Homeಮುಖಪುಟಹಿಮಾಚಲ ಪ್ರದೇಶದಲ್ಲಿ ಮುಂದುವರೆದ ವರುಣಾರ್ಭಟ: ಮೃತರ ಸಂಖ್ಯೆ 74ಕ್ಕೆ ಏರಿಕೆ

ಹಿಮಾಚಲ ಪ್ರದೇಶದಲ್ಲಿ ಮುಂದುವರೆದ ವರುಣಾರ್ಭಟ: ಮೃತರ ಸಂಖ್ಯೆ 74ಕ್ಕೆ ಏರಿಕೆ

- Advertisement -
- Advertisement -

ಹಿಮಾಚಲ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಶಿಮ್ಮಾದ ಸಮ್ಮರ್ ಹಿಲ್ ಪ್ರದೇಶದಲ್ಲಿ ಕುಸಿದು ಬಿದ್ದ ಶಿವನ ದೇವಾಲಯದ ಅವಶೇಷಗಳಡಿ ಮತ್ತೊಬ್ಬ ವ್ಯಕ್ತಿಯ ಶವ ಪತ್ತೆಯಾಗಿದ್ದು, ಚಂಬಾದಲ್ಲಿ ಇನ್ನಿಬ್ಬರು ಸಾವಿಗೀಡಾಗಿದ್ದಾರೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಅವಶೇಷಗಳಲ್ಲಿ ಇನ್ನೂ ಹಲವರು ಹೂತುಹೋಗಿರುವ ಶಂಕೆ ಇದೆ. ಹಿಮಾಚಲ ಪ್ರದೇಶದಲ್ಲಿ ಮಳೆಯ ಅರ್ಭಟಕ್ಕೆ ಈವರೆಗೂ ಸತ್ತವರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮುಂಗಾರು ಆರಂಭವಾದ 55 ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ 113 ಕಡೆ ಭೂಕುಸಿತು ಸಂಭವಿಸಿದ್ದು, ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯುಡಿ) 2,491 ಕೋಟಿ ರೂ. ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) 1,000 ಕೋಟಿ ರೂ. ನಷ್ಟವಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

”ಶಿಮ್ಲಾದ ಸಮ್ಮ‌ರ್‌ಹಿಲ್, ಫಾಗಲಿ ಮತ್ತು ಕೃಷ್ಣನಗರದಲ್ಲಿ ಸಂಭವಿಸಿದ ಭೂಕುಸಿತದ ಮೂರು ಘಟನೆಗಳಲ್ಲಿ ಸಾವಿನ ಸಂಖ್ಯೆ 21ಕ್ಕೆ ತಲುಪಿದೆ” ಎಂದು ಶಿಮ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ ತಿಳಿಸಿದ್ದಾರೆ.

ಸಮ್ಮರ್ ಹಿಲ್ ಮತ್ತು ಕೃಷ್ಣನಗರ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಈವರೆಗೆ ಸಮ್ಮರ್ ಹಿಲ್‌ನಲ್ಲಿ 14 ಶವಗಳು, ಫಾಗಲಿಯಲ್ಲಿ ಐದು ಮತ್ತು ಕೃಷ್ಣನಗರದಲ್ಲಿ ಎರಡು ಶವಗಳನ್ನು ಹೊರ ತೆಗೆಯಲಾಗಿದೆ ಎಂದು ಅವರು ಹೇಳಿದರು.

ಸೋಮವಾರ ಭೂಕುಸಿತ ಸಂಭವಿಸಿದಾಗ ಶಿವ ದೇವಸ್ಥಾನದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಭಾನುವಾರದಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಿಮ್ಲಾ ಸೇರಿ ಹಲವು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ.

ಹಲವು ರಸ್ತೆಗಳು ಅಸ್ತವ್ಯಸ್ತಗೊಂಡಿದ್ದು, ಆಗಾಗ್ಗೆ ಭೂಕುಸಿತಗಳು ಸಂಭವಿಸುತ್ತಿರುವುದರಿಂದ ಶಿಮ್ಲಾ ನಗರ ವಿಧಾನಸಭಾ ವಿಭಾಗದಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಅಧಿಕಾರಿಗಳು ಗುರುವಾರ ಆದೇಶ ಹೊರಡಿಸಿದ್ದಾರೆ. ಜುಲೈ ಮತ್ತು ಈ ವಾರದಲ್ಲಿ ಸುರಿದ ಭಾರಿ ಮಳೆಯಿಂದ ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿ ನಷ್ಟ ಆಗಿರುವ ಅಂದಾಜು ಇದೆ. ಹಾನಿಗೊಳಗಾದ ಮೂಲಸೌಕರ್ಯ ಮರುನಿರ್ಮಾಣಕ್ಕೆ ಒಂದು ವರ್ಷ ಬೇಕಾಗಲಿದೆ ಎಂದು ಮುಖ್ಯಮಂತ್ರಿ ಸುಂದರ್ ಸಿಂಗ್ ಸುಖು ತಿಳಿಸಿದ್ದಾರೆ.

ಇದನ್ನೂ ಓದಿ: ಸುಶಿಕ್ಷಿತ ರಾಜಕಾರಣಿಗಳಿಗೆ ಮತ ನೀಡಬೇಕು ಎಂದ ಶಿಕ್ಷಕರನ್ನು ವಜಾ ಮಾಡಿದ ಅನ್‌ಅಕಾಡೆಮಿ ಆನ್ಲೈನ್‌ ಸಂಸ್ಥೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...