Homeಮುಖಪುಟರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

ರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

- Advertisement -
- Advertisement -

ಮುಖ್ಯಮಂತ್ರಿ ಪದವಿಗೆ ಏರಿದ ನಾಲ್ಕು ತಿಂಗಳಿನಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಉತ್ತರಾಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್‌ಗೆ ತಮ್ಮ ಸಿಎಂ ಸ್ಥಾನ ಕಳೆದುಕೊಳ್ಳುವ ಭಯ ಎದುರಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹೈಕಮಾಂಡ್‌ ಜೊತೆಗೆ ಬೀಡುಬಿಟ್ಟಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಚುನಾವಣೆ ಗೆಲ್ಲುವ ಅನಿವಾರ್ಯತೆ ಮತ್ತು ರಾಜ್ಯ ಬಿಜೆಪಿ ಘಟಕದಲ್ಲಿ ಉಂಟಾಗಿರುವ ಬಿರುಕು ಸರಿ ಪಡಿಸುವುದು ಅವರ ಮುಂದಿರುವ ಕಠಿಣ ಸವಾಲಾಗಿ ಪರಿಣಮಿಸಿದೆ. ಇವುಗಳ ಕಾರಣ ಎಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರುತ್ತದೋ ಎಂಬ ಆತಂಕ ತಿರತ್ ಸಿಂಗ್ ರಾವತ್ ಅವರಲ್ಲಿ ಮನೆ ಮಾಡಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್‌ ಅವರನ್ನು ಬಿಜೆಪಿ ನಾಯಕತ್ವ  ಬುಧವಾರ ದೆಹಲಿಗೆ ಕರೆಸಿಕೊಂಡಿದ್ದು, ಅಂದಿನಿಂದಲೂ ರಾಜ್ಯದ ಸ್ಥಿತಿಗತಿ ಮತ್ತು ಚುನಾವಣೆ ಬಗ್ಗೆ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ  ಜೊತೆಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮತದಾನ ನಂತರದ ಹಿಂಸಾಚಾರ: ಚುನಾವಣಾ ಆಯೋಗ, ಬಂಗಾಳ ಮತ್ತು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂನಿಂದ ನೋಟಿಸ್‌

ತಿರತ್ ಸಿಂಗ್ ರಾವತ್‌ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆಯೇ ಎಂಬುದು ಚುನಾವಣಾ ಆಯೋಗದ ನಿರ್ಧಾರವನ್ನು ಅವಲಂಬಿಸಿದೆ.

ಉತ್ತರಾಖಂಡ ರಾಜ್ಯದ ಅಂದಿನ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ವಿರುದ್ಧ ಬಿಜೆಪಿ ರಾಜ್ಯ ಘಟಕದಲ್ಲಿ ತೀವ್ರ ಅಸಮಾಧಾನ ಉಂಟಾಗಿದ್ದರಿಂದ ಬಿಜೆಪಿ ಹೈಕಮಾಂಡ್, ಉತ್ತರಾಖಂಡ ಚುನಾವಣೆಗೆ ಕೇವಲ ಒಂದು ವರ್ಷವಿರುವಾಗಲೇ ಮಾರ್ಚ್‌ನಲ್ಲಿ ತಿರತ್ ಸಿಂಗ್ ರಾವತ್ ಅವರಿಗೆ ಅಧಿಕಾರ ಹಸ್ತಾಂತರಿಸಿತ್ತು.

ಆದರೆ, ಮುಖ್ಯಮಂತ್ರಿ  ಸ್ಥಾನ ಉಳಿಸಿಕೊಳ್ಳಲು ಸಂಸದರಾಗಿರುವ ತಿರತ್ ಸಿಂಗ್ ರಾವತ್ ಅವರು ವಿಧಾನಸಭಾ ಸ್ಥಾನವನ್ನು ಗೆದ್ದು ಸೆಪ್ಟೆಂಬರ್ 10 ರೊಳಗೆ ಉತ್ತರಾಖಂಡ ಶಾಸಕಾಂಗ ಸಭೆಯ ಸದಸ್ಯರಾಗಬೇಕಾಗಿದೆ.

ಕೋವಿಡ್ ಬಿಕ್ಕಟ್ಟು ಮತ್ತು ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಚುನಾವಣೆಯ ದೊಡ್ಡ ವಿವಾದ ಹೊತ್ತಿರುವ ಚುನಾವನಾ ಆಯೋಗ ಇದನ್ನು ಹೇಗೆ ಪರಿಹರಿಸುತ್ತದೆಯೋ ನೋಡಬೇಕಾಗಿದೆ. ಚುನಾವಣೆಯ ಕುರಿತು ವಿವಿಧ ರಾಜ್ಯಗಳೊಂದಿಗೆ ಸಮಾಲೋಚಿಸುತ್ತಿದೆ ಎಂದು ಚುನಾವಣಾ ಆಯೋಗದ ಮೂಲಗಳನ್ನು ಎನ್‌ಡಿಟಿವಿ  ಉಲ್ಲೇಖಿಸಿದೆ. ಅನೇಕ ಉಪಚುನಾವಣೆಗಳು ಬಾಕಿ ಉಳಿದಿದ್ದು, ಕೋವಿಡ್ ಪರಿಸ್ಥಿತಿ ಪ್ರಮುಖವಾದ ಪರಿಗಣನೆಯಾಗಿದೆ, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಪದವಿ ವಹಿಸಿಕೊಂಡ ಮಾರ್ಚ್‌ನಿಂದಲೂ ತಿರತ್ ಸಿಂಗ್ ರಾವತ್‌  ಸರಣಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಬಿಜೆಪಿಯ ಉತ್ತರಾಖಂಡ ನಾಯಕರು ದೆಹಲಿ ನಾಯಕತ್ವಕ್ಕೆ ಅವರ ಹೇಳಿಕೆಗಳ ಬಗ್ಗೆ ಸಾರ್ವಜನಿಕರಲ್ಲಿ ಉಂಟಾಗಿರುವ ಆಕ್ರೋಶದ ಬಗ್ಗೆ ದೂರು ನೀಡಿದ್ದಾರೆ. ಜೊತೆಗೆ ಬಿಜೆಪಿಯ ಹಿಂದಿನ ನೀತಿ ನಿರ್ಧಾರಗಳನ್ನು ಟೀಕಿಸುವ ಮೂಲಕ ತಮ್ಮದೇ ಪಕ್ಷವನ್ನು ಮುಜುಗರಕ್ಕೀಡು ಮಾಡಿದ್ದಾರೆ.

ಅಧಿಕಾರ ವಹಿಸಿಕೊಂಡ ಕೂಡಲೇ, ರಾವತ್ ಅವರು ‘ರಿಪ್ಪಡ್‌ ಜೀನ್ಸ್ ಪ್ಯಾಂಟ್‌‌’  ಧರಿಸಿದ ಮಹಿಳೆಯರ ಬಗ್ಗೆ ಹೇಳಿಕೆ ನೀಡಿ, ವ್ಯಾಪಕ ಆಕ್ರೋಶವನ್ನು ಎದುರಿಸಿದ್ದರು. ಜೊತೆಗೆ 200 ವರ್ಷಗಳ ಕಾಲ ಭಾರತವನ್ನು ಬ್ರಿಟನ್ ಅಲ್ಲ, ಅಮೆರಿಕಾ ಆಳ್ವಿಕೆ ಮಾಡಿತ್ತು ಎಂದಿದ್ದರು.

ಇನ್ನು, ಕೊರೊನಾ ಉಲ್ಬಣದಲ್ಲಿದ್ದ ದಿನಗಳಲ್ಲಿ ಕುಂಭಮೇಳವನ್ನು ಆಯೋಜಿಸಿ, “ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿಲ್ಲ” ಎಂಬ ಅಭಿಪ್ರಾಯ ಹೊರ ಹಾಕಿದ್ದರು. ಈ ಎಲ್ಲಾ ವಿವಾದಗಳು ಮತ್ತು ಬಿಜೆಪಿ ರಾಜ್ಯ ಘಟಕದಲ್ಲಿನ ಭಾರಿ ಬಿರುಕು ಇವರ ಸ್ಥಾನಕ್ಕೆ ಕುತ್ತು ತರಬಹುದು ಎನ್ನಲಾಗಿದೆ.


ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...