Homeಕರ್ನಾಟಕವಾಲ್ಮೀಕಿ ನಿಗಮದ ಅಕ್ರಮ : ಶಾಸಕ ನಾಗೇಂದ್ರ ಸೇರಿ 25 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ...

ವಾಲ್ಮೀಕಿ ನಿಗಮದ ಅಕ್ರಮ : ಶಾಸಕ ನಾಗೇಂದ್ರ ಸೇರಿ 25 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ

- Advertisement -
- Advertisement -

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂಪಾಯಿ ಹಣ ವರ್ಗಾಯಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಸೇರಿ 25 ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) 4,970 ಪುಟಗಳ ಆರೋಪ ಪಟ್ಟಿ ಹಾಗೂ 144 ಪುಟಗಳ ದೂರನ್ನು ಸೋಮವಾರ (ಸೆ.9) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಹಣ ಅಕ್ರಮ ವರ್ಗಾವಣೆ ಕಾಯ್ದೆಯ ಸೆಕ್ಷನ್‌ 3 ಮತ್ತು 4ರ ಅಡಿ ಜಾರಿ ನಿರ್ದೇಶನಾಲಯ ವಿಸ್ತೃತ ತನಿಖೆ ನಡೆಸಿ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರಿಗೆ ಆರೋಪ ಪಟ್ಟಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

ಪ್ರಕರಣದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕರಾಗಿರುವ ಬಿ ನಾಗೇಂದ್ರ ಅವರು ಮೊದಲನೇ ಆರೋಪಿಯಾಗಿದ್ದು, ಸತ್ಯನಾರಾಯಣ ವರ್ಮ (ಬ್ರೋಕರ್) ಎರಡನೇ ಆರೋಪಿ, ಮೂರನೇ ಆರೋಪಿಯಾಗಿ ಸತ್ಯನಾರಾಯಣ ವರ್ಮ ಏಕತಾರಿ (ಫಸ್ಟ್ ಬ್ಯಾಂಕ್ ಮಾಲೀಕ), ನಾಲ್ಕನೇ ಆರೋಪಿಯಾಗಿ ಜೆ ಜಿ ಪದ್ಮನಾಭ (ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ) ಅವರನ್ನು ಹೆಸರಿಸಲಾಗಿದೆ ಎಂದು ವರದಿಗಳು ಹೇಳಿವೆ.

ವಾಲ್ಮೀಕಿ ನಿಗಮದ ಖಾತೆಯಿಂದ ಒಟ್ಟಾರೆ 84 ಕೋಟಿ ರೂಪಾಯಿಯನ್ನು ಅಕ್ರಮವಾಗಿ ಬಳಕೆ ಮಾಡಲಾಗಿದೆ. ಮಾಜಿ ಸಚಿವ ಬಿ ನಾಗೇಂದ್ರ ಅವರು ನಕಲಿ ಖಾತೆ ಸೃಷ್ಟಿಸಲು ಸೂಚಿಸಿ, ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದಾರೆ. ನಾಗೇಂದ್ರ ಸೂಚನೆಯಂತೆ ಪದ್ಮನಾಭರಿಂದ ಹಣ ವರ್ಗಾವಣೆಯಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಒಳಸಂಚು ರೂಪಿಸಿದ್ದು, ನಂತರ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ವಸಂತ ನಗರದ ಶಾಂಗ್ರೀಲಾ ಹೋಟೆಲ್‌ನಲ್ಲಿ ನಾಗೇಂದ್ರ ಸಭೆ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮನಕ್ಕೆ ಪದ್ಮನಾಭ ಅವರನ್ನು ನಾಗೇಂದ್ರ ಆಪ್ತನಾದ ನೆಕ್ಕಂಟಿ ನಾಗರಾಜ್‌ ಮೂಲಕ ನೇಮಕ ಮಾಡಲಾಗಿತ್ತು ಎಂದು ಚಾರ್ಜ್ ಶೀಟ್‌ನಲ್ಲಿ ಆರೋಪಿಸಿರುವುದಾಗಿ ತಿಳಿದು ಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳಕೆ ಮಾಡಲಾಗಿದೆ. ನಾಗೇಂದ್ರ ಅವರ ಆಪ್ತ ಸಹಾಯಕನಾದ 8ನೇ ಆರೋಪಿ ವಿಜಯ್ ಕುಮಾರ್ ಮೊಬೈಲ್‌ನಲ್ಲಿ ಹಣದ ಮೊತ್ತ, ಯಾರಿಗೆಲ್ಲಾ ಪೂರೈಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಬಳ್ಳಾರಿ ಲೋಕಸಭಾ ಚುನಾವಣೆಗೆ 20.19 ಕೋಟಿ ರೂಪಾಯಿ ಬಳಕೆ ಮಾಡಲಾಗಿದೆ ಎಂದು ವಿವರಿಸಲಾಗಿದೆ. ಈ ಸಂಬಂಧ ಎಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಲಾಗಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಸದ್ಯ 15 ಸಾಕ್ಷಿಗಳ ಕಲೆ ಹಾಕಲಾಗಿದ್ದು, ನಾಗೇಂದ್ರ 5.26 ಕೋಟಿ ರೂಪಾಯಿ ಬಳಕೆ ಮಾಡಿದ್ದಾರೆ. ಆದರೆ, ಈ ಸಂಬಂಧ ಉತ್ತರಿಸಲು ನಾಗೇಂದ್ರ ನಿರಾಕರಿಸಿದ್ದಾರೆ. ಸಣ್ಣ ಕೆಲಸಗಳಿಗೆ ಹೆಚ್ಚಿನ ಮೊತ್ತದ ನಕಲಿ ಬಿಲ್‌ಗಳನ್ನು ಸೃಷ್ಟಿಸಲಾಗಿದೆ. ಹಗರಣದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯ ಸಂಶಯ ವ್ಯಕ್ತಪಡಿಸಿದೆ ಎಂದು ಆರೋಪಿಸಲಾಗಿದೆ.

ಕಳೆದ ಆಗಸ್ಟ್‌ 6ರಂದು ಕೆಎಂವಿಎಸ್‌ಟಿಡಿಸಿಎಲ್‌ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಏಳು ಸಂಪುಟಗಳಲ್ಲಿ 3,072 ಪುಟಗಳ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿತ್ತು.

ವಾಲ್ಮೀಕಿ ನಿಗಮದ ಅಕ್ರಮದ ಕುರಿತು ತನಿಖೆ ನಡೆಸಲು ಸರ್ಕಾರ ರಚಿಸಿದ್ದ ವಿಶೇಷ ತನಿಖಾ ದಳ(ಎಸ್‌ಐಟಿ) ನ್ಯಾಯಾಲಯಕ್ಕೆ ಪ್ರತ್ಯೇಕವಾಗಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ನಾಗೇಂದ್ರ ಅವರನ್ನು ಆರೋಪಿ ಎಂದು ಉಲ್ಲೇಖಿಸಿರಲಿಲ್ಲ. ಅಧಿಕಾರಿಗಳನ್ನಷ್ಟೇ ಹೊಣೆ ಮಾಡಿತ್ತು. ಆದರೆ, ಇಡಿ ಸಲ್ಲಿಸಿರುವ ಆರೋಪ ಪಟ್ಟಿ ವ್ಯತಿರಿಕ್ತವಾಗಿದೆ. ನಾಗೇಂದ್ರ ಅವರನ್ನೇ ಮೊದಲನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) 300 ಪುಟಗಳ ಆರೋಪ ಪಟ್ಟಿಯನ್ನು ಆಗಸ್ಟ್ 22ರಂದು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪ್ರಕರಣದಲ್ಲಿ ಕೆಎಂವಿಎಸ್‌ಟಿಡಿಸಿಎಲ್‌ ಹಿಂದಿನ ವ್ಯವಸ್ಥಾಪಕ ಜೆ.ಜಿ ಪದ್ಮನಾಭ ಮತ್ತು ಪರಶುರಾಮ ದುರ್ಗಣ್ಣನವರ್‌ ಅವರನ್ನು ಆರೋಪಿಗಳನ್ನಾಗಿಸಲಾಗಿದೆ. ಈ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿದೆ. ಚಂದ್ರಶೇಖರನ್‌ ಪತ್ನಿ ಕವಿತಾ ಅವರು ನೀಡಿದ ದೂರಿನನ್ವಯ ಶಿವಮೊಗ್ಗದ ವಿನೋಬನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 306 ಮತ್ತು 34ರ ಅಡಿ ಪ್ರಕರಣ ದಾಖಲಾಗಿತ್ತು.

ಈ ಆರೋಪ ಪಟ್ಟಿಯಲ್ಲೂ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಹಾಗೂ ಇನ್ನಿತರರ ಹೆಸರು ಇಲ್ಲ ಎಂದು ತಿಳಿದು ಬಂದಿದೆ.

ಚಂದ್ರಶೇಖರನ್‌ ಅವರ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ಬಳಿಕ, ರಾಜ್ಯ ಸರ್ಕಾರ ಮೇ 31,2023ರಂದು ಸಿಐಡಿಯ ಎಸ್‌ಐಟಿಗೆ ಪ್ರಕರಣದ ತನಿಖೆ ವರ್ಗಾಯಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಎಲ್ಲವನ್ನೂ ಎಸ್‌ಐಟಿ ತನಿಖೆ ನಡೆಸುತ್ತಿದೆ.

ಶಿವಮೊಗ್ಗದ ವಿನೋಬನಗರದ ತಮ್ಮ ಮನೆಯಲ್ಲಿ 2024ರ ಮೇ 26 ರಂದು ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಪ್ರಾಥಮಿಕ ಹಂತದ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ಮಾಡಬೇಕಾಗಿದ್ದು, ಸಂಪೂರ್ಣ ದೋಷರೋಪ ಪಟ್ಟಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ವಿವಿಧ ಹಗರಣಗಳ ತನಿಖೆ ಸಮನ್ವಯಕ್ಕೆ ಗೃಹ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...