Homeದಲಿತ್ ಫೈಲ್ಸ್ಯುಪಿ: ಬಂದೂಕು ತೋರಿಸಿ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ; 7 ಜನರ ಬಂಧನ

ಯುಪಿ: ಬಂದೂಕು ತೋರಿಸಿ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ; 7 ಜನರ ಬಂಧನ

- Advertisement -
- Advertisement -

30 ವರ್ಷದ ದಲಿತ ಮಹಿಳೆಗೆ ಏಳು ಮಂದಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. “ದುಷ್ಕರ್ಮಿಗಳು ಮಹಿಳೆಗೆ ಗನ್‌ ತೋರಿಸಿ, ಬಟ್ಟೆ ಬಿಚ್ಚುವಂತೆ ಒತ್ತಾಯಿಸುವ ಜೊತೆಗೆ ಘಟನೆಯನ್ನು ಚಿತ್ರೀಕರಣ ಮಾಡಿಕೊಂಡಿದ್ದಾರೆ. ಜುಲೈ 31 ರಂದು ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 30 ರಂದು ಸಂಜೆ ಮುಜಾಫರ್‌ನಗರ ಜಿಲ್ಲೆಯ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬಳಿಕ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಹುಲ್ಲು ಕತ್ತರಿಸಲು ಹೊಲಕ್ಕೆ ಹೋಗಿದ್ದಾಗ ಘಟನೆ ನಡೆಯಿತು. ಅಲ್ಲಿ ಏಳು ಮಂದಿ ನನಗೆ ಲೈಂಗಿಕ ಕಿರುಕುಳ ನೀಡಿದ್ದರು. ಬಂದೂಕು ತೋರಿಸಿ ನನ್ನ ಬಟ್ಟೆಗಳನ್ನು ತೆಗೆಯುವಂತೆ ಒತ್ತಾಯಿಸಿ, ನಂತರ ವೀಡಿಯೊ ಮಾಡಿಕೊಂಡರು” ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಬೊಮ್ಮಾಯಿಯವರು ಬಯಸುವ ಯುಪಿ ಮಾದರಿಯ ಆಳ-ಅಗಲ ಬಲ್ಲಿರೇನು!?

ಐಪಿಸಿ ಸೆಕ್ಷನ್ 354 ಬಿ ಮತ್ತು 506, ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಿದ್ದಾರೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಎಸ್‌ಎಚ್‌ಒ ಆನಂದ್ ದೇವ್ ಮಿಶ್ರಾ ಹೇಳಿದ್ದಾರೆ.

ಆರೋಪಿಗಳನ್ನು ಅನುಜ್, ಕುಲದೀಪ್, ಅಂಕಿತ್, ರವಿ, ರಿಜ್ವಾನ್, ಚೋಟಾ ಮತ್ತು ಅಬ್ದುಲ್ ಎಂದು ಪೊಲೀಸರು ಗುರುತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...