Homeಮುಖಪುಟಉತ್ತರಾಖಂಡ| ಪರಸ್ಪರ ಕಚೇರಿಗಳ ಮೇಲೆ ಗುಂಡು ಹಾರಿಸಿಕೊಂಡ ಶಾಸಕರು; ವಿಡಿಯೊ ವೈರಲ್

ಉತ್ತರಾಖಂಡ| ಪರಸ್ಪರ ಕಚೇರಿಗಳ ಮೇಲೆ ಗುಂಡು ಹಾರಿಸಿಕೊಂಡ ಶಾಸಕರು; ವಿಡಿಯೊ ವೈರಲ್

- Advertisement -
- Advertisement -

ಖಾನ್‌ಪುರದ ಸ್ವತಂತ್ರ ಶಾಸಕ ಉಮೇಶ್ ಕುಮಾರ್ ಮತ್ತು ಲಕ್ಸರ್ ಕುನ್ವಾರ್‌ನ ಬಿಜೆಪಿ ಶಾಸಕ ಪ್ರಣವ್ ಸಿಂಗ್ ಚಾಂಪಿಯನ್ ನಡುವಿನ ದೀರ್ಘಕಾಲದ ಜಗಳ ಭಾನುವಾರ ಹಿಂಸಾತ್ಮಕ ತಿರುವು ಪಡೆದುಕೊಂಡಿದೆ. ಪ್ರಣವ್ ಸಿಂಗ್ ಚಾಂಪಿಯನ್ ಮಾಜಿ ಅಧಿಕಾರಿಯ ಬಳಿಗೆ ಬಂದು ಪಿಸ್ತೂಲಿನಿಂದ ಗುಂಡು ಹಾರಿಸಿ ಕಲ್ಲು ಎಸೆಯಲು ಪ್ರಾರಂಭಿಸಿರುವ ವಿಡಿಯೊ ವೈರಲ್ ಆಗಿದೆ.

ಇಡೀ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಶೀಘ್ರದಲ್ಲೇ ವೈರಲ್ ಆಗಿದೆ. ವೀಡಿಯೊದಲ್ಲಿ, ಚಾಂಪಿಯನ್ ಮತ್ತು ಅವರ ಬೆಂಬಲಿಗರು ಕುಮಾರ್ ಅವರ ಕಚೇರಿಯ ಮೇಲೆ ಗಲಾಟೆ ಮಾಡುತ್ತಿರುವುದು ಕಂಡುಬಂದಿದೆ.

ಅವರು ಪಿಸ್ತೂಲುಗಳಿಂದ ಹಲವಾರು ಗುಂಡು ಹಾರಿಸುತ್ತಾ ನಿಂಸಿದಿದ್ದಾರೆ. ಕಲ್ಲುಗಳನ್ನು ಎಸೆಯುತ್ತಿರುವುದು ಕಂಡುಬಂದಿದೆ. ಪ್ರತಿಯಾಗಿ, ಕುಮಾರ್ ಮತ್ತು ಅವರ ಬೆಂಬಲಿಗರು ಚಾಂಪಿಯನ್ ಅವರ ಕಚೇರಿಯ ಮೇಲೆ ಗುಂಡು ಹಾರಿಸಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಆರೋಪಿಗಳು ಹಗಲು ಹೊತ್ತಿನಲ್ಲಿ ಕುಮಾರ್ ಅವರ ಕಚೇರಿಯ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು. ದೃಶ್ಯಗಳಲ್ಲಿ, ಕಚೇರಿಯ ಗಾಜಿನ ಕಿಟಕಿಯಲ್ಲಿ ಎರಡು ಗುಂಡುಗಳ ರಂಧ್ರಗಳು ಕಂಡುಬಂದಿವೆ ಮತ್ತು ಗೋಡೆಯ ಮೇಲೆ ಗುಂಡುಗಳ ಗುರುತುಗಳು ಸಹ ಗೋಚರಿಸುತ್ತಿವೆ.

ಗುಂಡು ಹಾರಿಸಿದ ಆರೋಪದ ಮೇಲೆ ಪೊಲೀಸರು ಇಬ್ಬರೂ ನಾಯಕರನ್ನು ಬಂಧಿಸಿದ್ದಾರೆ. ದಾಳಿಯ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ವಿಡಿಯೋ ವೈರಲ್ ಆದ ನಂತರ ಇಬ್ಬರೂ ನಾಯಕರನ್ನು ಬಂಧಿಸಿದರು.

ಕುಮಾರ್ ಅವರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದ್ದಾಗಿ ಬಿಜೆಪಿ ನಾಯಕ ಹೇಳಿದ್ದಾರೆ. ತನ್ನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ನಾನು ಪ್ರತಿಕ್ರಿಯಿಸಿದಾಗ, ನನ್ನನ್ನು ಬಂಧಿಸಲಾಯಿತು ಇದು ಅನ್ಯಾಯ. ನಾನು ಅದರ ವಿರುದ್ಧ ಹೋರಾಡುತ್ತೇನೆ” ಎಂದು ಚಾಂಪಿಯನ್ ಮಾಧ್ಯಮಗಳಿಗೆ ತಿಳಿಸಿದರು.

ದಾಳಿಯ ಬಗ್ಗೆ ದೂರು ನೀಡಿದಾಗ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ ಎಂದು ಅವರ ಪತ್ನಿ ದೇವಯಾನಿ ಸಿಂಗ್ ಹೇಳಿದ್ದಾರೆ. “ಗೌರವ ಉಳಿಸಲು ತಮ್ಮ ಪತಿಯ ಪ್ರತಿಕ್ರಿಯೆ ಅಗತ್ಯವಾಗಿತ್ತು ಎಂದು ಹೇಳಿದರು.

ಹರಿದ್ವಾರ ಎಸ್‌ಎಸ್‌ಪಿ ಪ್ರಮೇಂದ್ರ ಸಿಂಗ್ ದೋವಲ್ ಅವರು ಚಾಂಪಿಯನ್ ಮತ್ತು ಕುಮಾರ್ ಇಬ್ಬರನ್ನೂ ವಶಕ್ಕೆ ಪಡೆದಿದ್ದೇವೆ ಎಂದು ಹೇಳಿದರು. ಇಬ್ಬರು ನಾಯಕರ ನಡುವಿನ ಪೈಪೋಟಿ ಪ್ರಸಿದ್ಧವಾಗಿದೆ. ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಆಗಾಗ್ಗೆ ಪರಸ್ಪರ ಜಗಳವಾಡುತ್ತಾರೆ ಎಂದು ದೋವಲ್ ತಿಳಿಸಿದ್ದಾರೆ.

ಇದನ್ನೂ ಓದಿ; ನೀರಿನ ಟ್ಯಾಂಕ್‌ ಮಲೀನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ವೆಂಗೈವಾಯಲ್‌ನಲ್ಲಿ ದಲಿತರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....