ನಾಡಿನ ಹಲವೆಡೆ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ ಆಚರಣೆ; ಗಣ್ಯರ ಶುಭಾಶಯ

0
39
ನಾಡಿನ ಹಲವೆಡೆ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ ಆಚರಣೆ; ಗಣ್ಯರ ಶುಭಾಶಯ
ಫೋಟೋ ಕೃಪೆ: ಹರೀಶ್ ಟ್ವಿಟ್ಟರ್‌

ಕೊರೊನಾ ಸಾಂಕ್ರಾಮಿಕದ ನಡುವೆಯು ನಾಡಿನ ಹವವೆಡೆ ವರಮಹಾಲಕ್ಷ್ಮಿ ಹಬ್ಬವನ್ನು ಇಂದು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಶ್ರಾವಣ ಮಾಸದಲ್ಲಿ ಬರುವ ಈ ಹಬ್ಬದಲ್ಲಿ ಲಕ್ಷ್ಮಿ ದೇವಿಯನ್ನು ಪೂಜಿಸಿ ಕುಟುಂಬದ ಪ್ರಗತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಲಾಗುತ್ತದೆ. ಉತ್ತರ ಭಾರತದಲ್ಲಿ ಈ ಹಬ್ಬವನ್ನು ವ್ರತ ಮಾಡುವ ಮೂಲಕ ಆಚರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಹೂವು, ಹಂಪಲು ಮಾರಾಟ ಜೋರಾಗಿದ್ದು, ಜನರು ಬಾಳೆ ಗಿಡ, ಕಬ್ಬು, ಹೂವು ಹಣ್ಣುಗಳ ಖರೀದಿಯಲ್ಲಿ ತೊಡಗಿದ್ದರು.

ಆದರೆ ಕೊರೋನಾ ಹಿನ್ನಲೆಯಲ್ಲಿ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ತೀರಾ ಕಡಿಮೆಯಾಗಿದೆ. ಸದಾ ಭಕ್ತರಿಂದ ತುಂಬಿತುಳುಕುತ್ತಿದ್ದ ಹೆಚ್ಚಿನ ದೇವಸ್ಥಾನಗಳಲ್ಲಿ ಬೆರೆಳೆಣಿಕೆಯ ಭಕ್ತಾದಿಗಳು ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ವರಮಹಾಲಕ್ಷ್ಮಿ ಹಬ್ಬಕ್ಕೆ ಹಲವಾರು ಗಣ್ಯರು ಶುಭಾಶಯ ಕೋರಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, “ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಜಗನ್ಮಾತೆಯು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸೋಣ, ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ” ಎಂದು ಹಬ್ಬಕ್ಕೆ ಶುಭಹಾರೈಸಿದ್ದಾರೆ.

ಅಲ್ಲದೆ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಕೂಡಾ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. “ಶ್ರದ್ಧೆ, ಭಕ್ತಿಯಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸೋಣ. ಜಗತ್ತು ಕೊರೊನಾ ಇಂದ ಶೀಘ್ರ ಮುಕ್ತವಾಗಲಿ ಎಂದು ಎಲ್ಲರೂ ಈ ದಿನ ಪ್ರಾರ್ಥಿಸೋಣ. ತಮಗೆಲ್ಲರಿಗೂ ಹಬ್ಬದ ಶುಭಾಶಯಗಳು.” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್‌. ಕುಮಾರಸ್ವಾಮಿ, “ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು. ತಮ್ಮೆಲ್ಲರಿಗೂ ಲಕ್ಷ್ಮೀದೇವಿ ಸುಖ, ಸಮೃದ್ಧಿ ನೀಡಲಿ ಎಂದು ಕೇಳಿಕೊಳ್ಳುತ್ತೇನೆ. ಕೊರೊನಾ ಸಂಕಷ್ಟದ ಈ ಸಮಯದಲ್ಲಿ ನಾವೆಲ್ಲರೂ ನಮ್ಮ ಮನೆಯೊಳಗಡೆಯೇ ಇದ್ದು ಮನೆಯವರೊಂದಿಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸೋಣ.” ಎಂದು ಶುಭಕೋರಿದ್ದಾರೆ.


ಓದಿ: ಕೇರಳ ಹಾಗೂ ಕರ್ನಾಟಕದ ಕರಾವಳಿಯಾದ್ಯಂತ ಸರಳ ‘ಬಕ್ರೀದ್’ ಆಚರಣೆ


 

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here