Homeಮುಖಪುಟಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ : ಆರೋಗ್ಯ ತಜ್ಞ ಆಶಿಶ್ ಝಾ

ಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ : ಆರೋಗ್ಯ ತಜ್ಞ ಆಶಿಶ್ ಝಾ

- Advertisement -
- Advertisement -

ಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ ಎಂದು ಸಾರ್ವಜನಿಕ ಆರೋಗ್ಯ ತಜ್ಞ ಫ್ರೊಫೆಸರ್ ಆಶಿಶ್ ಝಾ ಹೇಳಿದ್ದಾರೆ. ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೊಂದಿಗೆ ಸಂವಾದ ನಡೆಸುತ್ತಿದ್ದಾಗ ಈ ವಿಚಾರ ತಿಳಿಸಿದ್ದಾರೆ.

ಲಸಿಕೆ ಯಾವಾಗ ಸಿದ್ದವಾಗಬಹುದು ಎಂಬ ರಾಹುಲ್‌ ಪ್ರಶ್ನೆಗೆ ಉತ್ತರಿಸಿದ ಅವರು ಮುಂದಿನ ವರ್ಷ ಲಸಿಕೆ ಸಿದ್ದವಾಗುತ್ತದೆ ಎಂಬುದನ್ನು ಆತ್ಮವಿಶ್ವಾಸದಿಂದ ಹೇಳಬಲ್ಲೇ ಎಂದು ಆಶಿಶ್ ಝಾ ಹೇಳಿದ್ದಾರೆ.

ಕೊರೊನಾ ಬಿಕ್ಕಟ್ಟಿನ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜಾಗತಿಕ ಸಾರ್ವಜನಿಕ ಆರೋಗ್ಯ ತಜ್ಞ ಡಾ.ಅಶಿಶ್ ಝಾ ಮತ್ತು ಸ್ವೀಡನ್‌ನ ಕರೋಲಿನ್ಸ್ಕಾ ಸಂಸ್ಥೆಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಪ್ರೊಫೆಸರ್ ಜೋಹಾನ್ ಗೀಸೆಕೆ ಅವರೊಂದಿಗೆ ಸಂವಾದ ನಡೆಸಿದರು.

ರಾಹುಲ್ ಗಾಂಧಿಯವರೊಂದಿಗೆ ಮಾತನಾಡುತ್ತಾ ಆಶಿಶ್ ಝಾ “ಯಾಕೆ ಕಡಿಮೆ ಸಂಖ್ಯೆಯ ಜನರನ್ನು ಪರೀಕ್ಷೆ ನಡೆಸುತ್ತೀರಿ ಎಂದು ಕೆಲವು ಅಧಿಕಾರಿಗಳನ್ನು ಕೇಳಿದ್ದೇನೆ. ಅವರ ನಿಲುವು ಏನೆಂದರೆ, ಪರೀಕ್ಷಾ ಸಂಖ್ಯೆಯನ್ನು ಹೆಚ್ಚು ಮಾಡಿದರೆ ಕೊರೊನಾ ಪ್ರಕರಣಗಳು ಸಹ ಹೆಚ್ಚಾಗಿ ಜನ ಭಯಬೀಳುತ್ತಾರೆ ಎಂದು ಅಧಿಕಾರಿಗಳು ಹೇಳುತ್ತಾರೆ” ಎಂದು ಆಶ್ಚರ್‍ಯ ವ್ಯಕ್ತಪಡಿಸಿದ್ದಾರೆ.

“ಲಾಕ್ ಡೌನ್ ಮೂಲಕ ವೈರಸ್ ಅನ್ನು ನಿಧಾನಗೊಳಿಸಬಹುದು, ಇದರಿಂದ ಭಾರಿ ಆರ್ಥಿಕ ಪರಿಣಾಮಗಳು ಆಗುತ್ತದೆ. ಆದರೂ ಈ ಸಮಯವನ್ನು ಅಧಿಕಾರಿಗಳು ತಮ್ಮ ಪರೀಕ್ಷಾ ಮತ್ತು ಆಸ್ಪತ್ರೆಯ ಮೂಲಸೌಕರ್ಯವನ್ನು ತಯಾರಿಸಲು ಬಳಸಿಕೊಳ್ಳಬೇಕಿತ್ತು. ಮುಂದಾದರೂ ಎಲ್ಲವನ್ನೂ ಯೋಜಿಸುವ ರೀತಿಯಲ್ಲಿರಬೇಕು” ಅವರು ಝಾ ಹೇಳಿದ್ದಾರೆ.

ಲಾಕ್‌ಡೌನ್ ಸಮಯದಲ್ಲಿ ದೇಶಾದ್ಯಂತ ತೆರಳುತ್ತಿರುವ ವಲಸೆ ಕಾರ್ಮಿಕರನ್ನು ಇತ್ತೀಚೆಗೆ ಭೇಟಿ ಮಾಡಿದ ತಮ್ಮ ಅಭಿಪ್ರಾಯಗಳನ್ನು ರಾಹುಲ್ ಗಾಂಧಿ ಫ್ರೋ.ಝಾ ಅವರೊಂದಿಗೆ ಹಂಚಿಕೊಂಡರು. ಈ ಕಾರ್ಮಿಕರು ದೊಡ್ಡ ಅನಿಶ್ಚಿತತೆಯನ್ನು ಹೊಂದಿದ್ದಾರೆ ಎಂದು ಹೇಳಿದರು. ಇದನ್ನು ಒಪ್ಪಿಕೊಂಡ ಫ್ರೊಫೆಸರ್ ಲಾಕ್ ಡೌನ್ ಅನ್ನು ತೆರವುಗೊಳಿಸಲು ಸರ್ಕಾರವು ಕಾರ್ಯತಂತ್ರವನ್ನು ಹೊಂದಿರಬೇಕು ಎಂದು ಹೇಳಿದರು.

ಕೊರೊನಾ ಬಿಕ್ಕಟ್ಟು ಮತ್ತು ಭಾರತದ ಆರ್ಥಿಕತೆಯ ಮೇಲೆ ಅದರ ಪರಿಣಾಮಗಳ ಬಗ್ಗೆ ಚರ್ಚಿಸಲು ರಾಹುಲ್ ಗಾಂಧಿ ಜಾಗತಿಕ ಹಾಗೂ ಭಾರತೀಯ ಚಿಂತಕರೊಂದಿಗೆ ಸರಣಿ ಸಂವಾದಗಳನ್ನು ನಡೆಸುತ್ತಿದ್ದಾರೆ.

ಈ ತಿಂಗಳ ಆರಂಭದಲ್ಲಿ ಅವರು ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನರ್ಜಿ ಅವರೊಂದಿಗೆ ಸಂವಾದ ನಡೆಸಿದ್ದರು. ಅಲ್ಲದೆ ಏಪ್ರಿಲ್ 30 ರಂದು ಆರ್‌ಬಿಐ ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರೊಂದಿಗೆ ಮಾತುಕತೆ ನಡೆಸಿದ್ದರು.


ಓದಿ: ಉತ್ತರ ಪ್ರದೇಶದ ಕಾರ್ಮಿಕರು ಆದಿತ್ಯನಾಥರ ವೈಯಕ್ತಿಕ ಆಸ್ತಿಯಲ್ಲ: ರಾಹುಲ್ ಗಾಂಧಿ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...