Homeಕರೋನಾ ತಲ್ಲಣಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ.

- Advertisement -
- Advertisement -

ದೇಶದಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತಿದ್ದು ಈ ನಡುವೆ, ಕೋವಾಕ್ಸಿನ್ ತಯಾರಕರಾದ ಭಾರತ್ ಬಯೋಟೆಕ್‌‌ ಅನ್ನು ಉತ್ಪಾದನಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಕೇಂದ್ರವು ಕೇಳಿಕೊಂಡಿದೆ ಎಂದು TNIE ಪತ್ರಿಕೆಯು ವರದಿ ಮಾಡಿದೆ.

ಪ್ರಸ್ತುತ ಲಸಿಕೆಗಳ ಪೂರೈಕೆ ಸಮಸ್ಯೆಯನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರವು ಕೊರೊನಾಕ್ಕಾಗಿ ತಯಾರಿಸಿದ “ದೇಶೀಯ ಲಸಿಕೆಗಳ ಸಾಮರ್ಥ್ಯ ವೃದ್ಧಿಗೆ” ಅನುಕೂಲವಾಗುವಂತೆ ಒಂದು ಸಮಿತಿಯನ್ನು ರಚಿಸಿದೆ. ಭಾರತದಲ್ಲಿ ಇಲ್ಲಿಯವರೆಗೆ ನೀಡಲಾದ 5,33,24,811 ಡೋಸ್‌ಗಳಲ್ಲಿ, 50 ಲಕ್ಷಕ್ಕಿಂತ ಕಡಿಮೆ ಅಥವಾ 10% ಲಸಿಕೆ ಪ್ರಮಾಣವು ದೇಶದ ಮೊದಲ ದೇಶೀಯ ಕೋವಿಡ್‌ ಲಸಿಕೆಯಾದ ಕೊವಾಕ್ಸಿನ್ ಅನ್ನು ಒಳಗೊಂಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಮಾತ್ರ ಕೊರೊನಾ ಲಸಿಕೆ ದಾಸ್ತಾನು!

ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಹೇಳುವಂತೆ ಭಾರತದಲ್ಲಿ ಅನುಮತಿ ಲಭಿಸಿದ ಎರಡು ಲಸಿಕೆಗಳ ಸುಮಾರು 8.7 ಕೋಟಿ ಡೋಸೇಜ್‌ಗಳನ್ನು ಇಲ್ಲಿಯವರೆಗೆ ರಾಜ್ಯಗಳಿಗೆ ಕಳುಹಿಸಲಾಗಿದೆ. ಆದರೆ ಈಗ ಉದ್ದೇಶಿತ ಫಲಾನುಭವಿಗಳ ಸಂಖ್ಯೆ ಈಗ 34 ಕೋಟಿಗೆ ತಲುಪಿರುವುದರಿಂದ, ಮುಂದಿನ ಕೆಲವು ತಿಂಗಳುಗಳಲ್ಲಿ ಆದ್ಯತೆಯ ಜನಸಂಖ್ಯೆಗಾಗಿ ದೇಶಕ್ಕೆ 64 ಕೋಟಿ ಪ್ರಮಾಣದ ಲಸಿಕೆಗಳು ಬೇಕಾಗುತ್ತವೆ.

“ಇದು ಕಠಿಣ ಕಾರ್ಯವಾಗಿದೆ ಮತ್ತು ಭಾರತ್ ಬಯೋಟೆಕ್ ತನ್ನ ಉತ್ಪಾದನೆಯನ್ನು ಹೆಚ್ಚಿಸದಿದ್ದರೆ, ದೊಡ್ಡ ಸವಾಲಾಗಿ ಪರಿಣಮಿಸುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಧಿಕೃತವಾಗಿ, ಭಾರತದಲ್ಲಿ ಕೋವಿಡ್‌ ಲಸಿಕೆಗಳ ಕೊರತೆಯಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಸಚಿವಾಲಯದ ಅನೇಕ ಅಧಿಕಾರಿಗಳ ಪ್ರಕಾರ, ಈಗಿನಂತೆ ಸೀರಮ್‌ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಉತ್ಪಾದನಾ ಸಾಮರ್ಥ್ಯ 5-6 ಕೋಟಿ ಆಗಿದ್ದರೆ, ಭಾರತ್ ಬಯೋಟೆಕ್‌‌ ಒಂದು ಕೋಟಿ ಮಿಲಿಯನ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. “ಆದಾಗ್ಯೂ, ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ” ಎಂದು ಮೂಲವನ್ನು ಉಲ್ಲೇಖಿಸಿ TNIE  ವರದಿ ಮಾಡಿದೆ.

ಇದನ್ನೂ ಓದಿ: ಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

“ಆದ್ದರಿಂದ, ಕೊವಾಕ್ಸಿನ್‌ ಎರಡನೇ ಆಯ್ಕೆಯಾಗುದರ ಬದಲಿಗೆ ಮಹತ್ವದ ಪಾತ್ರ ವಹಿಸಬೇಕಾಗುತ್ತದೆ” ಎಂದು ಮೂಲವು ತಿಳಿಸಿದೆ. ಈ ಕಾರಣಕ್ಕಾಗಿಯೇ ಸರ್ಕಾರ ಕಳೆದ ವಾರ ಅಂತರ ಸಚಿವಾಲಯದ ಸಮಿತಿಯನ್ನು ರಚಿಸಿ, ಲಸಿಕೆ ತಯಾರಕರು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನೇಕ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಕೇಳಿಕೊಂಡಿದೆ.

“ಸರ್ಕಾರವು ಕೆಲವು ಸಣ್ಣ ಉತ್ಪಾದಕರಿಂದ ಕೂಡಾ ವಿನಂತಿಗಳನ್ನು ಸ್ವೀಕರಿಸಿದೆ. ಕೆಲವು ಲಸಿಕೆ ಉತ್ಪಾದನಾ ಘಟಕಗಳನ್ನು ಕೋವಿಡ್ ಲಸಿಕೆ ಉತ್ಪಾದನಾ ಘಟಕಗಳಾಗಿ ಪರಿವರ್ತಿಸಲು ಕೆಲವು ರಾಜ್ಯ ಸರ್ಕಾರಗಳು ಕೋರಿವೆ ಆದರೆ ಇದಕ್ಕೆ ಜೈವಿಕ ಸುರಕ್ಷತೆಯ ಮಟ್ಟಗಳ ಉನ್ನತ ಮಾನದಂಡಗಳಾಗಿ ಪರಿವರ್ತನೆ ಅಗತ್ಯವಿರುತ್ತದೆ” ಎಂದು ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆಂದು TNIE ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಕೊರೊನಾ ಸೋಂಕಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರೇ ಹೆಚ್ಚು: ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...