Homeಕೊರೊನಾರಾತ್ರಿ ಕರ್ಫ್ಯೂ, ಬೆಳಗ್ಗೆ ಚುನಾವಣಾ ರ್‍ಯಾಲಿಯಲ್ಲಿ ಸಾವಿರಾರು ಮಂದಿ: ಬಿಜೆಪಿ ವಿರುದ್ಧ ಸಂಸದ ವರುಣ್ ಗಾಂಧಿ...

ರಾತ್ರಿ ಕರ್ಫ್ಯೂ, ಬೆಳಗ್ಗೆ ಚುನಾವಣಾ ರ್‍ಯಾಲಿಯಲ್ಲಿ ಸಾವಿರಾರು ಮಂದಿ: ಬಿಜೆಪಿ ವಿರುದ್ಧ ಸಂಸದ ವರುಣ್ ಗಾಂಧಿ ಟೀಕೆ

- Advertisement -
- Advertisement -

ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್, ಓಮಿಕ್ರಾನ್ ರೂಪಾಂತರಿ ತಡೆಗಟ್ಟಲು ನೈಟ್ ಕರ್ಫ್ಯೂ ವಿಧಿಸಿ, ಚುನಾವಣಾ ರ್‍ಯಾಲಿಗಳಲ್ಲಿ ಸಾವಿರಾರು ಜನರನ್ನ ಸೇರಿಸುತ್ತಿರುವ ಉತ್ತರ ಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳ ನಿರ್ಧಾರವನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಟೀಕಿಸಿದ್ದಾರೆ.

ಹರಡುತ್ತಿರುವ ಸೋಂಕನ್ನು ತಡೆಗಟ್ಟುವುದು ನಮ್ಮ ಆದ್ಯತೆಯೇ ಅಥವಾ ದೊಡ್ಡ ದೊಡ್ಡ ಚುನಾವಣಾ ರ್‍ಯಾಲಿಗಳಲ್ಲಿ ತೊಡಗಿ ಶಕ್ತಿ ಪ್ರದರ್ಶಿಸುವುದು ಮುಖ್ಯವೇ ಎಂಬುದನ್ನು ನಿರ್ಧರಿಸಬೇಕು ಎಂದು ಹೇಳಿದ್ದಾರೆ.

ಉತ್ತರಾಖಂಡ, ಉತ್ತರ ಪ್ರದೇಶ ಚುನಾವಣೆಯಲ್ಲಿ ತೊಡಗಿಕೊಂಡಿರುವ ನಾಯಕರು ದೊಡ್ಡ ದೊಡ್ಡ ರ್‍ಯಾಲಿಗಳನ್ನು ನಡೆಸುತ್ತಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಧಿಸಿದ್ದು, ಹಗಲು ಹೊತ್ತಿನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಧರಮ್ ಸಂಸದ್‌ನಲ್ಲಿ ಗಾಂಧಿಜಿಗೆ ಅವಹೇಳನ; ಬಲಪಂಥೀಯ ಸ್ವಾಮಿ ವಿರುದ್ದ FIR

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಸಂಸದ ವರುಣ್ ಗಾಂಧಿ, “ಹಗಲು ರ್‍ಯಾಲಿಗಳಿಗೆ ಲಕ್ಷಾಂತರ ಜನರನ್ನು ಒಟ್ಟುಗೂಡಿಸಿ ನಂತರ ರಾತ್ರಿಯಲ್ಲಿ ಕರ್ಫ್ಯೂ ಹೇರುವುದು, ಸಾಮಾನ್ಯ ಜನರಿಗೆ ಅರ್ಥವಾಗುತ್ತಿಲ್ಲ” ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶದ ಸೀಮಿತ ಆರೋಗ್ಯ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಆದ್ಯತೆಯು ಕೊರೊನಾ ವೈರಸ್‌ನ ಅಪಾಯಕಾರಿ ಓಮಿಕ್ರಾನ್ ರೂಪಾಂತರವನ್ನು ತಡೆಯುವುದೋ ಅಥವಾ ಚುನಾವಣೆಯ ಸಮಯದಲ್ಲಿ ಶಕ್ತಿ ಪ್ರದರ್ಶನದಲ್ಲಿ ತೊಡಗಿಸಿಕೊಳ್ಳುವುದೋ ಎಂಬುದು ಪ್ರಾಮಾಣಿಕವಾಗಿ ನಿರ್ಧರಿಸಬೇಕು” ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೇ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ದಂಡು ಯುಪಿಯಲ್ಲಿದೆ. ಎಲ್ಲಾ ನಾಯಕರು ಬಹಿರಂಗ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶದಲ್ಲಿನ ಲಿಂಗ ಸಮಾನತೆಯ ಕುರಿತು ತನ್ನ ಪ್ರಚಾರವನ್ನು ಕೇಂದ್ರೀಕರಿಸಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಯಂತ್ರಿಸಬೇಕೆಂದು ಆಗ್ರಹಿಸುತ್ತಿದೆ. ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಲಕ್ನೋದಲ್ಲಿ “ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ” ಎಂಬ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.


ಇದನ್ನೂ ಓದಿ: “ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ”: ಯುಪಿ ಕಾಂಗ್ರೆಸ್ ಅಭಿಯಾನಕ್ಕೆ ಪ್ರಿಯಾಂಕಾ ಗಾಂಧಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...