Homeಕರೋನಾ ತಲ್ಲಣವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

ವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

- Advertisement -
- Advertisement -

18-44ರ ವಯೋಮಾನದಲ್ಲಿ ಲಸಿಕೆ ಪಡೆಯುವವರಲ್ಲಿ ವಿದೇಶಕ್ಕೆ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕೆ ತೆರಳುವವರನ್ನು ಆದ್ಯತಾ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿಕೆ ಉಲ್ಲೇಖಿಸಿ ಇಂದು ಪ್ರಜಾವಾಣಿ ವರದಿ ಮಾಡಿದೆ.

ಆದರೆ ಅವರು ಯಾವ ಲಸಿಕೆ ಪಡೆಯಬೇಕೆಂದು ಎಲ್ಲೂ ಹೇಳಿಲ್ಲ. ಕೊವ್ಯಾಕ್ಸಿನ್ ಲಸಿಕೆ ಪಡೆದು ಸರ್ಟಿಫಿಕೇಟ್ ಪಡೆದರೆ ಅದಕ್ಕೆ ಬಹುತೇಕ ದೇಶಗಳಲ್ಲಿ ಮಾನ್ಯತೆ ಇಲ್ಲ.
ಹಾಗೆ ನೋಡಿದರೆ ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನು ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವ್ಯಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವ್ಯಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಮೂರು ದಿನದ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ.

ಈ ಪೈಕಿ ಈಗಾಗಲೇ ಕೆಲವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು ಕೋವಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

“ಕೊವ್ಯಾಕ್ಸಿನ್ ಅನುಮೋದಿತ ಪಟ್ಟಿಯಲ್ಲಿಲ್ಲ, ಇದರರ್ಥ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಹೋಟೆಲ್ ಕ್ಯಾರೆಂಟೈನ್‌ನಿಂದ ಮುಕ್ತಗೊಳಿಸಲಾಗುವುದಿಲ್ಲ. 14 ದಿನಗಳ ಕಾಲ ಹೋಟೆಲ್‌ನಲ್ಲಿ ಉಳಿಯುವುದು ತುಂಬಾ ದುಬಾರಿಯಾಗಿದೆ” ಎಂದು ಲಿಮೆರಿಕ್ ವಿಶ್ವವಿದ್ಯಾಲಯದ ಅಧ್ಯಯನ ಸಲಹೆಗಾರ್ತಿ ಸೌಮ್ಯಾ ಪಾಂಡೆ ಹೇಳಿದ್ದಾರೆ.

ಅಮೆರಿಕ, ಬ್ರೆಜಿಲ್ ಮತ್ತು ಹಂಗೇರಿ ಸೇರಿದಂತೆ “60 ಕ್ಕೂ ಹೆಚ್ಚು ದೇಶಗಳಲ್ಲಿ” ಕೊವ್ಯಾಕ್ಸಿನ್‌ನ ಅನುಮೋದನೆಗಳು ಪ್ರಕ್ರಿಯೆಯಲ್ಲಿವೆ ಎಂದು ಭಾರತ್ ಬಯೋಟೆಕ್ ಹೇಳಿಕೆಯಲ್ಲಿ ತಿಳಿಸಿದೆ.
“13 ದೇಶಗಳಲ್ಲಿ ತುರ್ತು ಬಳಕೆಯ ದೃಢೀಕರಣಗಳನ್ನು ಪಡೆಯಲಾಗಿದೆ. ತುರ್ತು ಬಳಕೆ ಪಟ್ಟಿಗೆ ಅರ್ಜಿಯನ್ನು ಡಬ್ಲ್ಯುಎಚ್‌ಒ ಜಿನೀವಾ ಕಚೇರಿಗೆ ಸಲ್ಲಿಸಲಾಗಿದೆ ಮತ್ತು ಜುಲೈ-ಸೆಪ್ಟೆಂಬರ್‌ನಲ್ಲಿ ನಿಯಂತ್ರಕ ಅನುಮೋದನೆಗಳನ್ನು ನಿರೀಕ್ಷಿಸಲಾಗಿದೆ” ಎಂದು ಕಂಪನಿ ತಿಳಿಸಿದೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಶೈಕ್ಷಣಿಕ ಅವಧಿಗಳು ಪ್ರಾರಂಭವಾಗಲಿವೆ.

ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್ ಎರಡು ಲಸಿಕೆಗಳು ಈಗ ದೇಶದಲ್ಲಿ ಬಳಕೆಯಲ್ಲಿವೆ. ರಷ್ಯಾದ ಸ್ಪುಟ್ನಿಕ್ ಮೂರನೇ ಸ್ಥಾನ ಪಡೆಯಲಿದೆ. ಕೊವ್ಯಾಕ್ಸಿನ್ ಅನ್ನು ಪೂರ್ಣ ಕ್ಲಿನಿಕಲ್ ಮಾಹಿತಿಯಿಲ್ಲದೆ ಜನವರಿಯಲ್ಲಿ ತುರ್ತು ಬಳಕೆಗಾಗಿ ಅನುಮೋದಿಸಲಾಯಿತು. ಇದು ಸಾಕಷ್ಟು ವಿವಾದಗಳಿಗೆ ಕಾರಣವಾಯಿತು ಮತ್ತು ರಾಷ್ಟ್ರವ್ಯಾಪಿ ಲಸಿಕೆ ಚಾಲನೆಯ ಆರಂಭಿಕ ಹಂತಗಳಲ್ಲಿ ಈ ಲಸಿಕೆ ಪಡೆಯಲು ಸಾವಿರಾರು ಜನರು ಮುಖ್ಯವಾಗಿ ವೈದ್ಯಕೀಯ ಸಿಬ್ಬಂದಿ ಹಿಂಜರಿಕೆ ತೋರಿದರು.


ಇದನ್ನೂ ಓದಿ: ದೆಹಲಿ ವಾಸ್ತು- ಹಿನ್ನೋಟ; ಭವ್ಯ ಕಟ್ಟಡವೊಂದಕ್ಕೆ ಪರಂಪರೆಯ ನೆಲಸಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...