Homeಕರ್ನಾಟಕಸೆ.‌17ರಿಂದ ಯತ್ನಾಳ್‌ ನೇತೃತ್ವದಲ್ಲಿ ಪಾದಯಾತ್ರೆ : ಪ್ರತಾಪ್ ಸಿಂಹ

ಸೆ.‌17ರಿಂದ ಯತ್ನಾಳ್‌ ನೇತೃತ್ವದಲ್ಲಿ ಪಾದಯಾತ್ರೆ : ಪ್ರತಾಪ್ ಸಿಂಹ

- Advertisement -
- Advertisement -

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣವನ್ನು ಖಂಡಿಸಿ ಸೆ.17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ಪಕ್ಷದ ನೇತಾರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಾವು ಬೆಳಗಾವಿಯಲ್ಲಿ ನಡೆಸಿರುವುದು ಬಿಜೆಪಿ ಅತೃಪ್ತರ ಅಥವಾ ಬಂಡಾಯಗಾರರ ಸಭೆಯಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೈಸೂರು ಚಲೋ ಪಾದಯಾತ್ರೆಯ ಅನುಭವವನ್ನು ನಾನು ಅಲ್ಲಿ ಹಂಚಿಕೊಂಡೆ. ವಾಲ್ಮೀಕಿ ನಿಗಮದ ಹಗರಣದ ವಿರುದ್ದ ಸರಿಯಾದ ಹೋರಾಟ ನಡೆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖುರ್ಚಿ ಅಲುಗಾಡುತ್ತದೆ. ಯತ್ನಾಳ್ ಅವರಂಥ ದೊಡ್ಡ ನಾಯಕ ಕರೆದ ಕಾರಣ ನಾನು ಸಭೆಗೆ ಹೋಗಿದ್ದೆ ಎಂದಿದ್ದಾರೆ.

“ನಮ್ಮ ಪಾದಯಾತ್ರೆಗೆ ಹೈಕಮಾಂಡ್ ಅನುಮತಿ ಕೊಡುತ್ತದೆ. ವರಿಷ್ಠರ ಅನುಮತಿಯೊಂದಿಗೇ ನಾವು ನಡೆಸುತ್ತೇವೆ. ಯಾರನ್ನೋ ಓಲೈಸಲು ಅಥವಾ ಮೆಚ್ಚಿಸಲು ರಾಜಕಾರಣ ಮಾಡುವುದಿಲ್ಲ. ಯಾರ ಮನೆಯ ಬಾಗಿಲನ್ನೂ ತಟ್ಟುವುದಿಲ್ಲ. ನನಗೆ ಟಿಕೆಟ್ ಕೊಟ್ಟಿದ್ದು ಬಿಜೆಪಿ ಅಲ್ಲ; ಆರ್‌ಎಸ್‌ಎಸ್‌ ನೀಡಿತ್ತು. ಕ್ಷೇತ್ರ, ಜಾತಿಯಿಂದಾಚೆ ಜನಪ್ರಿಯತೆಯುಳ್ಳ ಯತ್ನಾಳ್ ಅಂಥವರಲ್ಲಿ ನಾನೂ ಒಬ್ಬ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

“ಕೇಂದ್ರಕ್ಕೆ ಹೋಗಬೇಡಿ,‌ ರಾಜ್ಯದಲ್ಲೇ ಇರಿ ಎಂಬ ಸಂದೇಶ ವರಿಷ್ಠರಿಂದ ಸಿಕ್ಕಿದೆ. ಹೀಗಾಗಿ ಇಲ್ಲೇ ಇದ್ದೇನೆ. ನಾನು ಅನ್ಯಾಯದ ವಿರುದ್ಧ ಮಾತ್ರವೇ ರೆಬಲ್‌; ಪಕ್ಷದ ವಿರುದ್ಧವಲ್ಲ. ಬಿಜೆಪಿಯ ದೊಡ್ಡ ದೊಡ್ಡ ನಾಯಕರಿಗಿಂತಲೂ ನಾನು ಸೀನಿಯರ್. ಏಕೆಂದರೆ, ನನ್ನಪ್ಪ ಆರ್‌ಎಸ್ಎಸ್‌ನಲ್ಲಿದ್ದರು” ಎಂದಿದ್ದಾರೆ.

“ಬಿಎಸ್ ಯಡಿಯೂರಪ್ಪ ಅಂಥವರು ನೇಪಥ್ಯಕ್ಕೆ ಸರಿಯುತ್ತಿರುವ ಕಾರಣ ಪಕ್ಷಕ್ಕೆ ನನ್ನಂತಹ ಯಂಗ್ ಬ್ಲಡ್ ಬರಬೇಕಿದೆ. ಹೀಗಾಗಿ ನನ್ನನ್ನು ರಾಜ್ಯದಲ್ಲೇ ಉಳಿಸಿದ್ದಾರೆ. ನಾನು ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿ ಇರುವೆ. ನಮ್ಮ ಪಾದಯಾತ್ರೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಎಲ್ಲರನ್ನೂ ಆಹ್ವಾನಿಸುತ್ತಾರೆ ಎಂಬ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ದ ಇತ್ತೀಚೆಗೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿಗೆ  ಪಾದಯಾತ್ರೆ ನಡೆಸಿತ್ತು. ಈ ಬೆನ್ನಲ್ಲೇ ಬೆಳಗಾವಿಯಲ್ಲಿ ಯತ್ನಾಳ್, ಪ್ರತಾಪ್ ಸಿಂಹ, ರಮೇಶ್ ಜಾರಕಿಹೊಳಿ ಸೇರಿದಂತೆ ಕೆಲವರು ಪ್ರತ್ಯೇಕ ಸಭೆ ನಡೆಸಿದ್ದರು. ಇದು ಬಿಜೆಪಿಯೊಳಗಿನ ಅತೃಪ್ತರ ಸಭೆ ಎಂದು ಬಣ್ಣಿಸಲಾಗಿತ್ತು. ಇದೀಗ ಯತ್ನಾಳ್ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಂಡಿರುವುದು ಬಂಡಾಯದ ಅನುಮಾನಕ್ಕೆ ಪುಷ್ಠಿ ನೀಡುವಂತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಯಡಿಯೂರಪ್ಪ ಬಣದ ನಾಯಕರ ವಿರುದ್ದ ಯತ್ನಾಳ್ ಅಸಮಾಧಾನ ಹೊಂದಿರುವುದು, ಪ್ರತಾಪ್ ಸಿಂಹ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿರುವುದು ಇಲ್ಲಿ ಗಮನಾರ್ಹ ವಿಷಯ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

0
ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ. ಇಂದು ಅರ್ಜಿ ವಿಚಾರಣೆ ನಡೆಯಿತು. ವಾದ...