Homeಮುಖಪುಟವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

ವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ವಾರಣಾಸಿಯ ಗಂಗಾನದಿಯ ಘಾಟ್‌ಗಳಲ್ಲಿ ಹಿಂದೂಯೇತರರು ಬರದಂತೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಬಲಪಂಥೀಯ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಇಬ್ಬರು ಸದಸ್ಯರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ದುಷ್ಕರ್ಮಿಗಳಿಂದ ತಲಾ 5 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಬರೆಸಿಕೊಂಡ ಬಳಿಕ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ದ್ವೇಷ ಹರಡಲು ಯತ್ನಿಸಿದ ಆರೋಪಿಗಳನ್ನು ಜೈಲಿಗೆ ಕಳುಹಿಸದ ಯುಪಿ ಪೊಲೀಸರ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿವೆ.

ವಿಎಚ್‌ಪಿ, ಬಜರಂಗದಳದ ಸ್ಥಳೀಯ ಪದಾಧಿಕಾರಿಗಳೆಂದು ಹೇಳಿಕೊಂಡ ರಂಜನ್ ಗುಪ್ತಾ ಮತ್ತು ನಿಖಿಲ್ ತ್ರಿಪಾಠಿ ಅಲಿಯಾಸ್ “ರುದ್ರ” ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಫೋಟೋಗಳು ಮತ್ತು ವಿಡಿಯೋಗಳ ಆಧಾರದ ಮೇಲೆ ಪೊಲೀಸರು ದುಷ್ಕರ್ಮಿಗಳನ್ನು ಪತ್ತೆ ಹಚ್ಚಿದ್ದರು. ಬಲಪಂಥೀಯ ಕಾರ್ಯಕರ್ತರೊಂದಿಗೆ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಹಾಕುತ್ತಿರುವವರ ಫೋಟೋಗಳನ್ನು ತ್ರಿಪಾಠಿ ಮತ್ತು ರುದ್ರ ಅವರು ತಮ್ಮ ಸ್ವಂತ ಫೇಸ್‌ಬುಕ್ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದರು.

ಈ ಕುರಿತು ‘ದಿ ವೈರ್‌’ ಸುದ್ದಿ ಜಾಲತಾಣದೊಂದಿಗೆ ಮಾತನಾಡಿರುವ ಭೇಲುಪುರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ರಮಾ ಕಾಂತ್ ದುಬೆ, “ಶಾಂತಿ, ನೆಮ್ಮದಿಯನ್ನು ಖಾತ್ರಿ ಮಾಡಿಕೊಳ್ಳಲು ತಲಾ 5 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಸಲ್ಲಿಸುವಂತೆ ತ್ರಿಪಾಠಿ ಮತ್ತು ರುದ್ರರಿಗೆ ಶುಕ್ರವಾರ ಸಮನ್ಸ್ ಜಾರಿ ಮಾಡಿದ್ದಾರೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 107 ಮತ್ತು 116ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿ ಸಹಾಯಕ ಪೊಲೀಸ್ ಕಮಿಷನರ್ (ಭೇಲುಪುರ) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವೈಯಕ್ತಿಕ ಬಾಂಡ್ ಸಲ್ಲಿಸಿದ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ ಇವರ ಬಂಧನದ ಸುದ್ದಿ ಮುಟ್ಟಿದ ಕೂಡಲೇ ಎರಡು ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಬಿಡುಗಡೆಗಾಗಿ ಘೋಷಣೆ ಕೂಗಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಗುಂಪೊಂದು ಕೆಲ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿತು.

“ಈ ಬಗ್ಗೆ ತನಿಖೆ ನಡೆಸುತ್ತಿದ್ದು ದುಷ್ಕರ್ಮಿಗಳ ವಿರುದ್ಧ ಅಗತ್ಯ ಕ್ರಮವನ್ನು ಪೊಲೀಸರು ಜರುಗಿಸಲಿದ್ದಾರೆ” ಎಂದು ಎಸಿಪಿ ಪ್ರವೀಣ್ ಕುಮಾರ್ ದಿ ವೈರ್‌ಗೆ ತಿಳಿಸಿದ್ದಾರೆ.

ಗಂಗಾನದಿಯ ದಡದಲ್ಲಿ ಕೋಮುದ್ವೇಶದ ಪೋಸ್ಟರ್‌ಗಳನ್ನು ಅಂಟಿಸಿದವರನ್ನು ಬಂಧಿಸುವಂತೆ ವಿರೋಧ ಪಕ್ಷಗಳು ಒತ್ತಡ ಹೇರಿದ ನಂತರ ಪೊಲೀಸರು ಕ್ರಮಕೈಗೊಂಡರು. “ವಾರಣಾಸಿಯಲ್ಲಿ ಗಂಗಾನದಿಯ ಘಾಟ್‌ಗಳಿಗೆ ಹಿಂದೂಯೇತರರು ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ. ಇದು ಎಚ್ಚರಿಕೆ, ವಿನಂತಿಯಲ್ಲ” ಎಂದು ಪೋಸ್ಟರ್‌‌ನಲ್ಲಿ ಬರೆಯಲಾಗಿತ್ತು. ವಾರಣಾಸಿಯು ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾಗಿದೆ.

ಈ ಪೋಸ್ಟರ್‌ಗಳನ್ನು ಜನವರಿ 6ರಂದು ಗಂಗಾ ನದಿಯ ಪಂಚಗಂಗಾ ಘಾಟ್, ರಾಮ್ ಘಾಟ್, ದಶಾಶ್ವಮೇಧ ಘಾಟ್, ಅಸ್ಸಿ ಘಾಟ್ ಮತ್ತು ಮಣಿಕರ್ಣಿಕಾ ಘಾಟ್‌ನಲ್ಲಿ ಹಾಕಲಾಗಿತ್ತು.

ಕಳೆದ ಕೆಲವು ತಿಂಗಳುಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಹಿಂದುತ್ವ ಗುಂಪುಗಳು ಅಲ್ಪಸಂಖ್ಯಾತ ವಿರೋಧಿ ಅಭಿಯಾನದಲ್ಲಿ ತೊಡಗಿಸಿಕೊಂಡಿವೆ. ಅದರ ಮುಂದುವರಿದ ಭಾಗವಾಗಿ ಈ ಪೋಸ್ಟರ್‌ಗಳನ್ನು ಹಾಕಲಾಗಿದೆ. ಉತ್ತರಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಹಾಕಲಾಗುತ್ತಿರುವ ಈ ಪೋಸ್ಟರ್‌ಗಳಿಗೆ ರಾಜಕೀಯ ಮಹತ್ವವಿದೆ ಎಂದು ಹಲವರು ನಂಬಿದ್ದಾರೆ.

ಚುನಾವಣಾ ಕಾಲದಲ್ಲಿ ಜನರನ್ನು ಕೋಮುವಾದದ ಆಧಾರದ ಮೇಲೆ ವಿಭಜಿಸಲು ಕೇಸರಿ ಬ್ರಿಗೇಡ್‌ ನಡೆಸಿರುವ ಪಿತೂರಿ ಇದೆಂದು ಪ್ರತಿಪಕ್ಷಗಳು ನಂಬಿವೆ. ಕಾಂಗ್ರೆಸ್ ಪಕ್ಷದ ನಿಯೋಗವು ವಾರಣಾಸಿ ಜಿಲ್ಲಾ ಅಧಿಕಾರಿಗಳನ್ನು ಭೇಟಿ ಮಾಡಿ ಪೋಸ್ಟರ್‌ಗಳನ್ನು ಹಾಕುತ್ತಿರುವ ಎಲ್ಲರನ್ನು ಜೈಲಿಗೆ ಹಾಕುವಂತೆ ಒತ್ತಾಯಿಸಿದೆ. ವಿಎಚ್‌ಪಿ ಮತ್ತು ಬಜರಂಗ ದಳದ ಕಾರ್ಯಕರ್ತರ ಬಿಡುಗಡೆಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಚೌಬೆ ಮಾತನಾಡಿ, ‘ಈ ಕಿಡಿಗೇಡಿಗಳ ಬಿಡುಗಡೆ ಇತರ ದ್ವೇಷಿಗಳಿಗೆ ನೆಮ್ಮದಿ ತಂದಿದೆ. ಪೊಲೀಸರ ಕ್ರಮ ಕೇವಲ ಕಣ್ಣೊರೆಸುವ ಕೆಲಸವಾಗಿದೆ ಎಂದು ಆರೋಪಿಸಿದ್ದಾರೆ.

ವಾರಣಾಸಿಯ ವಿವಿಧ ಪ್ರದೇಶಗಳಲ್ಲಿ ಬಲಪಂಥೀಯರು ನಡೆಸಿದ ಮೆರವಣಿಗೆಯಲ್ಲಿ ಕತ್ತಿಗಳನ್ನು ಪ್ರಯೋಗಿಸಲಾಗಿದೆ ಎಂದು ಕಾಂಗ್ರೆಸ್ ದೂರಿದೆ.


ಇದನ್ನೂ ಓದಿರಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...