Homeಮುಖಪುಟಧ್ವಂಸ ಕಾರ್ಯಾಚರಣೆ ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ

ಧ್ವಂಸ ಕಾರ್ಯಾಚರಣೆ ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ

ದಂಗೆಕೋರರನ್ನು ಸಾಮೂಹಿಕ ಶಿಕ್ಷೆಗೊಳಪಡಿಸುವ ಧ್ವಂಸ ಕಾರ್ಯಾಚರಣೆ ಸಂವಿಧಾನಬದ್ಧವಲ್ಲ

- Advertisement -
- Advertisement -

ಮೂಲ: ಪ್ರಭಾಶ್‌ ರಂಜನ್‌ ಮತ್ತು ಅಮನ್‌ ಕುಮಾರ್‌
ದ ಹಿಂದೂ | 20. 04. 2022
ಅನುವಾದ: ನಾ ದಿವಾಕರ

ಈ ವರ್ಷದ ರಾಮನವಮಿ ಆಚರಣೆಯ ಮೆರವಣಿಗೆಗಳ ಸಂದರ್ಭದಲ್ಲಿ ಮಧ್ಯಪ್ರದೇಶದ ಕರ್ಗೋನ್‌ ಸೇರಿದಂತೆ ದೇಶದ ಹಲವೆಡೆ ಕೋಮು ಸಂಘರ್ಷ ಏರ್ಪಟ್ಟಿತ್ತು. ಮಧ್ಯಪ್ರದೇಶ ಸರ್ಕಾರವು ಈ ಗಲಭೆಗಳಲ್ಲಿ ಪಾಲ್ಗೊಂಡಿದ್ದವರ ಮನೆಗಳನ್ನು ಧ್ವಂಸ ಮಾಡುವಂತೆ ಅಧಿಕೃತವಾಗಿ ಆದೇಶ ಹೊರಡಿಸಿತ್ತು. ಈ ಕಟ್ಟಡ ಧ್ವಂಸ ಕಾರ್ಯಾಚರಣೆಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳ ವಿರುದ್ಧ ನಡೆಸಲಾಯಿತು ಎಂದು ಮಧ್ಯಪ್ರದೇಶ ಸರ್ಕಾರ ಹೇಳಿದೆ.

ಆದರೆ ಈ ಧ್ವಂಸ ಕಾರ್ಯಾಚರಣೆಯನ್ನು ಕೋಮು ದಂಗೆಗಳ ತರುವಾಯ ಒಂದು ನಿರ್ದಿಷ್ಟ ಕೋಮಿಗೆ ಸೇರಿದ ದಂಗೆಕೋರರ ವಿರುದ್ಧ, ಸ್ವೇಚ್ಚಾನುಸಾರ ಕೈಗೊಳ್ಳಲಾಗಿರುವುದನ್ನು ಗಮನಿಸಿದರೆ, ಈ ಕಾರ್ಯಾಚರಣೆಯ ಉದ್ದೇಶ ಸಾಮೂಹಿಕ ಶಿಕ್ಷೆಗೊಳಪಡಿಸುವುದೇ ಆಗಿದೆ ಎನ್ನುವುದು ಸ್ಪಷ್ಟ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಭುತ್ವದ ಕ್ರೂರ ಬಲದ ಸಂಕೇತವೇ ಆಗಿರುವ ಈ ಧ್ವಂಸ ಮಾಡುವ ಯಂತ್ರಗಳು ಕೇವಲ ಮನೆಗಳನ್ನು, ಕಟ್ಟಡಗಳನ್ನು ಮಾತ್ರವೇ ಧ್ವಂಸ ಮಾಡುತ್ತಿಲ್ಲ, ಬದಲಾಗಿ ಸಾಂವಿಧಾನಿಕ ನಿಯಮಗಳನ್ನೂ, ಕಾನೂನು ಕಟ್ಟಳೆಗಳನ್ನೂ ಧ್ವಂಸ ಮಾಡುತ್ತಿವೆ. ಕ್ಷಿಪ್ರಗತಿಯಲ್ಲಿ ನ್ಯಾಯ ವಿತರಣೆ ಮಾಡುವ ಈ ಕ್ರೂರ ಪದ್ಧತಿ ಆರಂಭವಾದದ್ದು ಉತ್ತರಪ್ರದೇಶದಲ್ಲಿ.

ಇದನ್ನೂ ಓದಿ: ಶಿವಮೊಗ್ಗ ಗಲಭೆ: ತಮ್ಮದ್ದಲ್ಲದ ತಪ್ಪಿಗೆ ಬಲಿಪಶುವಾದ ಮುಸ್ಲಿಮರ ನೋವಿನ ಕಥೆಯಿದು…

2019ರ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರವು ಯಾವುದೇ ಸಮೂಹ ಗಲಭೆಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾದರೆ ಅದರ ನಷ್ಟವನ್ನು ದಂಗೆಕೋರರಿಂದಲೇ ವಸೂಲಿ ಮಾಡುವ ಆದೇಶವೊಂದನ್ನು ಹೊರಡಿಸಿತ್ತು. ಈ ನಿಯಮವನ್ನು ಸಾಂಸ್ಥೀಕರಿಸುವ ಸಲುವಾಗಿಯೇ ಉತ್ತರಪ್ರದೇಶ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ವಸೂಲಾತಿ ಕಾಯ್ದೆ 2020ನ್ನು ಜಾರಿಗೊಳಿಸಲಾಯಿತು.

ಈ ರೀತಿಯ ಪ್ರಭುತ್ವದ ಕ್ರೂರ ಬಲ ಪ್ರಯೋಗವು ಅನೇಕ ಸ್ಥಳೀಯ ಕಾನೂನುಗಳ ಉಲ್ಲಂಘನೆಯಾಗುತ್ತದೆ ಎಂದು ಈಗಾಗಲೇ ಹಲವು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಸೂಕ್ತ ಕಾನೂನು ಪ್ರಕ್ರಿಯೆಯನ್ನು ಅನುಸರಿಸದೆ, ಕಾನೂನು ಸಮ್ಮತಿ ಪಡೆಯದೆ, ಈ ರೀತಿ ಮನೆಗಳನ್ನು ಧ್ವಂಸ ಮಾಡುವುದು ಭಾರತವು ಒಪ್ಪಿರುವಂತಹ ಹಲವು ಅಂತರರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾಗುತ್ತದೆ ಎನ್ನುವುದನ್ನು ಗಮನಿಸಬೇಕಿದೆ.

ಸಮರ್ಪಕ ವಸತಿಯ ಹಕ್ಕು

ವಸತಿ ಅಥವಾ ಸೂರಿನ ಹಕ್ಕು ಭಾರತೀಯ ಸಂವಿಧಾನದ ಅನುಚ್ಚೇದ 21ರ ಅನ್ವಯ ಮೂಲಭೂತ ಹಕ್ಕು ಎಂದೇ ಪರಿಗಣಿಸಲ್ಪಟ್ಟಿದ್ದು, ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು ಚೌಕಟ್ಟಿನಲ್ಲೂ ಸಹ ಇದನ್ನು ಮೂಲಭೂತ ಹಕ್ಕು ಎಂದೇ ಪರಿಗಣಿಸಲಾಗುತ್ತದೆ. ಈ ಅಂತರರಾಷ್ಟ್ರೀಯ ಕಾನೂನು ನಿಯಮಗಳಿಗೆ ಭಾರತವೂ ಒಳಪಟ್ಟಿರುತ್ತದೆ. ಉದಾಹರಣೆಗೆ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆ (ಯುಡಿಹೆಚ್‌ಆರ್)‌ಯ ಅನುಚ್ಚೇದ 25ರ ಅನ್ವಯ “ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಕುಟುಂಬದೊಡನೆ, ಸಮರ್ಪಕ ಆಹಾರ, ವಸ್ತ್ರ ವಸತಿ ಮತ್ತು ಆರೋಗ್ಯ ಸೇವೆಯನ್ನೊಳಗೊಂಡಂತೆ ಆರೋಗ್ಯಕರವಾದ, ಯೋಗಕ್ಷೇಮದ ಜೀವನಮಟ್ಟವನ್ನು ಕಾಪಾಡಿಕೊಳ್ಳುವ ಹಕ್ಕು ಇರುತ್ತದೆ”

ಇದೇ ರೀತಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಅಂತರರಾಷ್ಟ್ರೀಯ ಒಡಂಬಡಿಕೆ (ಐಸಿಇಎಸ್‌ಸಿಆರ್)‌ ಅನುಚ್ಚೇದ 11.1ರಲ್ಲಿ “ಪ್ರತಿಯೊಬ್ಬ ವ್ಯಕ್ತಿಯೂ ತನಗಾಗಿ ಮತ್ತು ತನ್ನ ಕುಟುಂಬದವರಿಗಾಗಿ ಸಮರ್ಪಕವಾದ ಆಹಾರ, ಆರೋಗ್ಯ, ವಸ್ತ್ರ ಮತ್ತು ವಸತಿ ಸೌಲಭ್ಯಗಳನ್ನು ಹೊಂದಿರುವ ಜೀವನಮಟ್ಟವನ್ನು ಕಾಪಾಡಿಕೊಳ್ಳುವ ಹಕ್ಕು ಇರುವುದೇ ಅಲ್ಲದೆ, ತನ್ನ ಜೀವನಮಟ್ಟವನ್ನು ನಿರಂತರವಾಗಿ ಉತ್ತಮಪಡಿಸಿಕೊಳ್ಳುವ ಹಕ್ಕು ಸಹ ಇರುತ್ತದೆ” ಎಂದು ಹೇಳಲಾಗಿದೆ. ಇದೇ ಅನುಚ್ಚೇದದ ಅಡಿಯಲ್ಲಿ ಪ್ರತಿಯೊಂದು ದೇಶವೂ “ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ” ಎಂದೂ ಹೇಳಲಾಗಿದ್ದು, ಸಮರ್ಪಕ ವಸತಿ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವ್ಯಕ್ತಿಗಳ ಹಕ್ಕುಗಳನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ: ಹಿಂಸಾಚಾರ ನಿರ್ದಿಷ್ಟ ಸಮುದಾಯಗಳನ್ನು ಮಾತ್ರ ಗುರಿಮಾಡುವುದಿಲ್ಲ, ಸಮಾಜವನ್ನು ಇಡಿಯಾಗಿ ವ್ಯಾಪಿಸುತ್ತದೆ; ಪ್ರತಾಪ್‌ ಭಾನು ಮೆಹತಾ ಸಂದರ್ಶನದ ಅನುವಾದ 

ಅನುಚ್ಚೇದ 4ರ ಅನ್ವಯ, ಐಸಿಇಎಸ್‌ಸಿಆರ್‌ ಒಡಂಬಡಿಕೆಯಲ್ಲಿ ಮಾನ್ಯ ಮಾಡಲಾಗಿರುವ ಹಕ್ಕುಗಳನ್ನು ಯಾವುದೇ ದೇಶದ ಸರ್ಕಾರಗಳು ಅಮಾನ್ಯ ಮಾಡಬೇಕಾದಲ್ಲಿ, ಸರ್ಕಾರಗಳು ವಿಧಿಸುವ ನಿರ್ಬಂಧಗಳು ಈ ಹಕ್ಕುಗಳ ಮೂಲ ಲಕ್ಷಣಗಳಿಗೆ ಪೂರಕವಾಗಿರಬೇಕಾಗುತ್ತದೆ ಮತ್ತು ಸಮಾಜದ ಸಮಗ್ರ ಒಳಿತಿನ ಉದ್ದೇಶವನ್ನು ಹೊಂದಿರಬೇಕಾಗುತ್ತದೆ. ಆದಾಗ್ಯೂ ಈ ಒಡಂಬಡಿಕೆಯಲ್ಲಿ ಸ್ವೀಕೃತವಾಗಿರುವ ಯಾವುದೇ ಹಕ್ಕುಗಳಿಗೆ ನಿರ್ಬಂಧ ಹೇರುವುದು, ಅದರಲ್ಲೂ ವಸತಿ ಹಕ್ಕಿನ ಮೇಲೆ ನಿರ್ಬಂಧ ಹೇರುವುದು, ಮೂಲತಃ ಈ ಹಕ್ಕುಗಳ ಉಲ್ಲಂಘನೆಯೇ ಆಗುತ್ತದೆ.  ಈ ಅಂಶವನ್ನು ಒಡಂಬಡಿಕೆಯ ಅನುಚ್ಚೇದ 5ರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಅಷ್ಟೇ ಅಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಆಸ್ತಿಯ ಹಕ್ಕುಗಳಲ್ಲಿ ಸ್ವೇಚ್ಚಾನುಸಾರದಿಂದ ಹಸ್ತಕ್ಷೇಪ ಮಾಡುವುದು ಅಂತರರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾಗುತ್ತದೆ. ಉದಾಹರಣೆಗೆ ಯುಡಿಹೆಚ್‌ಆರ್‌ ಒಡಂಬಡಿಕೆಯ ಅನುಚ್ಚೇದ 12ರಲ್ಲಿ “ಯಾವುದೇ ವ್ಯಕ್ತಿಯ  ವ್ಯಕ್ತಿಗತ ಅಥವಾ ಕೌಟುಂಬಿಕ ಖಾಸಗಿತನ, ವಸತಿ ಅಥವಾ ಸಂವಹನ ಪ್ರಕ್ರಿಯೆಯಲ್ಲಿ ಸ್ವೇಚ್ಚಾನುಸಾರದ ಹಸ್ತಕ್ಷೇಪ ಮಾಡುವಂತಿಲ್ಲ. ಅಥವಾ ಆತನ/ಆಕೆಯ ಗೌರವ ಮತ್ತು ಘನತೆಯ ಮೇಲಿನ ದಾಳಿ ಮಾಡುವಂತಿಲ್ಲ” ಎಂದು ಹೇಳಲಾಗಿದೆ.

“ಇಂತಹ  ಯಾವುದೇ ಹಸ್ತಕ್ಷೇಪದ ವಿರುದ್ಧ ಅಥವಾ ಆಕ್ರಮಣದ ವಿರುದ್ಧ ಕಾನೂನು ರಕ್ಷಣೆ ಪಡೆಯುವ ಹಕ್ಕು ಪ್ರತಿಯೊಬ್ಬ ವ್ಯಕ್ತಿಗೂ ಇರುತ್ತದೆ” ಎಂದು ಅನುಚ್ಚೇದ 12ರಲ್ಲಿ ಹೇಳಲಾಗಿದೆ. ಇದೇ ಹಕ್ಕುಗಳನ್ನು ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಅಂತರರಾಷ್ಟ್ರೀಯ ಒಡಂಬಡಿಕೆ (ಐಸಿಸಿಪಿಆರ್)‌ಯ ಅನುಚ್ಚೇದ 17ರಲ್ಲಿ ಮಾನ್ಯ ಮಾಡಲಾಗಿದ್ದು , ಈ ಅನುಚ್ಚೇದದ ಅನ್ವಯ ಪ್ರತಿಯೊಬ್ಬ ವ್ಯಕ್ತಿಯೂ ವೈಯಕ್ತಿಕವಾಗಿ ಅಥವಾ ಇತರರ ಜೊತೆಗೂಡಿ ತನ್ನದೇ ಆದ ಆಸ್ತಿಯನ್ನು ಹೊಂದುವ ಹಕ್ಕು ಹೊಂದಿರುತ್ತಾನೆ ಹಾಗೂ ಯಾವುದೇ ವ್ಯಕ್ತಿಯ ಆಸ್ತಿಯ ಹಕ್ಕನ್ನು ಸ್ವೇಚ್ಚಾನುಸಾರದಿಂದ ಕಸಿದುಕೊಳ್ಳಲಾಗುವುದಿಲ್ಲ. ಈ ದೃಷ್ಟಿಯಿಂದ ನೋಡಿದಾಗ ವ್ಯಕ್ತಿಗಳ ಆಸ್ತಿಯ ಹಕ್ಕುಗಳಲ್ಲಿ ಸ್ವೇಚ್ಚಾನುಸಾರ ಹಸ್ತಕ್ಷೇಪ ಮಾಡುವುದು ಐಸಿಸಿಪಿಆರ್‌ ಒಡಂಬಡಿಕೆಯ ಉಲ್ಲಂಘನೆಯೇ ಆಗುತ್ತದೆ.

ಬಲಾತ್ಕಾರದ ಎತ್ತಂಗಡಿಗಳು

ಸಂಯುಕ್ತ ರಾಷ್ಟ್ರಗಳ ಮಾನವ ಹಕ್ಕುಗಳ ಕಚೇರಿ ಎಂದೇ ಪರಿಗಣಿಸಲ್ಪಡುವ ಮಾನವ ಹಕ್ಕುಗಳ ಉನ್ನತ ಆಯುಕ್ತರ ಕಚೇರಿ (ಓಹೆಚ್‌ಸಿಹೆಚ್‌ಆರ್)‌ ಅಂತರರಾಷ್ಟ್ರೀಯ ಕಾನೂನುಗಳ ಅನ್ವಯ ಒದಗಿಸಲಾಗುವ ಮಾನವ ಹಕ್ಕುಗಳನ್ನು ರಕ್ಷಿಸಲೆಂದೇ ಸ್ಥಾಪಿಸಲಾಗಿರುವ ಒಂದು ಸಂಸ್ಥೆ. ಈ ಸಂಸ್ಥೆಯು ಸಮರ್ಪಕ ವಸತಿ ಸೌಕರ್ಯದ ಬಗ್ಗೆ ಸೂಕ್ತವಾದ ನಿಯಮಗಳನ್ನು ಸಹ ರೂಪಿಸಿದೆ. ಸಂಯುಕ್ತ ರಾಷ್ಟ್ರಗಳ ಮಾನವ ಹಕ್ಕುಗಳ ಕಚೇರಿಯ ನಿಯಮಗಳ ಅನ್ವಯ, ಯಾವುದೇ ವ್ಯಕ್ತಿಯ ಸಮರ್ಪಕ ವಸತಿಯ ಹಕ್ಕು ರಕ್ಷಣೆ ಎಂದರೆ ಬಲಾತ್ಕಾರದ ಎತ್ತಂಗಡಿ ಅಥವಾ ಉಚ್ಚಾಟನೆಯಿಂದ ರಕ್ಷಣೆ ಪಡೆಯುವುದೇ ಆಗಿರುತ್ತದೆ.

ಇದನ್ನೂ ಓದಿ: ಮುಸ್ಲಾಪುರ ಮದ್ಯದಂಗಡಿ ಪ್ರಕರಣ; ಬಂಧನ ಭೀತಿಯಲ್ಲಿ ಊರು ತೊರೆದ ಗ್ರಾಮಸ್ಥರು!

ಐಸಿಇಎಸ್‌ಸಿಆರ್‌ ಒಡಂಬಡಿಕೆಯ ಅನುಚ್ಚೇದ 11.1ರಲ್ಲಿ “ಬಲಾತ್ಕಾರದ ಎತ್ತಂಗಡಿ ಅಥವಾ ಉಚ್ಚಾಟನೆ ಎನ್ನುವುದು, ವ್ಯಕ್ತಿ, ಕುಟುಂಬ ಅಥವಾ ಸಮುದಾಯಗಳನ್ನು ಅವರು ನೆಲೆಸಿರುವ ಮನೆಗಳಿಂದ ಅಥವಾ ಭೂಮಿಯಿಂದ, ಯಾವುದೇ ಕಾನೂನು ರಕ್ಷಣೆ ಅಥವಾ ನೆರವು ಇಲ್ಲದೆಯೇ, ಶಾಶ್ವತವಾಗಿ ಬೇರ್ಪಡಿಸುವುದೇ ಆಗಿರುತ್ತದೆ”. ಸಮರ್ಪಕ ವಸತಿಯ ಹಕ್ಕು ಎಂದರೆ ಯಾವುದೇ ವ್ಯಕ್ತಿಯ ವಸತಿ, ಖಾಸಗಿತನ, ಕುಟುಂಬದ ಹಕ್ಕುಗಳು ಸ್ವೇಚ್ಚಾನುಸಾರದ ಹಸ್ತಕ್ಷೇಪದಿಂದ ಮುಕ್ತವಾಗಿರುವುದು ಎಂದೇ ಪರಿಗಣಿಸಬೇಕಾಗುತ್ತದೆ.

ಮಧ್ಯಪ್ರದೇಶ ಸರ್ಕಾರವು ಆರೋಪಿತ ದಂಗೆಕೋರರ ಮನೆಗಳ ಮೇಲೆ ಧ್ವಂಸ ಕಾರ್ಯಾಚರಣೆ ನಡೆಸಿರುವುದು ಬಲಾತ್ಕಾರದ ಎತ್ತಂಗಡಿಯೇ ಆಗುತ್ತದೆ. ಹಾಗೆಯೇ ವ್ಯಕ್ತಿಯ ವಸತಿ ಹಕ್ಕುಗಳಲ್ಲಿ ಸ್ವೇಚ್ಚಾನುಸಾರದ ಹಸ್ತಕ್ಷೇಪ ಮಾಡಿದಂತಾಗುವುದರಿಂದ ಇದು ಐಸಿಇಎಸ್‌ಸಿಆರ್‌ ಒಡಂಬಡಿಕೆಯ ಅನುಚ್ಚೇದ 11.1ರ ಉಲ್ಲಂಘನೆಯೇ ಆಗುತ್ತದೆ. ಈ ಎತ್ತಂಗಡಿಯ ಕಾರ್ಯಾಚರಣೆ ಕಾನೂನು ಪ್ರಕಾರ ಕೈಗೊಳ್ಳಲಾಗಿದೆ ಮತ್ತು ಮಾನವ ಹಕ್ಕು ಒಡಂಬಡಿಕೆಗಳ ಅನ್ವಯ ಕೈಗೊಳ್ಳಲಾಗಿದೆ ಎಂದು ನಿರೂಪಿಸಿದಲ್ಲಿ ಮಾತ್ರ ಈ ಧ್ವಂಸ ಕಾರ್ಯಾಚರಣೆಯನ್ನು ಅಂತರರಾಷ್ಟ್ರೀಯ ಕಾನೂನುಗಳಡಿ ಸಮರ್ಥಿಸಿಕೊಳ್ಳಲು ಸಾಧ್ಯ. ಹಾಗೆಯೇ ರಾಜ್ಯ ಸರ್ಕಾರಗಳ ಈ ಕಾರ್ಯಾಚರಣೆ  ಅವಶ್ಯಕವಾಗಿತ್ತೇ ಮತ್ತು ಪರಿಸ್ಥಿತಿಗೆ ಪೂರಕವಾಗಿತ್ತೇ ಎನ್ನುವುದೂ ಮುಖ್ಯವಾಗುತ್ತದೆ.

ಆದರೆ ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿರುವ ಸಮಯವನ್ನು ಗಮನಿಸಿದರೆ  ಈ ಬಲಾತ್ಕಾರದ ಎತ್ತಂಗಡಿಯನ್ನು ಕಾನೂನಾತ್ಮಕವಾಗಿ ಸಮರ್ಥಿಸಿಕೊಳ್ಳಲಾಗುವುದಿಲ್ಲ. ಒಂದು ವೇಳೆ ಈ ಧ್ವಂಸ ಕಾರ್ಯಾಚರಣೆಗೆ ಅಕ್ರಮ ಒತ್ತುವರಿಯೇ ಕಾರಣ ಎಂದಾದಲ್ಲಿ, ಕೋಮು ದಂಗೆಗಳು ಸಂಭವಿಸಿದ ದಿನದಂದು ಅಧಿಕಾರಿಗಳು ಮುನ್ಸೂಚನೆ ಅಥವಾ ನೋಟಿಸ್‌ ನೀಡಿದ್ದರೇ ಎಂದು ಗಮನಿಸಬೇಕಾಗುತ್ತದೆ. ಅಥವಾ ಮುಂಚಿತವಾಗಿಯೇ ಎತ್ತಂಗಡಿಯ ಆದೇಶವನ್ನು ಹೊಂದಿದ್ದರೇ ಎಂದು ಪ್ರಶ್ನಿಸಬೇಕಾಗುತ್ತದೆ. ಅಥವಾ ದಂಗೆಗಳ ನಂತರವೇ ಈ ನಿರ್ಧಾರವನ್ನು ಕೈಗೊಳ್ಳಲಾಯಿತೇ ? ಈ ಎತ್ತಂಗಡಿಯ ಆದೇಶ ಕೇವಲ ಮುಸ್ಲಿಂ ಸಮುದಾಯಕ್ಕೆ ಮಾತ್ರವೇ ಸೀಮಿತವಾಗಿದೆಯೇ ? ಈ ಪ್ರಶ್ನೆಗಳೂ ಉದ್ಭವಿಸುತ್ತವೆ.

ನ್ಯಾಯಾಂಗದ ನಿಯಮಗಳು

ಮೇಲಾಗಿ, ಮೇಲೆ ಉಲ್ಲೇಖಿಸಲಾದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು, ಒಡಂಬಡಿಕೆಗಳನ್ನು ಭಾರತದ ಸರ್ವೋಚ್ಚ ನ್ಯಾಯಾಲಯವು ಭಾರತೀಯ ನ್ಯಾಯ ವ್ಯವಸ್ಥೆಯಲ್ಲೂ ಅಳವಡಿಸಿದೆ. ಬಚ್ಚನ್‌ ಸಿಂಗ್‌ ಮತ್ತು ಪಂಜಾಬ್‌ ರಾಜ್ಯದ ಪ್ರಕರಣ, ವಿಶಾಖ ಮತ್ತು ರಾಜಸ್ತಾನ ಸರ್ಕಾರದ ಪ್ರಕರಣ ಮತ್ತು ಇತ್ತೀಚಿನ ಪುಟ್ಟಸ್ವಾಮಿ ಮತ್ತು ಒಕ್ಕೂಟ ಸರ್ಕಾರ ಪ್ರಕರಣಗಳ ಸಂದರ್ಭದಲ್ಲಿ ಸುಪ್ರೀಂಕೋರ್ಟ್‌ “ಭಾರತದ ಸಂವಿಧಾನದಲ್ಲಿ ನೀಡಲಾಗಿರುವ ಮೂಲಭೂತ ಹಕ್ಕುಗಳನ್ನು ವ್ಯಾಖ್ಯಾನ ಮಾಡುವ ಸಂದರ್ಭದಲ್ಲಿ ಈ ಹಕ್ಕುಗಳನ್ನು ಅಂತರರಾಷ್ಟ್ರೀಯ ಮಾನವ ಹಕ್ಕು ಕಾನೂನುಗಳ ವ್ಯಾಪ್ತಿಯೊಳಗೆ ಅಳವಡಿಸಿ ವ್ಯಾಖ್ಯಾನಕ್ಕೊಳಪಡಿಸಬೇಕು” ಎಂದು ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಭಾರತದ ಸಾಂವಿಧಾನಿಕ ವ್ಯವಸ್ಥೆಯನ್ನು ಸಂರಕ್ಷಿಸುವ ಗುರುತರ ಜವಾಬ್ದಾರಿ ಹೊಂದಿರುವ ನ್ಯಾಯಾಂಗವು ಕಾರ್ಯಾಂಗ ಕೈಗೊಳ್ಳುತ್ತಿರುವ ಈ ಅನಿರ್ಬಂಧಿತ ಕಾರ್ಯಾಚರಣೆಯ ಮೇಲೆ ನಿರ್ಬಂಧಗಳನ್ನು ಹೇರಲು ಮುಂದಾಗಬೇಕಿದೆ. ರಾಷ್ಟ್ರೀಯವಾದಿ-ಜನಪ್ರಿಯ ರಾಜಕಾರಣದ ಸಂಕಥನಕ್ಕೆ ಪ್ರತಿಯಾಗಿ ನ್ಯಾಯಾಲಯಗಳು ಅಂತರರಾಷ್ಟ್ರೀಯ ಕಾನೂನುಗಳನ್ನು ಬಳಸಲು ಮುಂದಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ಕಟ್ಟಡ ತೆರುವು ಮಾಡುವುದಕ್ಕೆ ಮುನ್ನ ಆ ಕಟ್ಟಡವನ್ನು ಮಂದಿಯ ಒಳಿತಿಗೆ ಬಳಸಿಕೊಳ್ಳುವುದಕ್ಕೆ ಒತ್ತು ಕೊಡಬೇಕು. ದಾರಿಗೆ ಅಡ್ಡ ಇದ್ದರೆ, ಬಂಡಿಗಳ ಸಾಗಾಟಕ್ಕೆ ತೊಂದರೆ ಒಡ್ಡುತ್ತಿದ್ದರೆ ತೆರವು ಮಾಡಬಹುದು.
    ಮನೆಯ ಒಬ್ಬ ಕೆಡುಕು ಮಾಡಿದರೆ ಅದನ್ನು ಕೋರ‌್ಟ್ ಏರ್ಪಾಟಿಗೆ ವಹಿಸಿ ಅದು ಹೇಳಿದಂತೆ ಪನಿಶ್ ಮಾಡವುದು ಮಂದಿಯಾಳ್ವಕೆಯ ನಡೆ.ಅದು ಬಿಟ್ಟು ಮನೆಯ ಉಳಿದ ಮಂದಿಯನ್ನು ತೊಂದರೆಗೆ ಸಿಲುಕಿಸುವುದು ಸರಿಯಲ್ಲ.
    ಕಟ್ಟಡ ಕಟ್ಡಲು ಬೇಕಾದ ಸರಕುಗಳನ್ನು ಹಾಳುಮಾಡುವುದು ದೊಡ್ಡ ತಪ್ಪು.
    ಆಳುಗಳ ದುಡಿಮೆ,ನ್ಯಾಚುರಲ್ ರಿಸೋರ‌್ಸ್ ಗಳ ಬಗೆಗೆ ತಿಳಿವಳಿಕೆ ಬೆಳೆಸಿಕೊಳ್ಳಬೇಕಾದ ಹೊತ್ತಿದು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...