Homeಮುಖಪುಟವಂದೇ ಮಾತರಂ ವಿವಾದ: ಕಾಂಗ್ರೆಸ್ ಪಕ್ಷವನ್ನು 'ನ್ಯೂ ​​ಮುಸ್ಲಿಂ ಲೀಗ್' ಎಂದು ಕರೆದ ಬಿಜೆಪಿ ಅಧ್ಯಕ್ಷ...

ವಂದೇ ಮಾತರಂ ವಿವಾದ: ಕಾಂಗ್ರೆಸ್ ಪಕ್ಷವನ್ನು ‘ನ್ಯೂ ​​ಮುಸ್ಲಿಂ ಲೀಗ್’ ಎಂದು ಕರೆದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್

- Advertisement -
- Advertisement -

ತಮ್ಮ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಧರಿಸಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, “ಮತಗಳಿಗಾಗಿ ವಿರೋಧ ಪಕ್ಷವು ಹೊಸ ಮುಸ್ಲಿಂ ಲೀಗ್ ಆಗಿದೆ” ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ನವೀನ್, “ಭಾರತ ಮಾತೆಯ ಪವಿತ್ರ ಆಹ್ವಾನಕ್ಕೆ ಮಾಡಿದ ಈ ಅವಮಾನವು, ಈ ಗೀತೆಯನ್ನೇ ತಮ್ಮ ಪ್ರಜ್ಞೆಯಲ್ಲಿಟ್ಟುಕೊಂಡು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಾವಿರಾರು ಹುತಾತ್ಮರಿಗೆ ಎಸಗಿದ ಅಪಮಾನವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್‌ ಪಕ್ಷದ 1937ರ ನಿರ್ಣಯಕ್ಕೆ ಬದ್ಧವಾಗಿರಲು ಬುಧವಾರ (ಆಗಸ್ಟ್ 19) ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ನಿರ್ಧರಿಸಿದ ನಂತರ ಬಿಜೆಪಿ ಅಧ್ಯಕ್ಷರ ಈ ಪ್ರತಿಕ್ರಿಯೆ ಬಂದಿದೆ. “ಇನ್ಮುಂದೆ ಎಲ್ಲಾ ಪಕ್ಷದ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು” ಎಂದು ಕಾಂಗ್ರೆಸ್ ಹೇಳಿತ್ತು.

“ಕಾಂಗ್ರೆಸ್ ಈಗ (ವಂದೇ ಮಾತರಂಗೆ ಮಾಡಿದ) ತನ್ನ ಅವಮಾನವನ್ನು ನಿರ್ಣಯದ ರೂಪದಲ್ಲಿ ಅಧಿಕೃತಗೊಳಿಸಿದೆ. ಕಾಂಗ್ರೆಸ್ ವೇದಿಕೆಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಅದರ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ. ಕಾಂಗ್ರೆಸ್ ಇಂದು ಹೊಸ ಮುಸ್ಲಿಂ ಲೀಗ್ ಆಗಿದೆ” ಎಂದು ಅವರು ಆರೋಪಿಸಿದ್ದಾರೆ.

“‘ಭಾರತ ಮಾತೆ’ಯ ಪವಿತ್ರ ಗೀತೆಗೆ ಮಾಡಿದ ಈ ಅವಮಾನವು, ಈ ಗೀತೆಯನ್ನೇ ತಮ್ಮ ಪ್ರಜ್ಞೆಯಲ್ಲಿಟ್ಟುಕೊಂಡು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಾವಿರಾರು ಹುತಾತ್ಮರಿಗೆ ಎಸಗಿದ ಅಪಮಾನವಾಗಿದೆ” ಎಂದು ಅವರು ಪುನರುಚ್ಚರಿಸಿದ್ದಾರೆ.

ಆಗಸ್ಟ್ 15 ರಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಂದೇ ಮಾತರಂನ ಪೂರ್ಣ ಆವೃತ್ತಿಯನ್ನು ಹಾಡುವ ಕುರಿತು ಉಂಟಾದ ವಿವಾದವನ್ನು ಪರೋಕ್ಷವಾಗಿ ಉಲ್ಲೇಖಿಸಿದ ನವೀನ್, ರಾಷ್ಟ್ರೀಯ ಗೀತೆಗೆ ಆದ ಇದೇ ರೀತಿಯ ಅವಮಾನವು ಕೆಲವು ದಿನಗಳ ಹಿಂದೆ “ವ್ಯಕ್ತಿಯೊಬ್ಬರ ನಡವಳಿಕೆಯಲ್ಲಿ” ವ್ಯಕ್ತವಾಗಿತ್ತು, ಆದರೂ ಕಾಂಗ್ರೆಸ್ ಅದನ್ನು ಕಾಕತಾಳೀಯ ಎಂದು ತಳ್ಳಿಹಾಕಿತ್ತು ಎಂದಿದ್ದಾರೆ.

“ಇಂದು ಅದೇ ಅವಮಾನವು ಕಾಂಗ್ರೆಸ್‌ನ ನೀತಿಯಾಗಿದೆ, ಇದು ಕೇವಲ ರಾಜಕೀಯ ಸಮರ್ಥನೆಯಲ್ಲ, ಬದಲಿಗೆ ಆ ಮತಬ್ಯಾಂಕ್‌ನ ಹಸಿವಿನ ಸಾಕ್ಷಿಯಾಗಿದೆ. ಇದರ ಬಲಿಪೀಠದಲ್ಲಿ ಕಾಂಗ್ರೆಸ್ ದೇಶದ ಸ್ವಾಭಿಮಾನವನ್ನು ಪದೇ ಪದೇ ಅಡವಿಟ್ಟಿದೆ” ಎಂದು ಕಿಡಿಕಾರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...

‘ನಾವು Gen Z’ ಎಂಬುದು ‘ನನ್ನಪ್ಪ ಯಾರು ಗೊತ್ತಾ?’ ಎಂಬಂತಾಗಬಾರದು: ಒಮರ್ ಅಬ್ದುಲ್ಲಾ

ಸಣ್ಣಪುಟ್ಟ ಅಸಮಾಧಾನ ಅಥವಾ ಭಿನ್ನಾಪ್ರಾಯಗಳು ಎದುರಾದಾಗಲೆಲ್ಲ 'ನಾವು Gen Z' (ಜೆನ್ ಝೀ) ಎಂದು ಹೇಳಿಕೊಳ್ಳುವುದು, 'ನನ್ನಪ್ಪ ಯಾರು ಗೊತ್ತಾ?' (ಜಾಂತೇ ನಹೀನ್ ಹೋ, ಮೇರಾ ಬಾಪ್ ಕೌನ್ ಹೈ) ಎಂಬ ಹಳೆಯ...

ಪಶ್ಚಿಮ ಬಂಗಾಳ | ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಗೆಲುವು

ವಿಧಾನಸಭಾ ಚುನಾವಣೆ ನಂತರ ಪಕ್ಷದಲ್ಲಿ ಉಂಟಾದ ಬಂಡಾಯ, ಪಕ್ಷಾಂತರಗಳು, ಕಾನೂನು ಪ್ರಕರಣಗಳು ಮತ್ತು ರಾಜಕೀಯ ಆರೋಪಗಳಿಂದ ಸಾಲು ಸಾಲು ಹಿನ್ನಡೆಗಳನ್ನು ಎದುರಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಕೊನೆಗೂ...

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...