Homeಕರ್ನಾಟಕವರುಣಾ: ಗೆಲುವಿನತ್ತ ಸಿದ್ದರಾಮಯ್ಯ; ಸೋಮಣ್ಣನಿಗೆ ಮುಖಭಂಗ

ವರುಣಾ: ಗೆಲುವಿನತ್ತ ಸಿದ್ದರಾಮಯ್ಯ; ಸೋಮಣ್ಣನಿಗೆ ಮುಖಭಂಗ

- Advertisement -
- Advertisement -

ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾದ ವರುಣಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು 8,000 ಮತಗಳ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ.

ವರುಣಾ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ವಿ.ಸೋಮಣ್ಣನವರಿಗೆ ಎರಡು ಕ್ಷೇತ್ರದಲ್ಲೂ ಮುಖಭಂಗವಾಗಿದೆ. ಎರಡರಲ್ಲೂ ಹಿನ್ನಡೆ ಅನುಭವಿಸಿದ್ದಾರೆ.

ಲಿಂಗಾಯತ ಮತದಾರರು ಹೆಚ್ಚಿದ್ದಾರೆಂಬ ಕಾರಣಕ್ಕೆ ಎರಡು ಕ್ಷೇತ್ರಗಳಲ್ಲಿ ಸೋಮಣ್ಣನವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ಆದರೆ ಜಾತಿ ಲೆಕ್ಕಾಚಾರಗಳು ತಲೆಕೆಳಗಾಗಿದ್ದು ಸಿದ್ದರಾಮಯ್ಯನವರು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳನ್ನು ವರುಣಾ ಮತದಾರರು ಗುರುತಿಸಿದ್ದಾರೆ. ಚಾಮರಾಜನಗರದಲ್ಲಿ ಪುಟ್ಟರಂಗಶೆಟ್ಟಿಯವರು ತಮ್ಮ ಪ್ರಾಬಲ್ಯವನ್ನು ಮತ್ತೆ ತೋರಿಸಿದ್ದು ಸತತ ನಾಲ್ಕನೇ ಬಾರಿಗೆ ಗೆಲುವಿನತ್ತ ದಾಪುಗಾಲು ಇರಿಸಿದ್ದಾರೆ.

ಸೋಮಣ್ಣನವರು ಕಾಂಗ್ರೆಸ್‌ಗೆ ಸೇರುತ್ತಾರೆಂಬ ಸುದ್ದಿ ಹಬ್ಬಿತ್ತು. ಆದರೆ ಕೊನೆಯಲ್ಲಿ ಬಿಜೆಪಿಯಲ್ಲೇ ಉಳಿದರು. ಪನಿಷ್‌ಮೆಂಟ್‌ ಎಂಬಂತೆ ವರುಣಾ ಮತ್ತು ಚಾಮರಾಜನಗರಕ್ಕೆ ನಿಲ್ಲಿಸಿದ ಬಿಜೆಪಿ ಹೈಕಮಾಂಡ್‌ – ಸೋಮಣ್ಣನವರ ರಾಜಕೀಯಕ್ಕೆ ಮುಳುವಾಗಿದೆ.

ರಾಜ್ಯ ರಾಜಕಾರಣದಲ್ಲಿ ಪ್ರಭಾವಿ ನಾಯಕರಾಗಿ ಬೆಳೆದಿರುವ ಸಿದ್ದರಾಮಯ್ಯನವರನ್ನು ವರುಣಾ ಜನತೆ ಈವರೆಗೆ ಕೈಬಿಟ್ಟಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯಷ್ಟೇ ಇಲ್ಲಿ ಸದಾ ಸ್ಪರ್ಧೆ ಏರ್ಪಡುತ್ತಾ ಬಂದಿದೆ. ಜೆಡಿಎಸ್ ಪಕ್ಷ ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ. 2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿಗೆ ಹಾರಿದ್ದ ಎಲ್.ರೇವಣ್ಣಸಿದ್ದಯ್ಯ ಅವರು ಸಿದ್ದರಾಮಯ್ಯನವರ ಪ್ರತಿಸ್ಪರ್ಧಿಯಾಗಿದ್ದರು. ಆಡಳಿತ ವರ್ಗದ ಹಿನ್ನೆಲೆಯ ಎಲ್.ರೇವಣ್ಣ ಸಿದ್ದಯ್ಯನವರನ್ನು ಕ್ಷೇತ್ರದ ಜನತೆ ಕೈಹಿಡಿಯಲಿಲ್ಲ. 18,837 ಮತದಂತರದಲ್ಲಿ ಸಿದ್ದರಾಮಯ್ಯ (71,908) ಗೆದ್ದರು. 2013ರ ಚುನಾವಣೆಯ ವೇಳೆಗೆ ಬಿಜೆಪಿ ಒಡೆದುಹೋಗಿತ್ತು. ಯಡಿಯೂರಪ್ಪನವರು ಕೆಜೆಪಿಯನ್ನು ಕಟ್ಟಿದ್ದು ಬಿಜೆಪಿಯ ಮತಗಳ ವಿಭಜನೆಗೆ ಕಾರಣವಾಯಿತು. ಕೆಜೆಪಿಯಿಂದ ಸ್ಪರ್ಧಿಸಿದ್ದ ಕಾಪು ಸಿದ್ದಲಿಂಗಸ್ವಾಮಿ ಅವರು 54,744 ಮತಗಳನ್ನು ಪಡೆದರಷ್ಟೇ. 84,385 ಮತಗಳನ್ನು ಪಡೆದ ಸಿದ್ದರಾಮಯ್ಯ 29,641 ಮತಗಳ ಬೃಹತ್ ಅಂತರದಲ್ಲಿ ಗೆದ್ದು ರಾಜ್ಯದ ಮುಖ್ಯಮಂತ್ರಿಯೂ ಆದರು. 2018ರಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಗೆದ್ದಿದ್ದರು. ಈ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ವಕ್ಷೇತ್ರಕ್ಕೆ ಮರಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...