Homeಕರೋನಾ ತಲ್ಲಣಮಕ್ಕಳಿಗೆ ಲಸಿಕೆ: ‘ಅವೈಜ್ಞಾನಿಕ’ ಎಂದ ಕೊವಾಕ್ಸಿನ್‌ ಪ್ರಯೋಗಗಳ ತನಿಖಾಧಿಕಾರಿ!

ಮಕ್ಕಳಿಗೆ ಲಸಿಕೆ: ‘ಅವೈಜ್ಞಾನಿಕ’ ಎಂದ ಕೊವಾಕ್ಸಿನ್‌ ಪ್ರಯೋಗಗಳ ತನಿಖಾಧಿಕಾರಿ!

- Advertisement -
- Advertisement -

ಒಕ್ಕೂಟ ಸರ್ಕಾರವು ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಬಗ್ಗೆ ಭಾನುವಾರ ನಿರ್ಧಾರ ತೆಗೆದುಕೊಂಡಿದೆ. ಆದರೆ AIIMS ನಲ್ಲಿ ವಯಸ್ಕ ಮತ್ತು ಮಕ್ಕಳ ಕೋವಾಕ್ಸಿನ್ ಪ್ರಯೋಗಗಳ ಪ್ರಧಾನ ತನಿಖಾಧಿಕಾರಿಯಾಗಿರುವ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಸರ್ಕಾರದ ಈ ನಿರ್ಧಾರವನ್ನು “ಅವೈಜ್ಞಾನಿಕ” ಎಂದು ಬಣ್ಣಿಸಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ. ಮಕ್ಕಳಿಗೆ ನೀಡುವ ಕೊರೊನಾ ಲಸಿಕೆಯ ಯಾವುದೇ ಹೆಚ್ಚುವರಿ ಪ್ರಯೋಜನವನ್ನು ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ ​​ಅಧ್ಯಕ್ಷರೂ ಆಗಿರುವ ಡಾ.ಸಂಜಯ್ ಕೆ.ರೈ ಮಾತನಾಡಿ, “ಈ ನಿರ್ಧಾರವನ್ನು ಜಾರಿಗೆ ತರುವ ಮುನ್ನ ಈಗಾಗಲೇ ಮಕ್ಕಳಿಗೆ ಲಸಿಕೆ ಹಾಕಲು ಆರಂಭಿಸಿರುವ ದೇಶಗಳ ದತ್ತಾಂಶವನ್ನು ವಿಶ್ಲೇಷಿಸಬೇಕು” ಒಕ್ಕೂಟ ಸರ್ಕಾರಕ್ಕೆ ಸೂಚಿಸಿದ್ದಾರೆ.

ಇದನ್ನೂ ಓದಿ:ಹದಿಹರೆಯದವರು ವಿದ್ಯಾರ್ಥಿ ID ಬಳಸಿಕೊಂಡು ಕೊರೊನಾ ಲಸಿಕೆಗೆ ನೋಂದಾಯಿಸಬಹುದು: ಸರ್ಕಾರ

ಶನಿವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು ಜನವರಿ 3 ರಿಂದ ಪ್ರಾರಂಭಿಸಲಾಗುವುದು” ಎಂದು ಘೋಷಿಸಿದ್ದರು.

ಲಸಿಕೆಯಿಂದಾಗಿ ಶಾಲಾ-ಕಾಲೇಜುಗಳಿಗೆ ಹೋಗುವ ಮಕ್ಕಳ ಬಗ್ಗೆ ಅವರ ಪೋಷಕರ ಆತಂಕವನ್ನು ಕಡಿಮೆ ಮಾಡುತ್ತದೆ ಮತ್ತು ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಎಂದು ಅವರು ಹೇಳಿದ್ದರು.

“ದೇಶಕ್ಕಾಗಿ ನಿಸ್ವಾರ್ಥ ಸೇವೆ ಮತ್ತು ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕಾಗಿ ನಾನು ಪ್ರಧಾನಿ ಮೋದಿಯವರ ದೊಡ್ಡ ಅಭಿಮಾನಿ. ಆದರೆ ಮಕ್ಕಳಿಗೆ ಲಸಿಕೆ ನೀಡುವುದರ ಕುರಿತು ಅವರ ಅವೈಜ್ಞಾನಿಕ ನಿರ್ಧಾರದ ಬಗ್ಗೆ ನಾನು ಸಂಪೂರ್ಣವಾಗಿ ನಿರಾಶೆಗೊಂಡಿದ್ದೇನೆ” ಎಂದು ಡಾ. ಸಂಜಯ್‌ ರೈ ಅವರು ಪ್ರಧಾನಿ ಕಚೇರಿಯನ್ನು ಟ್ಯಾಗ್ ಮಾಡಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ:ಲಸಿಕೆ ಪಡೆದ ಮೂರು ತಿಂಗಳ ನಂತರ ಕೋವಿಶೀಲ್ಡ್ ರಕ್ಷಣೆ ಕ್ಷೀಣಿಸುತ್ತದೆ- ದಿ ಲ್ಯಾನ್ಸೆಟ್ ಅಧ್ಯಯನದ ವರದಿ

“ಲಸಿಕೆಯನ್ನು ನೀಡುವುದರ ಉದ್ದೇಶ ಕೊರೊನಾ ಸೋಂಕು ಅಥವಾ ಅದರ ತೀವ್ರತೆ ಅಥವಾ ಮರಣವನ್ನು ತಡೆಗಟ್ಟುವುದಾಗಿದೆ. ಆದರೆ ಲಸಿಕೆಗಳ ಬಗ್ಗೆ ನಾವು ಹೊಂದಿರುವ ಯಾವುದೇ ಅಧ್ಯಯನದ ಪ್ರಕಾರ, ಲಸಿಕೆಯು ಸೋಂಕನ್ನು ಗಮನಾರ್ಹವಾಗಿ ಹೊಡೆದೋಡಿಸಿಲ್ಲ. ಕೆಲವು ದೇಶಗಳಲ್ಲಿ, ಬೂಸ್ಟರ್ ಶಾಟ್‌(ಮೂರನೇ)ಗಳನ್ನು ತೆಗೆದುಕೊಂಡ ನಂತರವೂ ಜನರು ಸೋಂಕಿಗೆ ಒಳಗಾಗುತ್ತಿದ್ದಾರೆ” ಎಂದು ಸಂಜಯ್ ರೈ ಹೇಳಿದ್ದಾರೆ.

“ಅಲ್ಲದೆ, ಯುಕೆಯಲ್ಲಿ ದಿನಕ್ಕೆ 50,000 ಸೋಂಕುಗಳು ವರದಿಯಾಗುತ್ತಿವೆ. ಆದ್ದರಿಂದ ಲಸಿಕೆಯು ಕೊರೊನಾ ವೈರಸ್‌ ಅನ್ನು ತಡೆಯುವುದಿಲ್ಲ ಎಂದು ಇದು ಸಾಬೀತುಪಡಿಸುತ್ತದೆ. ಆದರೆ ಲಸಿಕೆಗಳು ಸೋಂಕಿನ ತೀವ್ರತೆ ಮತ್ತು ಮರಣವನ್ನು ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

“ಅಪಾಯ ಮತ್ತು ಲಾಭದ ವಿಶ್ಲೇಷಣೆಯನ್ನು ಮಾಡಿದರೆ, ಲಸಿಕೆಯು ವಯಸ್ಕರಿಗೆ ದೊಡ್ಡ ಪ್ರಯೋಜನವಾಗಿದೆ. ಮಕ್ಕಳ ವಿಷಯದಲ್ಲಿ, ಸೋಂಕಿನ ತೀವ್ರತೆಯು ತುಂಬಾ ಕಡಿಮೆಯಾಗಿದೆ. ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿಯ ಪ್ರಕಾರ, ಮಕ್ಕಳಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಗೆ ಕೇವಲ ಎರಡು ಸಾವುಗಳು ವರದಿಯಾಗಿವೆ. ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಲಾಭ ನಷ್ಟಗಳನ್ನು ಲೆಕ್ಕಾಚಾರ ಹಾಕಿದರೆ, ಅಪಾಯವೇ ಹೆಚ್ಚು” ಎಂದು ಅವರು ಹೇಳಿದ್ದಾರೆ.

ಅಮೆರಿಕಾ ಸೇರಿದಂತೆ ಕೆಲವು ದೇಶಗಳು ನಾಲ್ಕೈದು ತಿಂಗಳ ಹಿಂದೆ ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸಿದವು. ಮಕ್ಕಳಿಗೆ ಕೊರೊನಾ ಲಸಿಕೆಯನ್ನು ಪ್ರಾರಂಭಿಸುವ ಮೊದಲು ಈ ದೇಶಗಳ ಡೇಟಾವನ್ನು ವಿಶ್ಲೇಷಿಸಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ:3 ಡೋಸ್ ಲಸಿಕೆ ಪಡೆದ ಯುವಕನಲ್ಲಿಯೂ ಓಮಿಕ್ರಾನ್ ಸೋಂಕು: ಮುಂಬೈ ಪಾಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...