Homeಮುಖಪುಟಉತ್ತರಖಂಡ ಯುವತಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್, ಬಿಜೆಪಿ ಶಾಸಕನ ಕಾರಿಗೆ ಬೆಂಕಿ

ಉತ್ತರಖಂಡ ಯುವತಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್, ಬಿಜೆಪಿ ಶಾಸಕನ ಕಾರಿಗೆ ಬೆಂಕಿ

ಕೊಲೆ ಆರೋಪಿಯ ತಂದೆ ವಿನೋದ್ ಆರ್ಯ ಮತ್ತು ಸಹೋದರ ಅಂಕಿತ್ ಆರ್ಯನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ

- Advertisement -
- Advertisement -

ಉತ್ತರಖಂಡ ರಾಜ್ಯದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆಗೈದ ನಂತರ ಹಿಂಸಾಚಾರ ಭುಗಿಲೆದ್ದಿದೆ. ಕೋಪಗೊಂಡ ಸ್ಥಳೀಯರು ಆತನ ರೆಸಾರ್ಟ್ ಮತ್ತು ಸ್ಥಳೀಯ ಬಿಜೆಪಿ ಶಾಸಕ ರೇಣು ಬಿಸ್ತ ಅವರ ಕಾರಿಗೆ ಬೆಂಕಿ ಹಾಕಿದ್ದಾರೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಆದೇಶದ ಮೇರೆಗೆ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯ ಒಡೆತನದ ರೆಸಾರ್ಟ್ ಮೇಲೆ ಪೊಲೀಸರು ಬುಲ್ಡೋಜರ್ ದಾಳಿ ನಡೆಸಿದ್ದಾರೆ. ಅಲ್ಲದೆ ಬಿಜೆಪಿ ಮುಖಂಡರಾದ ಅವರ ತಂದೆ ವಿನೋದ್ ಆರ್ಯ ಮತ್ತು ಸಹೋದರ ಅಂಕಿತ್ ಆರ್ಯನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣದ ಹಿನ್ನೆಲೆ

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದರು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಯಲ್ಲಿ ಯುವತಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದನು. ಆದರೆ 5 ದಿನದ ನಂತರ ಪುಲ್ಕಿತ್ ಆರ್ಯ ಇಬ್ಬರು ಸಿಬ್ಬಂದಿಯೊಡನೆ ಸೇರಿ ಯುವತಿಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಂತ್ರಸ್ತ ಯುವತಿಯ ಕುಟುಂಬವು ಮೊದಲಿನಿಂದಲೂ ಪುಲ್ಕಿತ್ ಆರ್ಯನ ಮೇಲೆ ಸಂಶಯ ವ್ಯಕ್ತಪಡಿಸಿತ್ತು. ಏಕೆಂದರೆ ಪ್ರಕರಣದ ಬಗ್ಗೆ ಆತ ಆರಂಭದಲ್ಲಿ ದೂರು ನೀಡಲು ನಿರಾಕರಿಸಿದ್ದ ಎಂದು ಹೇಳಲಾಗಿದೆ. ಮೃತ ದೇಹವನ್ನು ಪಕ್ಕದ ಕಾಲುವೆಯಲ್ಲಿ ಪತ್ತೆಹಚ್ಚಲಾಗಿದ್ದು, ಯುವತಿಯ ಸಂಬಂಧಿಕರನ್ನು ಗುರುತು ಪತ್ತೆ ಹಚ್ಚಲು ಕರೆಯಲಾಗಿದೆ ಎಂದು ವರದಿಯಾಗಿದೆ.

ಈ ನಡವೆ ಆರೋಪಿಯು ಹಿರಿಯ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡನ ಮಗನಾಗಿದ್ದರಿಂದ ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ವೈರಲ್ ಆದ ನಂತರ ಪೊಲೀಸರು ಮುಖ್ಯ ಆರೋಪಿ ಪುಲ್ಕಿತ್ ಮತ್ತು ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಆ ಯುವತಿಯ ಕೊಲೆಯ ಹಿಂದಿನ ಕಾರಣಗಳ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಆಪಾದಿತ ರೆಸಾರ್ಟ್‌ನಲ್ಲಿ ಹುಡುಗಿಯರನ್ನು ವೇಶ್ಯಾವಾಟಿಕೆಗೆ ದೂಡಲಾಗುತ್ತಿದೆ. ಅದಕ್ಕೆ ಸಂತ್ರಸ್ತ ಯುವತಿಯನ್ನು ಕೂಡಾ ಬಲವಂತಪಡಿಸಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದಿದ್ದು, ಪೊಲೀಸರು ಈ ಕುರಿತು ಮಾಹಿತಿ ನೀಡಿಲ್ಲ.

“ಪೊಲೀಸರು ತನಿಖೆಯಲ್ಲಿ ಲೋಪವೆಸಗುತ್ತಿದ್ದಾರೆ. ಸೆಪ್ಟಂಬರ್ 18ರಂದು ಯುವತಿ ಕಾಣೆಯಾಗಿದ್ದರು ಸಹ ಸೆಪ್ಟಂಬರ್ 21 ರಂದು ಎಫ್‌ಐಆರ್ ದಾಖಲಿಸಿದ್ದು ಏಕೆ? ಎಲ್ಲಿಯವರೆಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡರು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ?” ಎಂದು ಕಾಂಗ್ರೆಸ್ ವಕ್ತಾರ ಗರಿಮ ಮೆಹ್ರ ದುಸಾನಿ ಪ್ರಶ್ನಿಸಿದ್ದಾರೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಮಾತನಾಡಿ, “ರೆಸಾರ್ಟ್ ಇರುವ ಜಾಗ ರಿಷಿಕೇಶ್ ಪಟ್ಟಣದಿಂದ 10 ಕಿ.ಮೀ ದೂರವಿದ್ದು ಅಲ್ಲಿ ಸಾಮಾನ್ಯ ಪೊಲೀಸರನ್ನು ನಿಯೋಜಿಸಿರಲಿಲ್ಲ. ನಮ್ಮಲ್ಲಿ ಕಂದಾಯ ಅಧಿಕಾರಿಗಳು ಎಫ್‌ಐಆರ್ ದಾಖಲಿಸುವ ಪದ್ದತಿ ಇದೆ. ಅದರಂತೆ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯನ ದೂರಿನ ಅನ್ವಯ ಕಾಣೆಯಾಗಿದ್ದಾರೆ ಎಂಬ ದೂರು ದಾಖಲಿಸಿಕೊಂಡಿದ್ದರು. ಆದರೆ ಜಿಲ್ಲಾ ನ್ಯಾಯಾಧೀಶರು ಪ್ರಕರಣವನ್ನು ನಮಗೆ ವರ್ಗಾಯಿಸಿದ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದೇವೆ. ದೂರುದಾರನೇ ಆರೋಪಿಯಾಗಿ ಬದಲಾಗಿದ್ದಾನೆ” ಎಂದು ತಿಳಿಸಿದ್ದಾರೆ.

ಬಂಧನದ ವೇಳೆ ಪುಲ್ಕಿತ್ ಆರ್ಯನ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ ಎಂದು ವರದಿಯಾಗಿದೆ. ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾ ಎಂಬುವವರನ್ನು ಸಹ ಬಂಧಿಸಿದ್ದೇವೆ. ಆರಂಭದಲ್ಲಿ ಅವರು ಪೊಲೀಸರನ್ನು ದಿಕ್ಕು ತಪ್ಪಿಸಲು ಯತ್ನಿಸಿದರು. ಆದರೆ ಧೀರ್ಘ ವಿಚಾರಣೆಯ ಸಂದರ್ಭದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ತರಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ತಿಳಿಸಿದ್ದಾರೆ. “ಇದು ಬಹಳ ಹೀನ ಕೃತ್ಯವಾಗಿದ್ದು, ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಸಿಎಂ ಆದೇಶದ ಮೇರೆಗೆ ಸ್ಥಳೀಯ ಆಡಳಿತಾಧಿಕಾರಿಗಳು ರೆಸಾರ್ಟ್ ಅನ್ನು ಬುಲ್ಡೋಜರ್‌ನಿಂದ ನೆಲಸಮಗೊಳಿಸಲು ಮುಂದಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಅಲ್ಲದೆ ರಾಜ್ಯದ ಎಲ್ಲಾ ರೆಸಾರ್ಟ್‌ಗಳ ಮೇಲೆ ತನಿಖೆ ನಡೆಸಬೇಕೆಂದು ಆದೇಶಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಚುನಾವಣಾ ಆಯೋಗ

0
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ. ಈ ಕುರಿತು ಚುನಾವಣಾ ಆಯೋಗ...