Homeಮುಖಪುಟಆಗ್ರಾ: ಪ್ರೇಮಿಗಳಿಗೆ ಕಿರುಕುಳ ನೀಡಿದ್ದ ಬಜರಂಗದಳದ 30-35 ಮಂದಿ ಮೇಲೆ FIR

ಆಗ್ರಾ: ಪ್ರೇಮಿಗಳಿಗೆ ಕಿರುಕುಳ ನೀಡಿದ್ದ ಬಜರಂಗದಳದ 30-35 ಮಂದಿ ಮೇಲೆ FIR

- Advertisement -
- Advertisement -

ಆಗ್ರಾದಲ್ಲಿ ಪ್ರೇಮಿಗಳ ದಿನದಂದು ಹಲವು ಜೋಡಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಗಳು ನಡೆದಿದ್ದು, ಉದ್ಯಾನವನಗಳಲ್ಲಿದ್ದ ಜೋಡಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ರಾಷ್ಟ್ರೀಯ ಬಜರಂಗದಳದ 30 ರಿಂದ 35 ಮಂದಿ ಮೇಲೆ ಎಫ್‌ಐಆರ್‌ ದಾಖಲಾಗಿದೆ ಎಂದು ಆಗ್ರಾ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಬಜರಂಗದಳ ಮತ್ತು ಹಿಂದೂ ಮಹಾಸಭಾದ ಕಾರ್ಯಕರ್ತರು ಸೋಮವಾರ (ವ್ಯಾಲೆಂಟೈನ್ಸ್ ದಿನ) ಹಾಕಿ ಸ್ಟಿಕ್‌ಗಳೊಂದಿಗೆ ಬೀದಿಗಳಲ್ಲಿ ಓಡಾಡುತ್ತಿದ್ದದ್ದು ಕಂಡುಬಂದಿತು. ಇದೇ ವೇಳೆ ಉದ್ಯಾನವನದಲ್ಲಿ ಯುವತಿಯೊಬ್ಬಳ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಲಾಗಿತ್ತು. ಪ್ರೇಮಿಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

ಇದರ ಜೊತೆಗೆ ಬಜರಂಗದಳದ ಜೊತೆ ಇದ್ದ ಹುಡುಗಿಯರೂ ಕೂಡ ಯುವತಿಯನ್ನು ಬೈದು ಆಕೆಯ ಬ್ಯಾಗ್‌ನಲ್ಲಿ ಹುಡುಕಾಟ ನಡೆಸಿದ್ದಾರೆ. ಕಾಲೇಜು ಡ್ರೆಸ್‌ನಲ್ಲಿದ್ದ ಯುವತಿಯನ್ನು ಬಲವಂತವಾಗಿ ವಿಡಿಯೋ ಮಾಡಿ ಆಕೆಯ ಕುಟುಂಬದ ಸದಸ್ಯರ ನಂಬರ್ ಪಡೆದು ದೌರ್ಜನ್ಯ ಎಸಗಿದ್ದಾರೆ. ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದಾಗ, ಬಜರಂಗದಳದವರು ಅವರೊಂದಿಗೂ ಜಗಳವಾಡಿದರು. ಇಷ್ಟೆಲ್ಲಾ ನಡೆದರೂ ಪಾರ್ಕ್ ಮುಂಭಾಗಗಳಲ್ಲಿದ್ದ ಪೊಲೀಸರೂ ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಇದನ್ನೂ ಓದಿ: ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ಬಳಿಕ ಈ ವಿಷಯವನ್ನು ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ವಿಷಯ ತಿಳಿದ ಎಸ್‌ಎಸ್‌ಪಿ ಸುಧೀರ್‌ಕುಮಾರ್‌ ಹರಿಪರ್ವತ್‌ ಪೊಲೀಸ್‌ ಠಾಣೆಗೆ ಪ್ರಕರಣ ದಾಖಲಿಸಿಕೊಳ್ಳಲು ಆದೇಶಿಸಿದ್ದರು.

ಆಗ್ರಾ ಪೊಲೀಸರು ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.”ಹರಿಪರ್ವತ ಪೊಲೀಸ್ ಠಾಣಾ ವ್ಯಾಪ್ತಿಯ ಪಲಿವಾಲ್ ಪಾರ್ಕ್‌ನಲ್ಲಿ ರಾಷ್ಟ್ರೀಯ ಬಜರಂಗ ದಳವು ಯುವಕ-ಯುವತಿಯರ ಮೇಲೆ ಅಸಭ್ಯವಾಗಿ ವರ್ತಿಸಿದ ಪ್ರಕರಣವನ್ನು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರೀಯ ಬಜರಂಗದಳದ 30 ರಿಂದ 35 ಮಂದಿ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಮುಂದಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಬಜರಂಗದಳ ಮತ್ತು ಅಖಿಲ ಭಾರತ ಹಿಂದೂ ಮಹಾಸಭಾದ ಪದಾಧಿಕಾರಿಗಳು ಉದ್ಯಾನವನಗಳಲ್ಲಿ ಯಾರೇ ಅಶ್ಲೀಲವಾಗಿ ವರ್ತಿಸಿದರೆ ಅವರ ಮುಖ ಕಪ್ಪಾಗಿಸಿ ಕತ್ತೆಯ ಮೇಲೆ ಕೂರಿಸಿ ಮೆರವಣಿಗೆ ಮಾಡಲಾಗುವುದು. ಅಲ್ಲದೆ, ಹಿಂದೂ ಸಂಪ್ರದಾಯದ ಪ್ರಕಾರ ಅವರಿಗೆ ಸ್ಥಳದಲ್ಲೇ ಮದುವೆ ಮಾಡಲಾಗುತ್ತದೆ ಎಂದು ಘೋಷಿಸಿದ್ದರು.

ಅಖಿಲ ಭಾರತ ಹಿಂದೂ ಮಹಾಸಭಾದ ಮೀನಾ ದಿವಾಕರ್ ಮತ್ತು ರೌನಕ್ ಠಾಕೂರ್ ನೇತೃತ್ವದಲ್ಲಿ ಸೋಮವಾರ ದಿವಾಣಿ ಚೌಕದಲ್ಲಿ ಪ್ರೇಮಿಗಳ ಪ್ರತಿಕೃತಿ ದಹಿಸಲಾಯಿತು. ಇದಾದ ನಂತರ, ರಾಷ್ಟ್ರೀಯ ಬಜರಂಗದಳದ ಕಾರ್ಯಕರ್ತರು ವ್ಯಾಲೆಂಟೈನ್ ಪ್ರತಿಮೆಗೆ ಸೀರೆ ತೊಡಿಸಿ ಪ್ರತಿಭಟನೆ ನಡೆಸಿದ್ದರು. ಇದಾದ ನಂತರ ಉಭಯ ಪಕ್ಷಗಳ ಕಾರ್ಯಕರ್ತರು ಉದ್ಯಾನವನಗಳತ್ತ ತೆರಳಿ ಜೋಡಿಗಳ ಜೊತೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ಮಾಡಿದ್ದರು.


ಇದನ್ನೂ ಓದಿ: ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರೀತಿ ಪ್ರೇಮ ಸಹನೆ ತಾಳ್ಮೆ ಮತ್ತು ವಿವೇಚನೆ ಇಲ್ಲದೆ ಈ ಅಂಧರು ಜಾತಿಗ್ರಸ್ಥ ಸಮಾಜ ನಿರ್ಮಾಣಕ್ಕಾಗಿ ಕುತಂತ್ರ ಮಾಡುತ್ತಿರುವುದು ತೀರಾ ಖಂಡನೀಯಾ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...