪಾಲ್ ಆರ್ಯ ಈ ಹಿಂದೆ ಕಾಂಗ್ರೆಸ್‌ನಲ್ಲಿಯೇ ಇದ್ದರು. 2007 ರಿಂದ 2014 ರವರೆಗೆ ಅವರು ಉತ್ತರಾಖಂಡ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾಗಿದ್ದರು. ಆದರೆ ತದನಂತರ ಅವರು ಬಿಜೆಪಿಗೆ ಹಾರಿದ್ದರು. ಈಗ ಅವರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಮಗನೊಂದಿಗೆ ಮರಳಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, “ತಂದೆ ಮಗ ಇಬ್ಬರು ಪಕ್ಷಕ್ಕೆ ಮರಳುತ್ತಿರುವುದು ಸಂತಸ ತಂದಿದೆ. ನಮ್ಮ ಕಾಂಗ್ರೆಸ್ ಕುಟುಂಬಕ್ಕೆ ಅವರಿಗೆ ಸ್ವಾಗತವಿದೆ. ಅವರು ಕಾಂಗ್ರೆಸ್ ಸೇರುತ್ತಿರುವುದು ಉತ್ತರಖಂಡದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿರುವುದರ ದ್ಯೋತಕ” ಎಂದಿದ್ದಾರೆ.

ಕಾಂಗ್ರೆಸ್ ವಕ್ತರರಾದ ರಣದೀಪ್ ಸುರ್ಜೇವಾಲಾ ಮಾತನಾಡಿ “ಯಶಪಾಲ್‌ರವರು ತಮ್ಮ ಸಚಿವ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಪಕ್ಷ ಸೇರುವುದರಿಂದ ಕಾಂಗ್ರೆಸ್‌ಗೆ ಬಲ ಬರಲಿದೆ” ಎಂದಿದ್ದಾರೆ.

ದೆಹಲಿಯ ಕಾಂಗ್ರೆಸ್ ಭವನದಲ್ಲಿ ಅವರು ಪಕ್ಷ ಸೇರುವ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರಾದ ಹರೀಶ್ ರಾವತ್ ಹಾಜರಿದ್ದರು.


ಇದನ್ನೂ ಓದಿ: BJP ಶಾಸಕ ಉಮಾಪತಿ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ?: ಸಿಎಂಗೆ ಕಾಂಗ್ರೆಸ್ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೈದರಾಬಾದ್: ಮದರ್ ತೆರೇಸಾ ಶಾಲೆ ಮೇಲೆ ಕೇಸರಿ ವಸ್ತ್ರಧಾರಿಗಳಿಂದ ದಾಳಿ: ಜೈಶ್ರೀರಾಮ್‌ ಘೋಷಣೆ ಕೂಗಿ...

0
ಕೇಸರಿ ಬಣ್ಣದ ಅಂಗಿ ಮತ್ತು ಶಾಲುಗಳನ್ನು ಧರಿಸಿದ್ಧ ಗುಂಪೊಂದು ಹೈದರಾಬಾದ್‌ ಮಂಚೇರಿಯಲ್ ಜಿಲ್ಲೆಯ ಕನ್ನೆಪಲ್ಲಿಯಲ್ಲಿರುವ ಸೇಂಟ್ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯ ಆವರಣಕ್ಕೆ ನುಗ್ಗಿ ಶಾಲೆಯಲ್ಲಿ ದಾಂಧಲೆ ನಡೆಸಿ ಪಾದ್ರಿಯ ಮೇಲೆ...