Homeಮುಖಪುಟವಾರಣಾಸಿ: ಮೋದಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸೈನಿಕನ ಮನವಿ ತಿರಸ್ಕರಿಸಿದ ಸುಪ್ರೀಂ!

ವಾರಣಾಸಿ: ಮೋದಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸೈನಿಕನ ಮನವಿ ತಿರಸ್ಕರಿಸಿದ ಸುಪ್ರೀಂ!

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಿದ್ದ ಬಿಎಸ್‌ಎಫ್ ಸೈನಿಕ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸುಪ್ರೀಂ ಕೋರ್ಟ್‌ ಮೋರೆ ಹೋಗಿದ್ದರು.

- Advertisement -
- Advertisement -

2019 ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಿದ್ದ ಬಿಎಸ್‌ಎಫ್ ಸೈನಿಕ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸುಪ್ರೀಂ ಕೋರ್ಟ್‌ ಮೋರೆ ಹೋಗಿದ್ದರು. ಅಲ್ಲಿಯೂ ಇವರ ಮನವಿಯ ಅರ್ಜಿಯನ್ನು ತಿರಸ್ಕರಿಸಿಲಾಗಿದೆ.

ಈ ಪ್ರಕರಣದಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

ಇದನ್ನೂ ಓದಿ: ಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್ ಇತ್ಯಾದಿ

ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿ ತೇಜ್ ಬಹದ್ದೂರ್ ಅವರ ನಾಮಪತ್ರಗಳನ್ನು ಕಳೆದ ವರ್ಷ ಮೇ 1 ರಂದು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದರು.

ಇದನ್ನೂ ಓದಿ: ತೇಜ್ ಬಹದ್ದೂರ್ ಯಾರು? ಹಿನ್ನೆಲೆಯೇನು? ಪೂರ್ಣ ವಿವರ ತಿಳಿಯಿರಿ

ಸೇನೆಯಲ್ಲಿ ಆಹಾರ ಸರಿಯಾಗಿ ಒದಗಿಸುತ್ತಿಲ್ಲ ಎಂಬ ಕಾರಣಕ್ಕೆ ವೀಡಿಯೋ ಮಾಡಿದ್ದ ತೇಜ್ ಬಹದ್ದೂರ್ ಅವರನ್ನು 2017 ರಲ್ಲಿ ಸೇನೆಯಿಂದ ವಜಾಗೊಳಿಸಲಾಗಿತ್ತು. ನಂತರ ಅವರು ನರೇಂದ್ರ ಮೋದಿಯವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಚುನಾವಣಾ ಅಧಿಕಾರಿಗಳು ಇವರ ನಾಮಪತ್ರವನ್ನು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ನಾಮಪತ್ರ ತಿರಸ್ಕಾರದ ನಿರ್ಧಾರವನ್ನು ಎತ್ತಿಹಿಡಿಯಲಾಗಿತ್ತು.

ಇದನ್ನೂ ಓದಿ: Watch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ…

ಅರ್ಜಿದಾರರು ಈ ಹಿಂದೆ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು ನಂತರ ಎಸ್‌ಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು ಎಂದು ಬಹದ್ದೂರ್ ಪರ ವಕೀಲರು ಉನ್ನತ ನ್ಯಾಯಾಲಯದ ಮುಂದೆ ವಾದಿಸಿದ್ದರು.

ಇದನ್ನೂ ಓದಿ: ಮೋದಿ ವಿರುದ್ಧ ಸ್ಪರ್ಧಿಸಲು ತೇಜ್ ಬಹದ್ದೂರ್ ಯಾದವ್‍ಗೆ ಟಿಕೆಟ್ ನೀಡಿದ ಸಮಾಜವಾದಿ ಪಕ್ಷ

ಹೈಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ ವಕೀಲರು, “ಬಹದ್ದೂರ್ ಅವರ ನಾಮಪತ್ರವನ್ನು ಬಾಹ್ಯ ಕಾರಣಗಳಿಗಾಗಿ ತಿರಸ್ಕರಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ನಾಮಪತ್ರವನ್ನು ತಿರಸ್ಕರಿಸಿದ ಚುನಾವಣಾ ಅಧಿಕಾರಿಗಳು, “ತೇಜ್ ಬಹದ್ದೂರ್ ಅವರನ್ನು ಭ್ರಷ್ಟಾಚಾರ/ರಾಜ್ಯ ದ್ರೋಹ ಎಸಗಿದ್ದಕ್ಕಾಗಿ ವಜಾಗೊಳಿಸಿಲ್ಲ ಎಂದು ನೀಡುವ ಪ್ರಮಾಣ ಪತ್ರವನ್ನು ನಾಮಪತ್ರದೊಟ್ಟಿಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರಲಿಲ್ಲ” ಎಂದು ಹೇಳಿದ್ದರು.


ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...