Homeಮುಖಪುಟಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

- Advertisement -
- Advertisement -

ಡಿಸೆಂಬರ್ 31 ರೊಳಗೆ ಮುಸ್ಲಿಂ ಕುಟುಂಬಗಳನ್ನು ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸುವ ಆತಂಕಕಾರಿ ಬೆಳವಣಿಗೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ. ಇತ್ತಿಚೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು, ಕೆಲವು ದುಷ್ಕರ್ಮಿಗಳ ಗುಂಪುಗಳು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಗುರಿ ಮಾಡುವುದನ್ನು ಪ್ರಾರಂಭಿಸಿವೆ. ಉತ್ತರಾಖಂಡ

ಚಮೋಲಿಯ ಖಾನಸರ್ ಪಟ್ಟಣದಲ್ಲಿ ವರ್ತಕರ ಮಂಡಳಿಯು ಡಿಸೆಂಬರ್ 31 ರೊಳಗೆ 15 ಮುಸ್ಲಿಂ ಕುಟುಂಬಗಳನ್ನು ಪಟ್ಟಣವನ್ನು ಖಾಲಿ ಮಾಡುವಂತೆ ನಿರ್ಣಯವನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಕೋಮು ಸೌಹಾರ್ದತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಪ್ರದೇಶದಲ್ಲಿನ ಎಲ್ಲಾ “ಹೊರಗಿನವರನ್ನು” ಪರಿಶೀಲಿಸುವಂತೆ ಗುಂಪುಗಳು ಒತ್ತಾಯಿಸಿದೆ.

ದುಷ್ಕರ್ಮಿಗಳ ಈ ನಿರ್ಧಾರದಿಂದ ಪಟ್ಟಣದಲ್ಲಿ ದೀರ್ಘಕಾಲದಿಂದಲೂ ವಾಸಿಸುತ್ತಿರುವ ಮುಸ್ಲಿಂ ನಿವಾಸಿಗಳನ್ನು ಕೂಡಾ ಆಘಾತ ಮತ್ತು ದಿಗ್ಭ್ರಮೆಗೊಳಿಸಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಇತ್ತಿಚಿನ ವಿಡಿಯೊದಲ್ಲಿ ವ್ಯಾಪಾರಿಗಳ ರ‍್ಯಾಲಿಯ ವೇಳೆ ಮೆರವಣಿಗೆಯಲ್ಲಿ ಹೆಚ್ಚಾಗಿ ಸ್ಥಳೀಯ ಉದ್ಯಮಿಗಳು ಭಾಗವಹಿಸಿದ್ದರು. ಇದರಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಿರುವುದು ದಾಖಲಾಗಿದೆ. ಎತ್ತುತ್ತಿರುವುದನ್ನು ತೋರಿಸುತ್ತದೆ. ಮುಸ್ಲಿಮರಿಗೆ ನಿಷೇಧ ಹೇರುವ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪವಾಗಿದ್ದು, ಈ ಕ್ರಮವನ್ನು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯದ ಘೋರ ಕೃತ್ಯ ಎಂದು ಬಣ್ಣಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಸ್ಥಳೀಯ ಹೋರಾಟಗಾರರೊಬ್ಬರು, “ಈ ನಿರ್ಧಾರವು ಸ್ವೀಕಾರಾರ್ಹವಲ್ಲ. ಇದು ಸಮಾನತೆ ಮತ್ತು ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ. ನಾವು ಈ ಪ್ರಸ್ತಾಪದ ವಿರುದ್ಧ ಹೋರಾಡುತ್ತೇವೆ ಮತ್ತು ಎಲ್ಲಾ ನಾಗರಿಕರ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಸ್ಥಳೀಯ ನಿವಾಸಿ, “ಇದು ಕೇವಲ 15 ಕುಟುಂಬಗಳ ವಿಚಾರವಲ್ಲ. ಇದು ನಮ್ಮ ಸಮಾಜದ ರಚನೆಗೆ ಸಂಬಂಧಿಸಿದ ವಿಚಾರವಾಗಿದೆ. ಇಂತಹ ವಿಭಜಕ ಕ್ರಮಗಳ ವಿರುದ್ಧ ನಾವು ಒಟ್ಟಾಗಿ ನಿಲ್ಲಬೇಕು.” ಎಂದು ಹೇಳಿದ್ದಾರೆ. ಅದಾಗ್ಯೂ, ಹತ್ತಾರು ವರ್ಷಗಳಿಂದ ಪಟ್ಟಣದಲ್ಲಿ ನೆಲೆಸಿರುವ ಸಂತ್ರಸ್ತ ಕುಟುಂಬಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ.

“ವರ್ತಕರ ಸಂಘದ ಈ ಹಠಾತ್ ನಿರ್ಧಾರದಿಂದ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ನಾವು ದಶಕಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ ಮತ್ತು ನಮ್ಮ ಕುಟುಂಬಗಳು ಈ ಸಮುದಾಯದ ಅವಿಭಾಜ್ಯ ಅಂಗವಾಗಿದೆ. ನಮ್ಮನ್ನು ಏಕೆ ಇಲ್ಲಿಂದ ಹೊರಹೋಗುವಂತೆ ಒತ್ತಾಯಿಸುತ್ತಿದ್ದಾರೆ?” ಎಂದು ಹೆಸರು ಹೇಳಲು ಇಚ್ಛಿಸದ ಪಟ್ಟಣದಲ್ಲೆ ಉಳಿಯಲು ಬಯಸುವ ಸ್ಥಳೀಯ ಮುಸ್ಲಿಂ ನಿವಾಸಿಯೊಬ್ಬರು ಹೇಳಿದ್ದಾರೆ.

ಹಿಂದೂ ಮಹಿಳೆಯರು ಮತ್ತು ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ನಡುವೆ ನಡೆಯುವ ಅಪರಾಧ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾನ ಕೈಗೊಳ್ಳಲಾಗಿದೆ ಎಂದು ಮೈಥಾನ್ ಸೇವಾ ಸಮಿತಿಯ ಅಧ್ಯಕ್ಷ ವೀರೇಂದ್ರ ಸಿಂಗ್ ಹೇಳಿದ್ದಾರೆ. ಮೈಥಾನ್ ಮಾರುಕಟ್ಟೆಯಲ್ಲಿ ನಡೆದ ‘ಜಾಗೃತ’ ರ‍್ಯಾಲಿಯ ನಂತರ ವರ್ತಕರ ಸಂಘದ ಸಭೆಯಲ್ಲಿ ಈ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಈ ಸಭೆಯಲ್ಲಿ ಖಾನ್ಸರ್ ಕಣಿವೆಯ ಗ್ರಾಮದ ಪ್ರದೇಶಗಳಿಗೆ ಎಲ್ಲಾ ಮಾರಾಟಗಾರರನ್ನು ಪ್ರವೇಶಿಸುವುದನ್ನು ನಿಷೇಧಿಸಲು ನಿರ್ಧರಿಸಲಾಯಿತು ಎಂದು ಸಿಂಗ್ ಹೇಳಿದ್ದಾರೆ. ಒಂದು ವೇಳೆ ವ್ಯಾಪಾರಿಗಳು ಸಿಕ್ಕಿಬಿದ್ದರೆ ಅವರು 10,000 ರೂಪಾಯಿ ದಂಡ ಮತ್ತು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಖಾನ್ಸರ್ ಪಟ್ಟಣದಲ್ಲಿರುವ ಮೈಥಾನ್ ಮಾರುಕಟ್ಟೆ ಗೈರ್‌ಸೈನ್‌ನ ಪ್ರಮುಖ ಭಾಗವಾಗಿದ್ದು, 21 ಗ್ರಾಮ ಪಂಚಾಯತ್‌ಗಳೊಂದಿಗೆ ಸುಮಾರು 40,000 ಜನಸಂಖ್ಯೆಯನ್ನು ಹೊಂದಿದೆ. ಮೈಥಾನ್ ಟ್ರೇಡ್ ಅಸೋಸಿಯೇಷನ್ ​​ಅಧ್ಯಕ್ಷ ಬಲದೇವ್ ಸಿಂಗ್ ನೇಗಿ ಮಾತನಾಡಿ, “ನಾವು ಯಾವುದೇ ಸಂದರ್ಭದಲ್ಲೂ ದೇವಭೂಮಿಯ ವಾತಾವರಣವನ್ನು ಹದಗೆಡಲು ಬಿಡುವುದಿಲ್ಲ. ಅನುಮಾನಾಸ್ಪದ ವ್ಯಕ್ತಿಗಳು ಈ ಪ್ರದೇಶದಲ್ಲಿ ವ್ಯಾಪಾರ ಮಾಡಲು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಮೋಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್, “ನಾವು ಶನಿವಾರ ವರ್ತಕರ ಸಂಘದ ಸದಸ್ಯರು ಮತ್ತು ಸ್ಥಳೀಯ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಈ ಸಭೆಯಲ್ಲಿ ಪ್ರದೇಶದಲ್ಲಿ ವ್ಯಾಪಾರ ಮಾಡುವ ಹೊರಗಿನವರ ಪರಿಶೀಲನೆ ಮತ್ತು ಕಣ್ಗಾವಲು ನಿರ್ಣಾಯಕವಾಗಿದೆ ಎಂದು ನಾವು ತೀರ್ಮಾನಕ್ಕೆ ಬಂದಿದ್ದೇವೆ. ತನಿಖೆಯು ನಿರ್ಣಾಯಕವಾಗಿದ್ದು ಪ್ರಸ್ತುತ ನಡೆಯುತ್ತಿದೆ.” ಎಂದು ಹೇಳಿದ್ದಾರೆ.

ಗೈರ್‌ಸೈನ್ ಎಸ್‌ಎಚ್‌ಒ ಜೈಪಾಲ್ ಸಿಂಗ್ ನೇಗಿ ಮಾತನಾಡಿ, “ಪೊಲೀಸರು ಸ್ಥಳೀಯ ಗುಪ್ತಚರ ಘಟಕದ ಸಹಾಯದಿಂದ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...