Homeಕರ್ನಾಟಕರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ನಾಲ್ವರ ಸಾವು

ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ: ನಾಲ್ವರ ಸಾವು

- Advertisement -
- Advertisement -

ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ನೆರೆ ಪರಿಸ್ಥಿತಿ ಉಂಟಾಗಿದೆ ಕೆಲವು ಗ್ರಾಮಗಳು, ರಸ್ತೆಗಳು ಜಲಾವೃತವಾಗಿದ್ದು, ಸೇತುವೆಗಳು ಮುಳುಗಡೆಯಾಗಿವೆ. ಇದರ ಪರಿಣಾಮ ಅನೇಕ ಕಡೆಗಳಲ್ಲಿ ಸಂಪರ್ಕ ಕಡಿತವಾಗಿದೆ.

ಅತಿಯಾದ ಮಳೆಯಿಂದಾಗಿ ಅವಘಡಗಳೂ ಸಂಭವಿಸಿದ್ದು, ಸೋಮವಾರ ರಾಜ್ಯದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಒಬ್ಬರು ಜಲಪಾತದಲ್ಲಿ ಕೊಚ್ಚಿ ಹೋಗಿದ್ದಾರೆ ಕೆಲವೆಡೆ ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃತಿಯಾಗಿದೆ. ಇನ್ನೂ ಕೆಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ವಿದ್ಯುತ್‌ ಕಂಬಗಳು ಧರೆಗುರುಳಿ, ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ಳಾಡಿಯ ಗೋಕುಲ ದಾಸ್‌ ಪ್ರಭು (53) ಸೋಮವಾರ ಕರ್ಕುಂಜೆಯ ತೋಟಿಗೆ ಬಿದ್ದು ಮೃತಪಟ್ಟಿದ್ದಾರೆ. ಹೆಬ್ರಿ ತಾಲೂಕು ಶೇಡಿಮನೆಯ ಬಡಬೈಲು ದರಕಾಶು ಎಂಬಲ್ಲಿ ಬಾಲಕಿ ರಚನಾ (12) ಭಾನುವಾರ ಹೊಳೆಗೆ ಬಿದ್ದು ಮೃತಪಟ್ಟಿದ್ದಾಳೆ.

ಭದ್ರಾವತಿಯ ಶರತ್‌ ಕುಮಾರ್ (23) ಎಂಬುವವರು ಬೈಂದೂರು ತಾಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಕೊಚ್ಚಿ ಹೋಗಿದ್ದಾರೆ. ಬಂಡೆಯ ತುದಿಯಲ್ಲಿ ನಿಂತು ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಬಿರಾಳ(ಬಿ)ಯಲ್ಲಿ ಎರಡು ಅಂತಸ್ತಿನ ಮನೆ ಕುಸಿದು ಬಸಮ್ಮ ಬಸವರಾಜ (35) ಮೃತಪಟ್ಟಿದ್ದಾರೆ. ಮನೆಯಲ್ಲಿ ಬಸಮ್ಮ ಹಾಗೂ ಅವರ ಪುತ್ರಿ ಅಶ್ವಿನಿ ಇದ್ದರು. ಮನೆ ಕುಸಿಯುತ್ತಿರುವ ಸಪ್ಪಳ ಕೇಳುತ್ತಿದ್ದಂತೆಯೇ ಪುತ್ರಿ ಅಶ್ವಿನಿ ಓಡಿ ಹೊರಗೆ ಬಂದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಕೋಡಿ, ಮರವಂತೆಯಲ್ಲಿ ಕಡಲ್ಕೂರೆತ ಮುಂದುವರಿದಿದೆ. ಮಲ್ಪೆ, ಪಡುಕರೆ, ಪಡುಬಿದ್ರಿ, ಕಾಪು, ಕೋಡಿ ಸೀ ವಾಕ್‌ನಲ್ಲಿ ಅಲೆಗಳು ಹೆಚ್ಚಾಗಿದ್ದು, ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಹಲವೆಡೆ ಕೃಷಿ ಭೂಮಿ ಸಹಿತ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಒಟ್ಟು 41 ಮನೆಗಳಿಗೆ ಹಾನಿಯಾಗಿದೆ. 230ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 24 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದೆ. ಬೃಹತ್ ಮರಗಳು ಬುಡ ಸಹಿತ ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಶಂಕರನಾರಾಯಣ, ಈ ಕಾಪು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮೆಸ್ಕಾಂ ಇಲಾಖೆಗೆ ಹಾನಿಯಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ.

ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಹಲವಾರು ಹಳ್ಳ-ಕೊಳ್ಳಗಳಲ್ಲಿ ನೀರು ನುಗ್ಗಿದೆ. ಹಾಗಾಗಿ ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿರಲು ಎಚ್ಚರಿಕೆ ನೀಡಲಾಗಿದೆ.

ಕಲಬುರಗಿಯ ಮಿಸ್ಸಾ ನಗರದ ನಿವಾಸಿ ಮಹಬೂಬ್‌ ಪಾಷಾ ಅವರ ಪುತ್ರ ಮಹಮದ್‌ ನಹೀಮ (4) ಮೃತ ಬಾಲಕ ಚಿಂಚೋಳಿ, ಚಿತ್ತಾಪುರ ಹಾಗೂ ಕಮಲಾಪುರ ತಾಲ್ಲೂಕುಗಳಲ್ಲಿ ರಾತ್ರಿ ಭಾರಿ ಮಳೆಯಾಗಿದೆ. ನೀರು ತುಂಬಿದ ಗುಂಡಿಯಲ್ಲಿ ಬಿದ್ದು ನಾಲ್ಕು ವರ್ಷದ ಬಾಲಕ ಸಮ್ಮತಪಟ್ಟಿದ್ದಾನೆ.

ಚಿಂಚೋಳಿ, ಚಿತ್ತಾಪುರ ಹಾಗೂ ಕಮಲಾಪುರ ತಾಲ್ಲೂಕುಗಳಲ್ಲಿ ರಾತ್ರಿ ಭಾರಿ ಮಳೆಯಾಗಿದೆ. ಚಿಂಚೋಳಿ ತಾಲ್ಲೂಕಿನ ದೇಗಲಮಡಿ, ಕೊಳ್ಳೂರು, ನಾಗಾಈದಲಾಯಿ ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ನಿರಂತರ ಮಳೆಗೆ. ಉತ್ತರಕನ್ನಡ ಜಿಲ್ಲೆಯ ಅಘನಾಶಿನಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕುಮಟಾ ತಾಲ್ಲೂಕಿನ ಹೆಗಡೆ, ಮುರೂರು, ಮಣಕಿ, ದಿವಗಿ ಗ್ರಾಮಗಳು ಜಲಾವೃತಗೊಂಡಿವೆ. ಹೊನ್ನಾವರದ ಗುಂಡಬಾಳ ನದಿ ಪಾತ್ರದಲ್ಲೂ ನೆರೆ ಸ್ಥಿತಿ ಮುಂದುವರಿದಿದೆ.

ಕೊಡಗಿನ ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದ್ದು, ಭಗಂಡೇಶ್ವರ ದೇಗುಲದ ಮುಖ್ಯದ್ವಾರದ ಎರಡು ಮೆಟ್ಟಿಲುಗಳವರೆಗೆ ನೀರು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಭಾಗಮಂಡಲದಲ್ಲಿ ಕಾಳಜಿ ಕೇಂದ್ರ ತೆರೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ. ಎನ್‌ಆರ್ ತಂಡ ಭಾಗಮಂಡಲಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ ಕೆಲವೆಡೆ ಶಾಲೆ- ಕಾಲೇಜುಗಳಿಗೆ ಇಂದು ರಜೆ ನಿರಂತರ ಮಳೆಯಾಗುತ್ತಿರುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಹಾಗೂ ಹಾಸನ ಜಿಲ್ಲೆಯ ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲ್ಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಯಾ ಜಿಲ್ಲಾಡಳಿತಗಳು ಮಂಗಳವಾರ ರಜೆ ಘೋಷಿಸಿವೆ.

ಇದನ್ನೂ ಓದಿ: ಭಾರೀ ಮಳೆಗೆ ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...