Homeಕರ್ನಾಟಕವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಚಾರ್ಜ್‌ ಶೀಟ್ ಸಲ್ಲಿಸಿದ ಎಸ್‌ಐಟಿ

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಚಾರ್ಜ್‌ ಶೀಟ್ ಸಲ್ಲಿಸಿದ ಎಸ್‌ಐಟಿ

- Advertisement -
- Advertisement -

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ (ಕೆಎಂವಿಎಸ್‌ಟಿಡಿಸಿಎಲ್‌) ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) 300 ಪುಟಗಳ ಆರೋಪ ಪಟ್ಟಿಯನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯಕ್ಕೆ ಗುರುವಾರ ಸಲ್ಲಿಸಿದೆ ಎಂದು ವರದಿಯಾಗಿದೆ.

ಪ್ರಕರಣದಲ್ಲಿ ಕೆಎಂವಿಎಸ್‌ಟಿಡಿಸಿಎಲ್‌ ಹಿಂದಿನ ವ್ಯವಸ್ಥಾಪಕ ಜೆ.ಜಿ ಪದ್ಮನಾಭ ಮತ್ತು ಪರಶುರಾಮ ದುರ್ಗಣ್ಣನವರ್‌ ಅವರನ್ನು ಆರೋಪಿಗಳನ್ನಾಗಿಸಲಾಗಿದೆ. ಈ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿದೆ. ಚಂದ್ರಶೇಖರನ್‌ ಪತ್ನಿ ಕವಿತಾ ಅವರು ನೀಡಿದ ದೂರಿನನ್ವಯ ಶಿವಮೊಗ್ಗದ ವಿನೋಬನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 306 ಮತ್ತು 34ರ ಅಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಪ್ರಮುಖವಾಗಿ ಹೆಸರು ಕೇಳಿ ಬಂದಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಹಾಗೂ ಇನ್ನಿತರರ ಹೆಸರು ಆರೋಪಪಟ್ಟಿಯಲ್ಲಿ ಇಲ್ಲ ಎಂದು ತಿಳಿದು ಬಂದಿದೆ.

ಚಂದ್ರಶೇಖರನ್‌ ಅವರ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ಬಳಿಕ, ರಾಜ್ಯ ಸರ್ಕಾರ ಮೇ 31,2023ರಂದು ಸಿಐಡಿಯ ಎಸ್‌ಐಟಿಗೆ ಪ್ರಕರಣದ ತನಿಖೆ ವರ್ಗಾಯಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಎಲ್ಲವನ್ನೂ ಎಸ್‌ಐಟಿ ತನಿಖೆ ನಡೆಸುತ್ತಿದೆ.

ಶಿವಮೊಗ್ಗದ ವಿನೋಬನಗರದ ತಮ್ಮ ಮನೆಯಲ್ಲಿ 2024ರ ಮೇ 26 ರಂದು ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಪ್ರಾಥಮಿಕ ಹಂತದ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ಮಾಡಬೇಕಾಗಿದ್ದು, ಸಂಪೂರ್ಣ ದೋಷರೋಪ ಪಟ್ಟಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : ‘ದುಡಿದು ಸಂಪಾದಿಸಿ’ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...