- Advertisement -
- Advertisement -
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಆರು ದಿನಗಳ ಕಾಲ ಕಸ್ಟಡಿಗೆ ಪಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಶುಕ್ರವಾರ (ಜು 12) ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಶುಕ್ರವಾರ ಸಂಜೆಯ ವೇಳೆ ವಶಕ್ಕೆ ಪಡೆದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು.
ಇಂದು (ಜು 13) ಬೆಳಿಗ್ಗೆ ಯಲಹಂಕದಲ್ಲಿರುವ ನ್ಯಾಯಾಧೀಶರ ಮನೆಯಲ್ಲಿ ನಾಗೇಂದ್ರ ಅವರನ್ನು ಅಧಿಕಾರಿಗಳು ಹಾಜರುಪಡಿಸಿದ್ದರು. ನ್ಯಾಯಾಧೀಶರು 6 ದಿನಗಳ ಕಾಲ, ಅಂದರೆ ಜುಲೈ 18ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ ‘ಜಾತಿ ನಿಂದನೆ’: ಆರೋಪ


