Homeಮುಖಪುಟಉತ್ತರಕಾಶಿ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ಮಳೆ ಅಡ್ಡಿ

ಉತ್ತರಕಾಶಿ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ಮಳೆ ಅಡ್ಡಿ

- Advertisement -
- Advertisement -

ಉತ್ತರಕಾಶಿಯಲ್ಲಿ ಸುರಂಗ ಕುಸಿತದಿಂದಾಗಿ 41 ಕಾರ್ಮಿಕರನ್ನು ಅವಶೇಷಗಳಡಿ ಸಿಲುಕಿಕೊಂಡಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ. ಆದರೆ  ಈ ಕಾರ್ಯಾಚರಣೆಗೆ ಮಳೆ ಮುನ್ಸೂಚನೆ ಸವಾಲಾಗಿದೆ.

ಹವಾಮಾನ ಇಲಾಖೆ ನೀಡಿರುವ ಮಳೆ ಮತ್ತು ತಾಪಮಾನವು 4 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಮುನ್ಸೂಚನೆ ಕಾರ್ಯಾಚರಣೆಗೆ ಮತ್ತೆ ಅಡ್ಡಿ ಮಾಡುವ ಲಕ್ಷಣಗಳು ಕಾಣುತ್ತಿವೆ ಎಂದು ಹೇಳಲಾಗಿದೆ.

ಉತ್ತರಾಖಂಡದಲ್ಲಿ 4,000 ಮೀಟರ್‌ಗಿಂತ ಹೆಚ್ಚಿನ ಪ್ರದೇಶಗಳಲ್ಲಿ ಹಿಮಪಾತ ವಾದುವ ಸಾಧ್ಯತೆ ಇದೆ. ಅಲ್ಲದೆ ಮಳೆಯ ಜತೆ ಗುಡುಗು, ಆಲಿಕಲ್ಲು ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಹೇಳಿದೆ.

ಕಾಮಗಾರಿ ನಡೆಸುತ್ತಿದ್ದ ವೇಳೆ ನವೆಂಬರ್ 12 ರಂದು ಸುರಂಗ ಕುಸಿದು 41 ಕಾರ್ಮಿಕರು 4.5-ಕಿಲೋಮೀಟರ್ (3-ಮೈಲಿ) ಸುರಂಗದಲ್ಲಿ ಸಿಲುಕಿದ್ದಾರೆ. ಕಳೆದ 15 ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಲೇ ಇದೆ. ಆದರೆ ಈವರೆಗೂ ಅವರನ್ನು ಹೊರತರಲು ಸಾಧ್ಯವಾಗಿಲ್ಲ.

ಈ ಬಗ್ಗೆ ಎನ್‌ಎಚ್‌ಐಡಿಸಿಎಲ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮಹಮೂದ್ ಅಹ್ಮದ್ ಅವರು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ಮಾಹಿತಿ ನೀಡಿದ್ದು, ”ಪ್ರತಿಕೂಲ ಹವಾಮಾನ ಪರಿಸ್ಥಿತಿ, ಯಂತ್ರಗಳಲ್ಲಿನ ಸಮಸ್ಯೆ ಕಾರಣದಿಂದಾಗಿ ರಕ್ಷಣಾ ಕಾರ್ಯಕ್ಕೆ ಒಂದಲ್ಲ ಒಂದು ಸವಾಲು ಎದುರಾಗುತ್ತಲೇ ಇದೆ. ಆದರೆ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ರಕ್ಷಣಾ ಸಿಬ್ಬಂದಿ ಸಜ್ಜುಗೊಂಡಿದ್ದಾರೆ. ಪ್ರತಿ ಸನ್ನಿವೇಶದಲ್ಲಿ ಕೆಲಸ ಮಾಡಲು ತರಬೇತಿ ಪಡೆದಿದ್ದಾರೆ ಆದ್ದರಿಂದ ನಮಗೆ ಚಿಂತೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೊತ್ತಿ ಉರಿಯುತ್ತಿರುವ ಗಾಜಾ; ಇಸ್ರೇಲ್ ದಾಳಿಯಿಂದ ಭೀಕರ ಮಾನವೀಯ ಬಿಕ್ಕಟ್ಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ಕೊಟ್ಟ ಬಿಜೆಪಿ

0
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಉತ್ತರ ಪ್ರದೇಶದ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೈಬಿಟ್ಟು, ಪುತ್ರ ಕರಣ್ ಭೂಷಣ್ ಸಿಂಗ್‌ಗೆ...