Homeಕರ್ನಾಟಕವಾಲ್ಮೀಕಿ ನಿಗಮ ಹಗರಣ : ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಾಲ್ಮೀಕಿ ನಿಗಮ ಹಗರಣ : ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ದ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಇಂದು (ನ.13) ವಜಾ ಮಾಡಿದೆ.

“ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಕ್ಕೆ ಸಂಬಂಧಿಸಿದಂತೆ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ ಸೆಕ್ಷನ್‌ 35ಎ ಅಡಿ ವ್ಯಾಖ್ಯಾನವನ್ನು ಒಪ್ಪಲಾಗದು. ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಕೋರಿಕೆಗೆ ಅನುಮತಿಸಿದರೆ ಪ್ರತಿಯೊಂದು ಬ್ಯಾಂಕಿಂಗ್‌ ಸಂಸ್ಥೆಯು ತನಿಖೆಗೆ ಕೋರಬಹುದು. ಹೀಗೆ ಮಾಡಿದಲ್ಲಿ ದೆಹಲಿ ಪೊಲೀಸ್‌ ಸ್ಥಾಪನಾ ಕಾಯ್ದೆಯು ಅನುಪಯುಕ್ತವಾಗಲಿದೆ” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠ ಮೌಖಿಕವಾಗಿ ಹೇಳಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಬಿ ವಿ ಆಚಾರ್ಯ, “ಯಾವುದೇ ಪ್ರಕರಣದ ತನಿಖೆ ನಡೆಸುವ ಅಂತರ್ಗತ ಅಧಿಕಾರ ಸಿಬಿಐಗೆ ಇಲ್ಲ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲಾಗದು. ಪೊಲೀಸ್‌ ಅಧಿಕಾರವು ಶಾಸನಬದ್ಧವಾಗಿದ್ದು, ಅದು ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿದೆ. ಸಿಬಿಐ ಎಂದರೆ ಕೇಂದ್ರ ಸರ್ಕಾರವಾಗಿದ್ದು, ಅದು ಪ್ರಕರಣದಲ್ಲಿ ಪಕ್ಷಕಾರನಾಗಿಲ್ಲದಿದ್ದರೂ ನ್ಯಾಯಾಲಯದ ಮುಂದೆ ಬಂದಿದೆ. ತನ್ನ ಎರಡು ಬಾಹುಗಳಾದ ಸಿಬಿಐ ಮತ್ತು ಯೂನಿಯನ್‌ ಬ್ಯಾಂಕ್‌ ಮೂಲಕ ಕೇಂದ್ರ ಸರ್ಕಾರ ಇಲ್ಲಿ ಬಂದಿದೆ” ಎಂದಿದ್ದಾರೆ.

ಯೂನಿಯನ್‌ ಬ್ಯಾಂಕ್‌ ಪ್ರತಿನಿಧಿಸಿದ್ದ ಅಟಾರ್ನಿ ಜನರಲ್‌ ಆರ್‌ ವೆಂಕಟರಮಣಿ ಅವರು ಸಿಬಿಐ ಕೇಂದ್ರ ಸರ್ಕಾರದ ಪ್ರತಿರೂಪ ಎಂಬ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸಿಬಿಐ ಕೇಂದ್ರ ಸರ್ಕಾರದ ಪ್ರತಿರೂಪ ಎಂಬ ಕುರಿತು ವಾದಿಸಲು ಇಚ್ಛಿಸುವುದಿಲ್ಲ. ಅದು ಈ ಪ್ರಕರಣಕ್ಕೆ ಹೊಂದುವುದಿಲ್ಲ. ಇಂಥ ಪ್ರಕರಣದಲ್ಲಿ ಸಿಬಿಐ ಒಂದೇ ತನಿಖಾ ಸಂಸ್ಥೆ ಎಂದು ಆರ್‌ಬಿಐ ಹೇಳಿದೆ. ಬ್ಯಾಂಕಿಂಗ್‌ ಕ್ಷೇತ್ರದ ನಿರ್ವಹಣೆಗೆ ವ್ಯವಸ್ಥಿತ ಆಪತ್ತು ಎದುರಾದಾಗ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ ಸೆಕ್ಷನ್‌ 35ಎ ಅನ್ವಯಿಸುತ್ತದೆ” ಎಂದು ಹೇಳಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ “ಕೇಂದ್ರ ಸರ್ಕಾರವು ಪರೋಕ್ಷ ಪ್ರತಿನಿಧಿ ಮುಖೇನ ಯುದ್ಧಕ್ಕೆ ಇಳಿದಿದೆ. ಯೂನಿಯನ್‌ ಬ್ಯಾಂಕ್‌ ಹಿಂದಿನ ದಿನ ಸಿಬಿಐ ತನಿಖೆಗೆ ಕೋರುತ್ತದೆ. ಮಾರನೆಯ ದಿನ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಅಬಕಾರಿ ಇಲಾಖೆಯಿಂದ ₹700 ಕೋಟಿ ವಸೂಲಿ ಹೇಳಿಕೆ; ಪ್ರಧಾನಿ ಮೋದಿ ಆರೋಪಕ್ಕೆ ಸಿಎಂ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...