Homeಮುಖಪುಟಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

ಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

- Advertisement -
- Advertisement -

ಸೋಮವಾರ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚುಬೇಕು ಎಂದು ಬೆದರಿಕೆ ಹಾಕುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇದು ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ನಡೆದಿದೆ. ಈ ಮಾರುಕಟ್ಟೆಯಲ್ಲಿ ಸರಿಸುಮಾರು 650-700 ಅಂಗಡಿಗಳಿದ್ದು, ಇವುಗಳಲ್ಲಿ ಸುಮಾರು 30-40 ಮುಸ್ಲಿಮರ ಅಂಗಡಿಗಳಿವೆ.

ಪುರೋಲಾ ಪ್ರದೇಶದಲ್ಲಿ ಕಳೆದ ತಿಂಗಳು 14 ವರ್ಷದ ಹಿಂದೂ ಹುಡುಗಿಯನ್ನು ಇಬ್ಬರು ಪುರುಷರು – ಒಬ್ಬ ಮುಸ್ಲಿಂ ಮತ್ತು ಇನ್ನೊಬ್ಬ ಹಿಂದೂ ಅಪಹರಣ ಯತ್ನ ನಡೆಸಿದ ಆರೋಪದ ಮೇಲೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಸೋಮವಾರ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಜೂನ್ 15 ರೊಳಗೆ ಅಂಗಡಿಗಳನ್ನು ಮುಚ್ಚುವುದಾಗಿ ಬೆದರಿಕೆ ಹಾಕುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಅಂಗಡಿಯ ಉಬೇದ್ ಖಾನ್ (24), ಮತ್ತು ಮೋಟಾರ್ ಸೈಕಲ್ ಮೆಕ್ಯಾನಿಕ್ ಜಿತೇಂದರ್ ಸೈನಿ (23) ಎನ್ನುವವರು ಯುವತಿಯ ಅಪಹರಣದ ಪ್ರಯತ್ನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಒಂದು ದಿನದ ನಂತರ ಮೇ 27 ರಂದು ಬಂಧಿಸಲಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದು ‘ಲವ್ ಜಿಹಾದ್’ ಪ್ರಕರಣ ಎಂದು ಬಲಪಂಥೀಯ ಗುಂಪುಗಳು ಆರೋಪಿಸಿವೆ. ಇಂತಹ ಪ್ರಕರಣಗಳಲ್ಲಿ ಬಲಪಂಥೀಯರು, ಹಿಂದೂ ಮಹಿಳೆಯರನ್ನು ಓಲೈಸಲು ಮತ್ತು ಮೋಹಿಸಲು ಮುಸ್ಲಿಂ ಪುರುಷರು ನಡೆಸಿದ ಪಿತೂರಿ ಎಂದು ವಿವರಿಸಲು ಘಟನೆಯನ್ನು ಬಳಸಿಕೊಳ್ಳುತ್ತಾರೆ. ಆದರೆ ನ್ಯಾಯಾಲಯಗಳು ಮತ್ತು ಕೇಂದ್ರ ಸರ್ಕಾರ ಇದನ್ನು ಅಧಿಕೃತವಾಗಿ ಗುರುತಿಸುವುದಿಲ್ಲ.

ಉತ್ತರಕಾಶಿಯ ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ಜೂನ್ 15 ರಂದು ನಡೆಯುವ ಮಹಾಪಂಚಾಯತ್‌ಗೆ ಮುನ್ನ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಖಾಲಿ ಮಾಡುವಂತೆ ಪೋಸ್ಟರ್‌ಗಳಲ್ಲಿ ಹೇಳಲಾಗಿದೆ.

”ಲವ್ ಜಿಹಾದಿಗಳು ಜೂನ್ 15ರಂದು ಮಹಾಪಂಚಾಯತ್‌ಗೆ ಮುಂಚಿತವಾಗಿ ಅಂಗಡಿಗಳನ್ನು ಖಾಲಿ ಮಾಡಬೇಕು ಎಂದು ತಿಳಿಸಲಾಗಿದೆ. ಅವರು ಖಾಲಿ ಮಾಡದಿದ್ದರೆ,  ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ‘ಭೂಮಿ ರಕ್ಷಣೆಗಾಗಿ ಅಭಿಯಾನಕ್ಕೆ ಕರೆ ನೀಡುತ್ತದೆ” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಬಾರ್ಕೋಟ್‌ನಲ್ಲಿ ಪ್ರತಿಭಟನೆ ನಡೆಸಿ ಬಲಪಂಥೀಯ ಸಂಘಟನೆಗಳ ಸದಸ್ಯರು ಮುಸ್ಲಿಮರ ಅಂಗಡಿಗಳು ಮತ್ತು ಮನೆಗಳ ಮೇಲೆ ದಾಳಿ ಮಾಡಿದರು. ಇದಾದ ಎರಡು ದಿನಗಳ ನಂತರ ಈ ಪೋಸ್ಟರ್‌ಗಳು ಕಾಣಿಸಿಕೊಂಡವು. ಮತ್ತೊಂದೆಡೆ ಆ ದಾಳಿಕೋರರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಪೋಸ್ಟರ್‌ಗಳನ್ನು ಸೋಮವಾರ ತೆಗೆದುಹಾಕಲಾಗಿದ್ದು, ಅವುಗಳನ್ನು ಅಂಟಿಸಿದವರನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ’ದಿ ಕೇರಳ ಸ್ಟೋರಿ’ ವರ್ಸಸ್ ’ದಿ ಗುಜರಾತ್ ಸ್ಟೋರಿ’!

”ನಾವು ಈ ಪೋಸ್ಟರ್‌ಗಳನ್ನು ತೆಗೆದುಹಾಕಿದ್ದೇವೆ ಮತ್ತು ಅವುಗಳನ್ನು ಅಂಟಿಸಿದ ಸಮಾಜವಿರೋಧಿಗಳನ್ನು ಗುರುತಿಸುತ್ತಿದ್ದೇವೆ” ಎಂದು ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅರ್ಪಣ್ ಯದುವಂಶಿ ಹೇಳಿದ್ದಾರೆ.

ಸ್ಥಳೀಯ ನಿವಾಸಿಗಳು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಎಂದು ಸ್ಥಳೀಯ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡರೊಬ್ಬರು ತಿಳಿಸಿದ್ದಾರೆ.

”ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಉಳಿಯಲು ನಿರ್ದಿಷ್ಟ ಸಮುದಾಯದ ಜನರು ಪಟ್ಟಣವನ್ನು ತೊರೆಯಬೇಕೆಂದು ಬಯಸುವ ಸ್ಥಳೀಯ ನಿವಾಸಿಗಳು ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ. ಅವರು ವ್ಯಾಪಾರ ಮಾಡುವ ನೆಪದಲ್ಲಿ ಇಲ್ಲಿಗೆ ಬಂದರು ಆದರೆ ನಮ್ಮ ಸಮುದಾಯದ ಹುಡುಗಿಯರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ವಿಎಚ್‌ಪಿ ನಾಯಕ ವೀರೇಂದ್ರ ರಾಣಾ ಆರೋಪ ಮಾಡಿದ್ದಾರೆ.

ಪುರೋಲಾದಲ್ಲಿ ಗಾರ್ಮೆಂಟ್ಸ್ ಅಂಗಡಿಯನ್ನು ನಡೆಸುತ್ತಿರುವ ಸಲೀಂ (35) ಅವರು ನಡೆಯುತ್ತಿರುವ ಉದ್ವಿಗ್ನತೆ ಬಗ್ಗೆ ಮಾತನಾಡಿ,”ನಾವು ನಿರಂತರ ಭಯದಲ್ಲಿ ಬದುಕುತ್ತಿದ್ದೇವೆ ಮತ್ತು ಅಂತಹ ವಾತಾವರಣದಲ್ಲಿ ಪುರೋಲಾಗೆ ಹಿಂತಿರುಗಲು ಸಾಧ್ಯವಿಲ್ಲ. ನಾವು ಅಂಗಡಿಯಲ್ಲಿನ ಬಟ್ಟೆಗಳನ್ನೆಲ್ಲಾ ಬಿಟ್ಟು ಓಡಿಹೋಗಬೇಕೆಂದು ಅವರು ಬಯಸಿದ್ದಾರೆ. ಒಂದುವೇಳೆ ಅದೇ ರೀತಿಯಾದರೆ, ಅಧಿಕಾರಿಗಳು ನಮ್ಮ ಒಡೆತನದ ಆಸ್ತಿಗೆ ಪರಿಹಾರ ನೀಡಬೇಕು” ಎಂದು ಹೇಳಿದ್ದಾರೆ. ಸಧ್ಯ ಅವರು ಆ ಸ್ಥಳ ಬಿಟ್ಟು ಡೆಹ್ರಾಡೂನ್‌ನಲ್ಲಿರುವ ತನ್ನ ಸಹೋದರನ ಮನೆಗೆ ಓಡಿಹೋಗಿದ್ದಾರೆ.

ಹೆಸರು ಹೇಳಲಿಚ್ಚಿಸದ ಮಾರುಕಟ್ಟೆಯಲ್ಲಿನ ಮತ್ತೊಬ್ಬ ಮುಸ್ಲಿಂ ಅಂಗಡಿಯವವರು ಮಾತನಾಡಿದ್ದು, ”ನಾವು ಅಪಹರಣ ಪ್ರಯತ್ನವನ್ನು ಖಂಡಿಸುತ್ತೇವೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ. ಅಪರಾಧ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಜನರನ್ನು ನಾವು ಬೆಂಬಲಿಸುವುದಿಲ್ಲ” ಎಂದು ಹೇಳಿದ್ದಾರೆ.

ಸೋಮವಾರ, ಕೆಲವು ಮುಸ್ಲಿಂ ಕುಟುಂಬಗಳು ಪುರೋಲೋ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ (SDM) ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ್ದು, ಅವರು ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಎತ್ತಿ ತೋರಿಸಿದರು ಮತ್ತು ಅಂಗಡಿಗಳನ್ನು ಪುನಃ ತೆರೆಯಲು ಭದ್ರತೆಯನ್ನು ಕೋರಿದರು. ಜ್ಞಾಪಕ ಪತ್ರದಲ್ಲಿ ಮುಸ್ಲಿಮರಿಗೆ ಏನಾದರೂ ಅಹಿತಕರವಾದರೆ ಆಡಳಿತವೇ ಹೊಣೆಯಾಗುತ್ತದೆ ಎಂದು ಹೇಳಿದೆ.

ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ದೇವಾನಂದ್ ಶರ್ಮಾ ಈ ಬಗ್ಗೆ ಮಾತನಾಡಿ, ”ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಪಟ್ಟಣದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿದ್ದೇವೆ” ಎಂದು ಹೇಳಿದರು.

ಮೇ 26 ರಂದು ಇಬ್ಬರು ವ್ಯಕ್ತಿಗಳು ಅಪ್ರಾಪ್ತೆಯನ್ನು ಅಪಹರಿಸಲು ಪ್ರಯತ್ನಿಸಿದಾಗ ಉತ್ತರಕಾಶಿಯಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಅಪಹರಣ ಪ್ರಯತ್ನ ವಿಫಲವಾದ ನಂತರ ಆರೋಪಿಗಳು ಪರಾರಿಯಾಗಿದ್ದು, ಮರುದಿನ ಹುಡೋಳಿ ಗ್ರಾಮದಿಂದ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 29 ರಂದು, ಕೆಲವು ಪ್ರತಿಭಟನಾಕಾರರು ಮುಸ್ಲಿಮರಿಗೆ ಸೇರಿದ ಅಂಗಡಿಗಳು ಮತ್ತು ಸಂಸ್ಥೆಗಳ ಮೇಲೆ ದಾಳಿ ಮಾಡಿದ ನಂತರ ಪುರೋಲಾದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿತು. ಯಮುನಾ ಘಾಟಿ ಹಿಂದೂ ಜಾಗೃತಿ ಸಂಘಟನೆಯ ಬ್ಯಾನರ್ ಅಡಿಯಲ್ಲಿ ಶನಿವಾರ ಇದೇ ರೀತಿಯ ಪ್ರತಿಭಟನೆ ನಡೆಸಲಾಯಿತು. ಸುಮಾರು 900 ಜನರು ಈ ಧರಣಿಯಲ್ಲಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...