Homeಕರ್ನಾಟಕವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ : ಶಾಸಕ ಬಿ.ನಾಗೇಂದ್ರ 14 ದಿನ ನ್ಯಾಯಾಂಗ ಬಂಧನಕ್ಕೆ

ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ : ಶಾಸಕ ಬಿ.ನಾಗೇಂದ್ರ 14 ದಿನ ನ್ಯಾಯಾಂಗ ಬಂಧನಕ್ಕೆ

- Advertisement -
- Advertisement -

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಯಲ್ಲಿದ್ದ ನಾಗೇಂದ್ರ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯಕ್ಕೆ (ಸಿಸಿಎಚ್-82) ಇಂದು(ಜು. 22) ಹಾಜರುಪಡಿಸಲಾಯಿತು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹಾಜರಾದ ಇಡಿ ವಕೀಲ ಪಿ. ಪ್ರಸನ್ನ ಕುಮಾರ್ ಅವರು, ಪ್ರಕರಣದ ಮತ್ತೊಬ್ಬ ಆರೋಪಿ, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಹೈದರಾಬಾದ್‌ನ ಸತ್ಯನಾರಾಯಣ ವರ್ಮ ಅವರನ್ನು ಬಾಡಿ ವಾರೆಂಟ್ ಮುಖಾಂತರ ವಶಕ್ಕೆ ನೀಡುವಂತೆ ಕೋರಿದರು.

ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಆರೋಪಿ ಸತ್ಯನಾರಾಯಣ ವರ್ಮ ಅವರನ್ನು ಮಂಗಳವಾರ (ಜು. 23) ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದರು. ಇದೇ ವೇಳೆ ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ನಾಗೇಂದ್ರ ಪರ ಹೈಕೋರ್ಟ್‌ನ ಹಿರಿಯ ವಕೀಲ ಎಂ. ಎಸ್. ಶ್ಯಾಮ್‌ ಸುಂದರ್ ನ್ಯಾಯಾಲಯದಲ್ಲಿ ಹಾಜರಿದ್ದರು.

ಇದನ್ನೂ ಓದಿ : ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ ಎಂದಿದ್ದ ಆದೇಶ ಹಿಂಪಡೆದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...