Homeಮುಖಪುಟಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟರ ಬರೆಹಗಳ ಸಂಕಲನ 'ಬೇರೆಯೇ ಮಾತು' ಪುಸ್ತಕ ಬಿಡುಗಡೆ

ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟರ ಬರೆಹಗಳ ಸಂಕಲನ ‘ಬೇರೆಯೇ ಮಾತು’ ಪುಸ್ತಕ ಬಿಡುಗಡೆ

- Advertisement -
- Advertisement -

ಓದುಗರ ಸಂಪಾದಕ ಎಂದು ಖ್ಯಾತಿ ಗಳಿಸಿದ್ದ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿಯವರ ಬರೆಹಗಳ ಸಂಕಲನವಾದ ‘ಬೇರೆಯೇ ಮಾತು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ಏಪ್ರಿಲ್ 16ರ ಶನಿವಾರ ಬೆಂಗಳೂರಿನ ಗಾಂಧಿಭವನದಲ್ಲಿ ಜರುಗಲಿದೆ.

ಪ್ರಜಾವಾಣಿ ಪತ್ರಿಕೆಯಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದ ವಡ್ಡರ್ಸೆ ರಘುರಾಮ ಶೆಟ್ಟಿಯವರು ತದನಂತರ ‘ಓದುಗರ ಒಡೆತನದ ಪತ್ರಿಕೆ’ ಕಟ್ಟುವ ಆಶಯದಲ್ಲಿ ‘ಮುಂಗಾರು’ ಎಂಬ ಪತ್ರಿಕೆ ಸ್ಥಾಪಿಸಿದ್ದರು. ಸ್ಥಾಪಿತ ಮೇಲ್ವರ್ಗದ ಹಿತಾಸಕ್ತಿಯುಳ್ಳ ಪತ್ರಿಕೆಗಳಿಗೆ ಎದುರಾಗಿ ಜನಪರ ಉದ್ದೇಶ ಮತ್ತು ಕಾಳಜಿ ಹೊಂದಿದ್ದ ಮುಂಗಾರು ಪತ್ರಿಕೆ ಅಲ್ಪಕಾಲದಲ್ಲಿಯೇ ಖ್ಯಾತಿ ಗಳಿಸಿತ್ತು. ಹಾಗಾಗಿ ವಡ್ಡರ್ಸೆಯವರು ಓದುಗರ ಸಂಪಾದಕ ಎಂದೇ ಕರೆಯಲ್ಪಡುತ್ತಿದ್ದರು. ಅವರ ಅಮೂಲ್ಯ ಬರೆಹಗಳನ್ನು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟುರವರು ಸಂಪಾದಿಸಿ ‘ಬೇರೆಯೇ ಮಾತು’ ಕೃತಿ ರೂಪ ನೀಡಿದ್ದಾರೆ. ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಪ್ರಕಟಿಸಿದೆ.

ಇದನ್ನೂ ಓದಿ: ‘ಅಂಬೇಡ್ಕರ್ ಆ ಕಾಲದಲ್ಲಿ ಸಂವಿಧಾನ ಬರ್ದಿದ್ಕೋ, ನಮ್ಮಪ್ಪಾಮ್ಮ ಸ್ಕೂಲಿಗೆ ಕಳ್ಸಿದ್ಕೊ, ಇಷ್ಟೆಲ್ಲಾ ಜಗತ್ತು ತಿಳ್ಕೋಣಕ್ಕಾಯ್ತು’

ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಜನನುಡಿ ಬಳಗ ಮತ್ತು ಅಹರ್ನಿಶಿ ಪ್ರಕಾಶನ ಜೊತೆಗೂಡಿ ಆಯೋಜಿಸಿವೆ. ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಿಎಂ ಮತ್ತು ಹಾಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಚಿಂತಕರಾದ ಡಾ.ಕೆ.ಮರುಳಸಿದ್ದಪ್ಪ, ಲೇಖಕರಾದ ಕೆ.ಪುಟ್ಟಸ್ವಾಮಿ, ಪುಸ್ತಕದ ಸಂಪಾದಕರಾದ ದಿನೇಶ್ ಅಮಿನ್ ಮಟ್ಟು, ಜನನುಡಿ ಬಳಗದ ಮುನೀರ್ ಕಾಟಿಪಳ್ಳ ಮತ್ತು ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆಯವರು ಉಪಸ್ಥಿತರಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...