Homeಮುಖಪುಟವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

ವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

- Advertisement -
- Advertisement -

ಮಸೀದಿಯ ಬಳಿ ಮದುವೆ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಿದ್ದಕ್ಕಾಗಿ ಶನಿವಾರ (ಮಾರ್ಚ್ 11) ಗುಜರಾತ್‌ನ ವಡೋದರಾ ತಾಲೂಕಿನ ಸಾಮಿಯಾಲ ಗ್ರಾಮದಲ್ಲಿ ಕೋಮು ಘರ್ಷಣೆ ಸಂಭವಿಸಿತ್ತು. ಈ ಘಟನೆಯಲ್ಲಿ ಒಟ್ಟು 37 ಜನರನ್ನು ಬಂಧಿಸಲಾಗಿತ್ತು. ಈಗ ಅವರ ಜಾಮೀನು ಪ್ರಕ್ರಿಯೆಯಲ್ಲಿ ಗ್ರಾಮಸ್ಥರು ಒಬ್ಬರಿಗೊಬ್ಬರು ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ.

ಭಾನುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಾಮಿಯಾಲ ಗ್ರಾಮದ ಎರಡೂ ಸಮುದಾಯದವರೊಂದಿಗೆ ಜತೆ ಶಾಂತಿ ಸಭೆ ಏರ್ಪಡಿಸಿದ್ದರು. ಜಾಮೀನು ಪ್ರಕ್ರಿಯೆಯಲ್ಲಿ ಪರಸ್ಪರ ಜಾಮೀನುದಾರರಾಗಿರಲು ಅಧಿಕಾರಿಗಳು ಮತ್ತು ಪೊಲೀಸರ ಶಿಫಾರಸನ್ನು ಗ್ರಾಮದ ಹಿರಿಯರು ಮತ್ತು ಸಮಾಜದ ಮುಖಂಡರು ಒಪ್ಪಿಕೊಂಡರು.

ಬಂಧಿತರಾಗಿದ್ದ 37ಜನರಿಗೆ (22 ಹಿಂದೂ ಸಮುದಾಯದಿಂದ ಮತ್ತು 15 ಮುಸ್ಲಿಂ) ಇತರ ಸಮುದಾಯದವರು ಪರಸ್ಪರ ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ. ಈ ಬೆಳವಣಿಗೆಯು “ಹಳೆಯ ತಲೆಮಾರಿನ” ನಡುವೆ ಅಸ್ತಿತ್ವದಲ್ಲಿದ್ದ “ಸೋದರತ್ವ”ದ ಮನೋಭಾವವನ್ನು ಮತ್ತೆ ಜಾರಿಗೆ ತಂದಂತಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ ಪೊಲೀಸ್

ಸಭೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಚ್.ಚಾವಡಾ, ತಾಲೂಕು ಪೊಲೀಸ್ ಠಾಣಾ ಪ್ರಭಾರ ಉಪನಿರೀಕ್ಷಕ ವಿ.ಜಿ.ಲಂಬಾರಿಯಾ ಹಾಗೂ ಇತರೆ ಪೊಲೀಸ್ ಆಡಳಿತ ಅಧಿಕಾರಿಗಳು, ಗ್ರಾಮದ ಎರಡೂ ಸಮುದಾಯದ ಸದಸ್ಯರನ್ನು ಭೇಟಿ ಮಾಡಿ, ಸಂಪೂರ್ಣ ಸಾಮರಸ್ಯದಿಂದ ಜೀವನ ನಡೆಸಬೇಕು ಎಂದು ಒತ್ತಾಯಿಸಿದರು.

ಹಿಂದು ಸಮುದಾಯದವರು ಶನಿವಾರ (ಮಾ.11) ಮಧ್ಯರಾತ್ರಿ ಡಿಜೆ ಸಂಗೀತದೊಂದಿಗೆ ವಿವಾಹದ ಮೆರವಣಿಗೆಯಲ್ಲಿ ಬಂದು ಮಸೀದಿಯ ಬಳಿ ಪಟಾಕಿ ಸಿಡಿಸಿರುವುದು ಪ್ರಚೋದನೆಗೆ ಕಾರಣವಾಗಿದೆ. ಆ ಬಳಿಕ ಎರಡು ಸಮುದಾಯಗಳ ಗುಂಪುಗಳ ನಡುವೆ ಸಂಘರ್ಷ ಆರಂಭವಾಗಿ, ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿ ಮತ್ತು ಹಲವರು ಹಾನಿಗೊಳಗಾದರು. ಈ ಘಟನೆ ನಡೆದ ಎರಡು ದಿನಗಳ ನಂತರ ಗ್ರಾಮವು ಸಹಜ ಸ್ಥಿತಿಗೆ ಮರಳಿತು ಎಂದು ಪೊಲೀಸರು ತಿಳಿಸಿದ್ದಾರೆ.

Fight over crackers sparks communal riot near Vadodara | Vadodara News -  Times of India

ಪೊಲೀಸರ ಮಧ್ಯಪ್ರವೇಶದ ನಂತರ, ಗ್ರಾಮಸ್ಥರು ಈ ವಾರಾಂತ್ಯದಲ್ಲಿ ಕೋಮು ಸೌಹಾರ್ದತೆಗಾಗಿ ಮತ್ತೊಂದು ಸಭೆ ಕರೆಯಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ಸಬ್-ಇನ್‌ಸ್ಪೆಕ್ಟರ್ ಲಂಬಾರಿಯಾ, ”2017ರಲ್ಲಿ ಎರಡು ಕೋಮಿನ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟ ನಂತರ ಅಹಿತಕರ ಘಟನೆಗಳನ್ನು ತಪ್ಪಿಸಲು ಗ್ರಾಮಸ್ಥರು ಮೆರವಣಿಗೆಗಳು, ಧಾರ್ಮಿಕ ಹಬ್ಬಗಳು ಮತ್ತು ಪೂಜಾ ಸ್ಥಳಗಳ ಬಗ್ಗೆ ನಿಯಮಗಳನ್ನು ರಚಿಸಿದ್ದರು. ಆದರೆ ಕೆಲ ವರ್ಷದಿಂದ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಗ್ರಾಮಸ್ಥರು ನಮಗೆ ತಿಳಿಸಿದರು. ಈಗ ಅದೇ ನಿಯಮಗಳನ್ನು ಬಲಪಡಿಸಲು ಅವರು ಸಭೆಯನ್ನು ಕರೆಯಲು ನಿರ್ಧರಿಸಿದ್ದಾರೆ” ಎಂದು ಲಂಬಾರಿಯಾ ಅವರು ತಿಳಿಸಿದರು.

ಸಾಮಿಯಾಲ ಗ್ರಾಮದಲ್ಲಿ ಒಟ್ಟು 6,000 ಜನಸಂಖ್ಯೆ ಇದ್ದು, ಸುಮಾರು 2,000 ಮುಸ್ಲಿಮರಿದ್ದಾರೆ. 12 ಪಂಚಾಯಿತಿ ಸದಸ್ಯರಲ್ಲಿ ಇಬ್ಬರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...